LSG vs RCB: ವಿರಾಟ್ ಕೊಹ್ಲಿ vs ನವೀನ್ ಉಲ್ ಹಕ್: ಕಾಲಡಿಯ ಮಣ್ಣು ಕಿತ್ತು ಬಿಸಾಡಿದ ವಿರಾಟ್: ವಿಡಿಯೋ
ಲಕ್ನೋ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಸೆಣೆಸಾಟ ಸಾಕಷ್ಟು ರೋಚಕ ಕ್ಷಣಗಳಿಗೆ ಸಾಕ್ಷಿಯಾಗಿದ್ದು. ಲೋ ಸ್ಕೋರಿಂಗ್ ಪಂದ್ಯವಾಗಿದ್ದ ಈ ಪಂದ್ಯದ ಹಲವು ನಾಟಕೀಯ ಘಟನೆಗಳಿಗೂ ಸಾಕ್ಷಿಯಾಗಿತ್ತು. ಇದರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ನವೀನ್ ಉಲ್ ಹಕ್ ಹಾಗೂ ವಿರಾಟ್ ಕೊಹ್ಲಿ ನಡುವಿನ ಮಾತಿನ ಚಕಮಕಿ ಕೂಡ ಒಂದು. ಈ ಘಟನೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರವಾಗಿ ನವೀನ್ ಉಲ್ ಹಕ್ ಬ್ಯಾಟಿಂಗ್ ನಡೆಸುತ್ತಿದ್ದ ಸಂದರ್ಭದಲ್ಲಿ ನಡೆದಿತ್ತು. ಈ ಘಟನೆಯ ಕಾವು ಪಂದ್ಯದ ಮುಕ್ತಾಯದ ಬಳಿಕ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವಿನ ಮಾತಿನ ಚಕಮಕಿಯ ಹಂತದವರೆಗೂ ಮುಂದುವರಿದಿತ್ತು.
ನವೀನ್ ಉಲ್ ಹಕ್ ಬ್ಯಾಟಿಂಗ್ ನಡೆಸುತ್ತಿದ್ದಾಗ ವಿರಾಟ್ ಕೊಹ್ಲಿ ಸ್ಲೆಡ್ಲ್ ಮಾಡುವ ಮೂಲಕ ಕೆರಳಿಸಿದ್ದಾರೆ. ಈ ಸಂದರ್ಭದಲ್ಲಿ ನವೀನ್ ಉಲ್ ಹಕ್ ಕೂಡ ಪ್ರತಿಕ್ರಿಯಿಸಿದ್ದಾರೆ. ಬಳಿಕ ಮಾತಿಗೆ ಮಾತು ಬೆಳೆಯಿತು. ಈ ಹಂತದಲ್ಲಿ ವಿರಾಟ್ ಕೊಹ್ಲಿ ನವೀನ್ ಉಲ್ ಹಕ್ ಅವರಲ್ಲಿ ಏನನ್ನೋ ಹೇಳುತ್ತಾ ಶೂ ಕೆಳಗಿದ್ದ ಮಣ್ಣನ್ನು ಕಿತ್ತು ಬಿಸಾಡದರು. ಈ ಸಂದರ್ಭದಲ್ಲಿ ಅಂಪೈರ್‌ಗಳು ಧಾವಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ನಡೆಸಿದ್ದಾರೆ.

ಇನ್ನು ಈ ಘಟನೆ ಅಲ್ಲಿಗೆ ನಿಲ್ಲಲಿಲ್ಲ. ಆರ್‌ಸಿಬಿ ಈ ಪಂದ್ಯವನ್ನು 18 ರನ್‌ಗಳ ಅಂತರದಿಂದ ಗೆದ್ದ ಬಳಿಕ ಎರಡು ತಂಡಗಳ ಆಟಗಾರು ಕೈಕುಲುಕುವ ಸಂದರ್ಭದಲ್ಲಿ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ಮಾತಿನ ಚಕಮಕಿಯಲ್ಲಿ ತೊಡಗಿಸಿಕೊಂಡರು. ನಾಯಕ ಫಾಫ್ ಡು ಪ್ಲೆಸಿಸ್ ವಿರಾಟ್ ಕೊಹ್ಲಿಯನ್ನು ತಡೆದರೂ ಈ ಹಂತದಲ್ಲಿಯೂ ವಾತಾವರಣ ಕಾವೇರಿತ್ತು.
ಅದಾದ ಬಳಿಕ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಮಧ್ಯೆ ಕೆಲ ಕಾಲ ಮಾತಿನ ಚಕಮಕಿ ನಡೆಯಿತು. ವಿರಾಟ್ ಕೊಹ್ಲಿ ಎದುರಾಳಿ ತಂಡದ ಆಟಗಾರ ಕೇಲ್ ಮೇಯರ್ಸ್ ಜೊತೆಗೆ ಮಾತನಾಡುತ್ತ ಮೈದಾನದಿಂದ ಹೊರಗಡೆಗೆ ಧಾವಿಸುತ್ತಿದ್ದರು. ಆ ಸಂದರ್ಭದಲ್ಲಿ ಕೇಲ್ ಮೇಯರ್ಸ್ ಸನಿಹಕ್ಕೆ ಬಂದ ಎಲ್‌ಎಸ್‌ಜಿ ಮೆಂಟರ್ ಗೌತಮ್ ಗಂಭೀರ್ ಕೊಹ್ಲಿಯ ಜೊತೆಗೆ ಮಾತು ಮುಂದುವರಿಸದಂತೆ ಕೇಲ್ ಮೇಯರ್ಸ್ ಅವರನ್ನು ತಡೆದು ದೂರಕ್ಕೆ ಎಳೆದೊಯ್ದರು. ನಂತರ ಕೊಹ್ಲಿ ಹಾಗೂ ಗಂಭೀರ್ ಪರಸ್ಪರ ಮಾತಿನ ಚಕಮಕಿಗೆ ನಿಂತರು.
ಮೂವರಿಗೂ ದಂಡದ ಬರೆ: ಇನ್ನು ಈ ಪಂದ್ಯದಲ್ಲಿ ಮಾತಿನ ಚಕಮಕಿ ನಡೆಸಿದ ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಹಾಗೂ ನವೀನ್ ಉಲ್ ಹಕ್ ಮೂವರಿಗೂ ಐಪಿಎಲ್ ದಂಡ ವಿಧಿಸಿದೆ. ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್‌ಗೆ ಪಂದ್ಯದ ಸಂಭಾವನೆಯ ಶೇಕಡಾ 100ರಷ್ಟು ದಂಡ ವಿಧಿಸಲಾಗಿದೆ. ಇನ್ನು ನವೀನ್ ಉಲ್ ಹಕ್‌ಗೆ ಸಂಭಾವನೆಯ ಶೇಕಾ 50ರಷ್ಟು ದಂಡ ವಿಧಿಸಲಾಗಿದೆ.
ಐದನೇ ಗೆಲುವು ಸಾಧಿಸಿದ ಆರ್‌ಸಿಬಿ
ಇನ್ನು ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಐದನೇ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಸೋಲು ಅನುಭವಿಸಿದ್ದ ಆರ್‌ಸಿಬಿ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನ ಮೈದಾನದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಆರ್‌ಸಿಬಿ 5ನೇ ಸ್ಥಾನಕ್ಕೇರಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications