LSG vs KKR IPL 2024: ಲಕ್ನೋ-ಕೋಲ್ಕತ್ತಾ ಉಭಯ ತಂಡಗಳ ಬಲಾಬಲ ವರದಿ; ಸೋಲಿನ ಸೇಡಿನಲ್ಲಿ ರಾಹುಲ್ ಬಳಗ
ಭಾನುವಾರ ಮೇ 5, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 54ನೇ ಪಂದ್ಯ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನಡುವೆ ನಡೆಯಲಿದೆ. ಈ ಪಂದ್ಯ ಲಕ್ನೋದ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಈ ಋತುವಿನಲ್ಲಿ ಎರಡನೇ ಬಾರಿಗೆ ಎದುರಾಗುತ್ತಿರುವ ಲಕ್ನೋ ಮತ್ತು ಕೋಲ್ಕತ್ತಾ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಎಲ್‌ಎಸ್‌ಜಿ ಸೋತಿತು. ಹೀಗಾಗಿ ಇಂದಿನ ಪಂದ್ಯದಲ್ಲಿ ಕೆಕೆಆರ್ ಎದುರು ಎಲ್‌ಎಸ್‌ಜಿ ಸೋಲಿನ ಸೇಡು ತೀರಿಸಿಕೊಳ್ಳುವ ತಯಾರಿ ನಡೆಸಿದೆ.

ಏಪ್ರಿಲ್ 14 ರಂದು ಕೊನೆಯ ಬಾರಿಗೆ ಈ ಎರಡು ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಎಲ್‌ಎಸ್‌ಜಿ 20 ಓವರ್‌ಗಳಲ್ಲಿ 161/7 ಮಾಡಿತು. ಇದಕ್ಕುತ್ತರವಾಗಿ ಕೋಲ್ಕತ್ತಾ ತಂಡ 15.4 ಓವರ್‌ಗಳಲ್ಲಿ 8 ವಿಕೆಟ್‌ಗಳ ಅಂತರದಲ್ಲಿ ಗುರಿ ಮುಟ್ಟುವಲ್ಲಿ ಯಶಸ್ವಿಯಾಯಿತು. ಕೆಕೆಆರ್‌ನ ಫಿಲ್ ಸಾಲ್ಟ್ 47 ಎಸೆತಗಳಲ್ಲಿ 89 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಪ್ರಸ್ತುತ ಐಪಿಎಲ್‌ನಲಲ್ಲಿ ಉಭಯ ತಂಡಗಳ ಪಯಣ :
ಲಕ್ನೋ ಸೂಪರ್ ಜೈಂಟ್ಸ್ ಇದುವರೆಗೆ 10 ಪಂದ್ಯಗಳನ್ನು ಆಡಿದ್ದು, 6ರಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತಿದೆ. ಇದೀಗ 12 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ 3ನೇ ಸ್ಥಾನದಲ್ಲಿ ಮುಂದುವರೆದಿದೆ. ಕೆಕೆಆರ್ ತಂಡ 10 ಪಂದ್ಯಗಳಲ್ಲಿ 7 ಗೆಲುವು ಮತ್ತು 4 ಸೋಲುಗಳೊಂದಿಗೆ 14 ಅಂಕಗಳನ್ನು ಗಳಿಸಿ 2ನೇ ಸ್ಥಾನದಲ್ಲಿದೆ.
ಎಲ್‌ಎಸ್‌ಜಿ vs ಕೆಕೆಆರ್ ಮುಖಾಮುಖಿ :
ಕಳೆದ ಎರಡು ಆವೃತ್ತಿಯಲ್ಲಿ ಕೆಎಲ್ ರಾಹುಲ್ ಮುನ್ನೆಡೆಸುತ್ತಿರುವ ಲಕ್ನೋ ತಂಡವು ಕೆಕೆಆರ್ ಎದುರು ಪ್ರಾಬಲ್ಯ ಸಾಧಿಸಿದೆ. ಲಕ್ನೋ ಮತ್ತು ಕೋಲ್ಕತ್ತಾ ಇದುವರೆಗೆ ಒಟ್ಟು 4 ಪಂದ್ಯಗಳನ್ನು ಆಡಿವೆ. ಈ ಅವಧಿಯಲ್ಲಿ ಲಕ್ನೋ 3 ಪಂದ್ಯಗಳನ್ನು ಗೆದ್ದಿದೆ. ಕೆಕೆಆರ್ ಕೇವಲ 1 ಪಂದ್ಯವನ್ನು ಗೆದ್ದಿದೆ. ಈ ಅವಧಿಯಲ್ಲಿ ಕೆಕೆಆರ್‌ನ ಗರಿಷ್ಠ ಸ್ಕೋರ್ 208 ಆಗಿದೆ. ಎಲ್‌ಎಸ್‌ಜಿಯ ಅತ್ಯುತ್ತಮ ಸ್ಕೋರ್ 210 ರನ್.

ಎಲ್‌ಎಸ್‌ಜಿ vs ಕೆಕೆಆರ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ :
ಲಕ್ನೋ ಸೂಪರ್ ಜೈಂಟ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಎಲ್‌ಎಸ್‌ಜಿ vs ಕೆಕೆಆರ್ ಸಂಭ್ಯಾವ ಆಡುವ 11ರ ಬಳಗ :
ಲಕ್ನೋ ಸೂಪರ್ ಜೈಂಟ್ಸ್ ತಂಡ: ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ವಿ.ಕೀ/ನಾಯಕ), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಯಶ್ ಠಾಕೂರ್, ನವೀನ್-ಉಲ್-ಹಕ್, ಮಯಾಂಕ್ ಯಾದವ್.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ಫಿಲಿಪ್ ಸಾಲ್ಟ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ರಿಂಕು ಸಿಂಗ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ವೈಭವ್ ಅರೋರಾ, ಹರ್ಷಿತ್ ರಾಣಾ, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications