LSG vs SRH IPL 2024: ಲಕ್ನೋ-ಹೈದರಾಬಾದ್ ಮುಖಾಮುಖಿ; ಟಾಸ್ ವರದಿ, ಆಡುವ 11ರ ಬಳಗ
ಮೇ 8 ಬುಧವಾರ, ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 57ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ಹಾಗು ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಪ್ಯಾಟ್ ಕಮ್ಮಿನ್ಸ್ ಮುನ್ನೆಡೆಸುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡವು ಬೌಲಿಂಗ್ ಮಾಡಲಿದೆ.

ಪ್ರಸ್ತುತ ಐಪಿಎಲ್ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಆಡಿರುವ 11 ಪಂದ್ಯಗಳಲ್ಲಿ 6 ರಲ್ಲಿ ಗೆದ್ದು, 5ರಲ್ಲಿ ಸೋತು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇತ್ತ ಲಕ್ನೋ ಸೂಪರ್ ಜೈಂಟ್ಸ್ ಆಡಿರುವ 11 ಪಂದ್ಯಗಳಲ್ಲಿ 6 ರಲ್ಲಿ ಗೆದ್ದು, 5ರಲ್ಲಿ ಸೋತು ರನ್ ರೇಟ್ ಕಡಿಮೆ ಇರುವುದರಿಂದ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
ಎಲ್‌ಎಸ್‌ಜಿ vs ಎಸ್‌ಆರ್‌ಹೆಚ್ ಪಂದ್ಯದ ಟಿವಿ,ಲೈವ್ ಸ್ಟ್ರೀಮಿಂಗ್ ವಿವರ
ಲಕ್ನೋ ಸೂಪರ್ ಜೈಂಟ್ಸ್ vs ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಆರಂಭವಾಗಿರುವ ಐಪಿಎಲ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದು, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಫ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಎಲ್‌ಎಸ್‌ಜಿ vs ಎಸ್‌ಆರ್‌ಹೆಚ್ ಆಡುವ 11ರ ಬಳಗ
ಲಕ್ನೋ ಸೂಪರ್ ಜೈಂಟ್ಸ್ ತಂಡ : ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್(ವಿ.ಕೀ ಮತ್ತು ನಾಯಕ), ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಯಶ್ ಠಾಕೂರ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್
ಸನ್ ರೈಸರ್ಸ್ ಹೈದರಾಬಾದ್ ತಂಡ : ಟ್ರಾವಿಸ್ ಹೆಡ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್(ವಿ.ಕೀ), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಸನ್ವಿರ್ ಸಿಂಗ್, ಪ್ಯಾಟ್ ಕಮ್ಮಿನ್ಸ್(ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ವಿಜಯಕಾಂತ್ ವ್ಯಾಸಕಾಂತ್, ಟಿ ನಟರಾಜನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications