LSG vs RR IPL 2024: ರಾಹುಲ್, ಹೂಡಾ ಭರ್ಜರಿ ಅರ್ಧಶತಕ; ರಾಜಸ್ಥಾನ್‌ಗೆ ಸವಾಲಿನ ಗುರಿ ನೀಡಿದ ಲಕ್ನೋ
ಶನಿವಾರ, ಏಪ್ರಿಲ್ 27ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 44ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ ತಂಡವು ಪ್ರವಾಸಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಸವಾಲಿನ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೆಎಲ್ ರಾಹುಲ್ ಮತ್ತು ದೀಪಕ್ ಹೂಡಾ ಅವರ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿದ್ದು, ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 197 ರನ್‌ಗಳ ಗುರಿ ನೀಡಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ಕೆಎಲ್ ರಾಹುಲ್ ಮತ್ತು ಕ್ವಿಂಟನ್ ಡಿ ಕಾಕ್ ಮತ್ತೊಮ್ಮೆ ದೊಡ್ಡ ಆರಂಭ ನೀಡಲು ವಿಫಲರಾದರು. ತಂಡದ ಮೊತ್ತ 8 ರನ್‌ಗಳಾಗಿದ್ದಾಗ 2 ಬೌಂಡರಿಗಳ ಸಮೇತ 8 ರನ್ ಗಳಿಸಿದ್ದ ಕ್ವಿಂಟನ್ ಡಿ ಕಾಕ್ ವಿಕೆಟ್ ಒಪ್ಪಿಸಿದರು. ನಂತರ ಬಂದ ಕಳೆದ ಪಂದ್ಯದ ಶತಕವೀರ ಮಾರ್ಕಸ್ ಸ್ಟೋಯಿನಿಸ್ ಈ ಪಂದ್ಯದಲ್ಲಿ ಸೊನ್ನೆಗೆ ಔಟಾದರು.
ಈ ವೇಳೆ ಜೊತೆಗೂಡಿದ ಕೆಎಲ್ ರಾಹುಲ್ ಮತ್ತು ದೀಪಕ್ ಹೂಡಾ ಕುಸಿದಿದ್ದ ತಂಡಕ್ಕೆ ಆಸರೆಯಾದರು ಮತ್ತು ಮೂರನೇ ವಿಕೆಟ್‌ಗೆ 115 ರನ್‌ಗಳ ಜೊತೆಯಾಟ ನಿರ್ಮಿಸಿದರು. ಈ ವೇಳೆ 31 ಎಸೆತಗಳಲ್ಲಿ 7 ಬೌಂಡರಿ ಮೂಲಕ 50 ರನ್ ಗಳಿಸಿ ಪೆವಿಲಿಯನ್ ಸೇರಿದರು.

ಆಗ ಬಂದ ನಿಕೋಲಸ್ ಪೂರನ್ ಅಬ್ಬರಿಸಲು ಮತ್ತೊಮ್ಮೆ ವಿಫಲರಾದರು ಮತ್ತು ಕೇವಲ 11 ರನ್‌ಗಳಿಗೆ ಔಟಾದರು. ನಂತರ ನಾಯಕ ಕೆಎಲ್ ರಾಹುಲ್ 48 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ 78 ರನ್ ಗಳಿಸಿದ್ದಾಗ ದೊಡ್ಡ ಶಾಟ್ ಬಾರಿಸಲು ಹೋಗಿ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದರು.
ಕೊನೆಯಲ್ಲಿ ಆಯುಷ್ ಬಡೋನಿ 13 ಎಸೆತಗಳಲ್ಲಿ ಅಜೇಯ 18 ರನ್ ಮತ್ತು ಕೃನಾಲ್ ಪಾಂಡ್ಯ 11 ಎಸೆತಗಳಲ್ಲಿ ಅಜೇಯ 15 ರನ್ ಗಳಿಸಿ ತಂಡದ ಮೊತ್ತವನ್ನು 190ರ ಗಡಿ ದಾಟಿಸಿದರು.
ಇನ್ನು ಬೌಲಿಂಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಸಂದೀಪ್ ಶರ್ಮಾ 4 ಓವರ್‌ಗಳಲ್ಲಿ 31 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಟ್ರೆಂಟ್ ಬೌಲ್ಟ್ ಅವೇಶ್ ಖಾನ್ ಮತ್ತು ರವಿಚಂದ್ರನ್ ಅಶ್ವಿನ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications