Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs RR IPL 2024: ಸ್ಯಾಮ್ಸನ್, ಜುರೆಲ್ ಅರ್ಧಶತಕ; ಲಕ್ನೋ ವಿರುದ್ಧ ಗೆದ್ದು ರಾಯಲ್ ಆಗಿ ಪ್ಲೇಆಫ್‌ಗೆ ಕಾಲಿಟ್ಟ ರಾಜಸ್ಥಾನ್

ಶನಿವಾರ, ಏಪ್ರಿಲ್ 27ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 44ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಪ್ರವಾಸಿ ರಾಜಸ್ಥಾನ್ ರಾಯಲ್ಸ್ ತಂಡ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಈ ಮೂಲಕ ಐಪಿಎಲ್ 2024ರಲ್ಲಿ ಪ್ಲೇಆಫ್‌ಗೆ ಬಹುತೇಕ ಪ್ರವೇಶ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಭಾಜನವಾಯಿತು. ಆಡಿದ 9 ಪಂದ್ಯಗಳಲ್ಲಿ 8 ಗೆಲುವು ಮತ್ತು 1 ಸೋಲಿನ ಮೂಲಕ 16 ಅಂಕಗಳನ್ನು ಕಲೆಹಾಕಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ.

LSG vs RR IPL 2024 Rajasthan Royals Win by 7 Wickets Against Lucknow Super Giants

ಇನ್ನು ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿದ 9 ಪಂದ್ಯಗಳಲ್ಲಿ 5 ಗೆಲುವು ಮತ್ತು 4 ಸೋಲುಗಳನ್ನು ಕಂಡಿದ್ದು, 10 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೆಎಲ್ ರಾಹುಲ್ ಮತ್ತು ದೀಪಕ್ ಹೂಡಾ ಅವರ ತಲಾ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತ್ತು.

197 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ ಸಂಜು ಸ್ಯಾಮ್ಸನ್ ಮತ್ತು ಧ್ರುವ್ ಜುರೆಲ್ ಅವರ ಅಮೋಘ ಅರ್ಧಶತಕಗಳ ಸಹಾಯದಿಂದ 19 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 199 ರನ್‌ ಗಳಿಸುವುದರೊಂದಿಗೆ ಗೆಲುವಿನ ಗುರಿ ತಲುಪಿತು.

LSG vs RR IPL 2024 Rajasthan Royals Win by 7 Wickets Against Lucknow Super Giants

ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಜೋಸ್ ಬಟ್ಲರ್ ಮತ್ತು ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 5.5 ಓವರ್‌ಗಳಲ್ಲಿ 60 ರನ್‌ಗಳ ಜೊತೆಯಾಟ ನಿರ್ಮಿಸಿದರು. ಈ ವೇಳೆ 18 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 24 ರನ್ ಬಾರಿಸಿ ಔಟಾದರು.

ಇದೇ ವೇಳೆ ಯಶಸ್ವಿ ಜೈಸ್ವಾಲ್ ಕೂಡ 18 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 34 ರನ್ ಗಳಿಸಿದ್ದಾಗ ವಿಕೆಟ್ ಒಪ್ಪಿಸಿದರು. ಮಧ್ಯಮ ಕ್ರಮಾಂಕದಲ್ಲಿ ರಿಯಾನ್ ಪರಾಗ್ 11 ಎಸೆತಗಳಲ್ಲಿ 1 ಸಿಕ್ಸರ್ ಸಮೇತ 14 ರನ್ ಗಳಿಸಿ ಔಟಾದರು.

ನಾಯಕ ಸಂಜು ಸ್ಯಾಮ್ಸನ್ 33 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ ಅಜೇಯ 71 ರನ್ ಗಳಿಸಿದರೆ, ಧ್ರುವ್ ಜುರೆಲ್ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ 52 ರನ್ ಗಳಿಸಿ ತಂಡವನ್ನು ಗೆಲುವಿನ ಗಡಿ ಮುಟ್ಟಿಸಿದರು.

ಇನ್ನು ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಯಶ್ ಠಾಕೂರ್, ಮಾರ್ಕಸ್ ಸ್ಟೋಯಿನಿಸ್ ಮತ್ತು ಅಮಿತ್ ಮಿಶ್ರಾ ತಲಾ ಒಂದೊಂದು ವಿಕೆಟ್ ಮಾತ್ರ ಪಡೆದರು.

ಇದಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ಕೆಎಲ್ ರಾಹುಲ್ ಮತ್ತು ಕ್ವಿಂಟನ್ ಡಿ ಕಾಕ್ ಮತ್ತೊಮ್ಮೆ ದೊಡ್ಡ ಆರಂಭ ನೀಡಲು ವಿಫಲರಾದರು. 2 ಬೌಂಡರಿಗಳ ಸಮೇತ 8 ರನ್ ಗಳಿಸಿದ್ದ ಕ್ವಿಂಟನ್ ಡಿ ಕಾಕ್ ವಿಕೆಟ್ ಒಪ್ಪಿಸಿದರು. ನಂತರ ಬಂದ ಮಾರ್ಕಸ್ ಸ್ಟೋಯಿನಿಸ್ ಈ ಪಂದ್ಯದಲ್ಲಿ ಸೊನ್ನೆಗೆ ಔಟಾದರು.

ಈ ವೇಳೆ ಜೊತೆಗೂಡಿದ ಕೆಎಲ್ ರಾಹುಲ್ ಮತ್ತು ದೀಪಕ್ ಹೂಡಾ ಕುಸಿದಿದ್ದ ತಂಡಕ್ಕೆ ಆಸರೆಯಾದರು ಮತ್ತು ಮೂರನೇ ವಿಕೆಟ್‌ಗೆ 115 ರನ್‌ಗಳ ಜೊತೆಯಾಟ ನಿರ್ಮಿಸಿದರು. ಈ ವೇಳೆ 31 ಎಸೆತಗಳಲ್ಲಿ 7 ಬೌಂಡರಿ ಮೂಲಕ 50 ರನ್ ಗಳಿಸಿ ಪೆವಿಲಿಯನ್ ಸೇರಿದರು.

ಆಗ ಬಂದ ನಿಕೋಲಸ್ ಪೂರನ್ ಅಬ್ಬರಿಸಲು ಮತ್ತೊಮ್ಮೆ ವಿಫಲರಾದರು ಮತ್ತು ಕೇವಲ 11 ರನ್‌ಗಳಿಗೆ ಔಟಾದರು. ನಂತರ ನಾಯಕ ಕೆಎಲ್ ರಾಹುಲ್ 48 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ 78 ರನ್ ಗಳಿಸಿದ್ದಾಗ ದೊಡ್ಡ ಶಾಟ್ ಬಾರಿಸಲು ಹೋಗಿ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದರು.

ಕೊನೆಯಲ್ಲಿ ಆಯುಷ್ ಬಡೋನಿ 13 ಎಸೆತಗಳಲ್ಲಿ ಅಜೇಯ 18 ರನ್ ಮತ್ತು ಕೃನಾಲ್ ಪಾಂಡ್ಯ 11 ಎಸೆತಗಳಲ್ಲಿ ಅಜೇಯ 15 ರನ್ ಗಳಿಸಿ ತಂಡದ ಮೊತ್ತವನ್ನು 190ರ ಗಡಿ ದಾಟಿಸಿದರು.

ಇನ್ನು ಬೌಲಿಂಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಸಂದೀಪ್ ಶರ್ಮಾ 4 ಓವರ್‌ಗಳಲ್ಲಿ 31 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಟ್ರೆಂಟ್ ಬೌಲ್ಟ್ ಅವೇಶ್ ಖಾನ್ ಮತ್ತು ರವಿಚಂದ್ರನ್ ಅಶ್ವಿನ್ ತಲಾ ಒಂದೊಂದು ವಿಕೆಟ್ ಪಡೆದರು.

Story first published: Saturday, April 27, 2024, 23:17 [IST]
Other articles published on Apr 27, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+