Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs RR IPL 2024: ಲಕ್ನೋ ಮಣಿಸಿ ಪ್ಲೇಆಫ್‌ಗೆ ಎಂಟ್ರಿ ಕೊಡುತ್ತಾ ರಾಜಸ್ಥಾನ್?; ಟಾಸ್ ವರದಿ, ಆಡುವ 11ರ ಬಳಗ

ಶನಿವಾರ, ಏಪ್ರಿಲ್ 27ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 44ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪ್ರವಾಸಿ ರಾಜಸ್ಥಾನ್ ರಾಯಲ್ಸ್ ತಂಡಗಳು ಮತ್ತೊಂದು ರೋಚಕ ಕಾಳಗದಲ್ಲಿ ಸೆಣಸಾಡುತ್ತಿವೆ.

ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಮಾಡಲಿದೆ.

LSG vs RR IPL 2024 Lucknow Super Giants vs Rajasthan Royals Match Toss Report Playing 11 Details

ರಾಜಸ್ಥಾನ್ ರಾಯಲ್ಸ್ ತಂಡ ಶನಿವಾರದಂದು ಅದ್ಭುತ ಫಾರ್ಮ್‌ನಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿದರೆ, ಐಪಿಎಲ್ 2024ರ ಪ್ಲೇಆಫ್‌ನಲ್ಲಿ ಒಂದು ಹೆಜ್ಜೆ ಮೂಡಿಸಲು ಸಾಧ್ಯವಾಗುತ್ತದೆ.

ಎರಡೂ ತಂಡಗಳು ಅಂಕಪಟ್ಟಿಯಲ್ಲಿ ಮೊದಲ ನಾಲ್ಕರಲ್ಲಿದ್ದು, ರಾಜಸ್ಥಾನ್ ರಾಯಲ್ಸ್ ಆಡಿದ 8 ಪಂದ್ಯಗಳಲ್ಲಿ 7 ಗೆಲುವು ಮತ್ತು 1 ಸೋಲಿನೊಂದಿಗೆ ಈಗಾಗಲೇ 14 ಅಂಕಗಳನ್ನು ಹೊಂದಿ ಅಗ್ರಸ್ಥಾನದಲ್ಲಿದೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿದ 8 ಪಂದ್ಯಗಳಲ್ಲಿ 5 ಗೆಲುವು ಮತ್ತು 3 ಸೋಲುಗಳನ್ನು ಕಂಡಿದ್ದು 10 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ.

ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ನಾಲ್ಕು ಮುಖಾಮುಖಿಯಲ್ಲಿ ಮೂರು ಪಂದ್ಯಗಳನ್ನು ಗೆದ್ದಿರುವ ಇತಿಹಾಸವೂ ರಾಜಸ್ಥಾನ್ ರಾಯಲ್ಸ್ ಪರ ಇದೆ.

ಮತ್ತೊಂದೆಡೆ, ಲಕ್ನೋ ಸೂಪರ್ ಜೈಂಟ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಸತತ ಎರಡು ರೋಚಕ ಗೆಲುವುಗಳಿಂದ ಬೀಗುತ್ತಿದ್ದು, ಅದೇ ಆತ್ಮವಿಶ್ವಾಸವನ್ನು ಮುಂದುವರೆಸಲು ಎದುರು ನೋಡುತ್ತಿದೆ. ಲಕ್ನೋದಲ್ಲಿ ಉಭಯ ತಂಡಗಳ ನಡುವಿನ ಮೊದಲ ಹಣಾಹಣಿ ಇದಾಗಿದೆ.

ಎಲ್‌ಎಸ್‌ಜಿ vs ಆರ್‌ಆರ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಲಕ್ನೋ ಸೂಪರ್ ಜೈಂಟ್ಸ್ vs ರಾಜಸ್ಥಾನ್ ರಾಯಲ್ಸ್ ಆಡುವ 11ರ ಬಳಗ

ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್(ನಾಯಕ/ ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಯಶ್ ಠಾಕೂರ್.

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ/ ವಿಕೆಟ್ ಕೀಪರ್), ರೋವ್ಮನ್ ಪೊವೆಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಾಲ್.

Story first published: Saturday, April 27, 2024, 19:06 [IST]
Other articles published on Apr 27, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+