IPL 2025 MI vs LSG: ಮುಂಬೈಗೆ ಲಕ್ನೋ ಸವಾಲು; ಪಂತ್ ಪಡೆಗೆ ತವರಿನಲ್ಲಿ ಸಿಗುತ್ತಾ ಗೆಲುವು?
ಐಪಿಎಲ್ 2025 ರ 16ನೇ ಪಂದ್ಯವು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ. ಈ ಪಂದ್ಯ ಇಂದು ಅಂದರೆ, ಶುಕ್ರವಾರ ರಾತ್ರಿ 7.30 ಗಂಟೆಗೆ ಲಕ್ನೋ ತಂಡದ ತವರು ಮೈದಾನವಾದ ಏಕಾನಾ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಹಾತೊರೆಯುತ್ತಿವೆ. ಮುಂಬೈ ಇಂಡಿಯನ್ಸ್ ತಂಡ ತನ್ನ ಕೊನೆಯ ಪಂದ್ಯವನ್ನು ಗೆದ್ದು ಬರುತ್ತಿದೆ, ಆದರೆ ಲಕ್ನೋ ಸೂಪರ್ ಜೈಂಟ್ಸ್ ತನ್ನ ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಇಂತಹ ಸಂದರ್ಭದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಮುಂಬೈ ಇಂಡಿಯನ್ಸ್ ಮಣಿಸಿ ಗೆಲುವಿನ ಲಯಕ್ಕೆ ಮರಳುವ ನಿರೀಕ್ಷೆಯಲ್ಲಿದೆ.

ಲಕ್ನೋ ಸೂಪರ್ ಜೈಂಟ್ ತಂಡ ಇದುವರೆಗೆ 3 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಕೇವಲ 1 ಪಂದ್ಯವನ್ನು ಮಾತ್ರ ಗೆದ್ದು, 2 ಪಂದ್ಯಗಳಲ್ಲಿ ಸೋತಿದೆ. ತಂಡದನಾ ರಿಷಣ್ ಪಂತ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದಾರೆ. ಇದರಿಂದಾಗಿ ಅವರ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಮುಂಬೈ ಇಂಡಿಯನ್ಸ್ ವಿರುದ್ಧ ಪಂತ್ ಫಾರ್ಮ್‌ಗೆ ಮರಳುವ ನಿರೀಕ್ಷೆಯಿದೆ.
ಮುಂಬೈ ಇಂಡಿಯನ್ಸ್ ತಂಡ ಕೂಡ 3 ಪಂದ್ಯಗಳಲ್ಲಿ ಒಂದನ್ನು ಗೆದ್ದು 2 ರಲ್ಲಿ ಸೋಲು ಕಂಡಿದೆ. ಆದರೆ, ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆದ್ದ ರೀತಿ ಆಟಗಾರರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಫಾರ್ಮ್‌ಗೆ ತಂಡಕ್ಕೆ ಸ್ವಲ್ಪ ಟೆಕ್ಷನ್ ತರಿಸಿದೆ.
ಹೆಡ್ ಟು ಹೆಡ್
ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಪ್ರಾಬಲ್ಯ ಸಾಧಿಸಿದೆ. ಇಲ್ಲಿವರೆಗೆ ಉಭಯ ತಂಡಗಳ ನಡುವೆ 5 ಪಂದ್ಯಗಳು ನಡೆದಿವೆ. ಲಕ್ನೋ ತಂಡ ಆಡಿದ 6 ಪಂದ್ಯಗಳಲ್ಲಿ 5 ರಲ್ಲಿ ಜಯಗಳಿಸಿದೆ. ಮುಂಬೈ ಇಂಡಿಯನ್ಸ್ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಜಯ ಕಂಡಿದೆ.
ಸ್ಟಾರ್ ಆಟಗಾರರ ಮೇಲೆ ಚಿತ್ತ
ಲಕ್ನೋ ತಂಡಕ್ಕೆ ಬ್ಯಾಟಿಂಗ್‌ನಲ್ಲಿ ನಿಕೋಲಸ್ ಪೂರನ್ ಮತ್ತು ಮಿಚೆಲ್ ಮಾರ್ಷ್ ಆಧಾರ ಸ್ತಂಭವಾಗಿದ್ದು, ಅದ್ಭುತ ಪ್ರದರ್ಶನ ನೀಡುತ್ತಾರೆ. ಆದರೆ ರಿಷಭ್ ಪಂತ್ ಸೇರಿದಂತೆ ಕೆಲವು ಆಟಗಾರರು ಇನ್ನೂ ಉತ್ತಮ ಪ್ರದರ್ಶನ ನೀಡಿಲ್ಲ. ಪಂತ್ ಮೂರು ಇನ್ನಿಂಗ್ಸ್‌ಗಳಲ್ಲಿ ಕೇವಲ 17 ರನ್ ಗಳಿಸಿದ್ದಾರೆ. ಮತ್ತೊಂದೆಡೆ ಯುವ ಆಟಗಾರ ಆಯುಷ್ ಬಡೋನಿ ಜವಾಬ್ದಾರಿಯುತ ಇನ್ನಿಂಗ್ಸ್ ಆಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ವೇಗದ ಬೌಲರ್‌ಗಳಾದ ಆವೇಶ್ ಖಾನ್, ಆಕಾಶ್ ದೀಪ್, ಮಾಯಾಂಕ್ ಯಾದವ್ ಮತ್ತು ಮೊಹ್ಸಿನ್ ಖಾನ್ ಗಾಯಗೊಂಡ ನಂತರ ಲಕ್ನೋ ತಂಡದ ಸಂಕಷ್ಟಗಳು ಹೆಚ್ಚಾಗುತ್ತಿವೆ. ಈಗ ಮುಂಬೈ ಇಂಡಿಯನ್ಸ್ ವಿರುದ್ಧ ಐಪಿಎಲ್ 2025 ರ ಮೊದಲ ಪಂದ್ಯವನ್ನು ಆಡಲು ಆಕಾಶ್‌ದೀಪ್ ಸಜ್ಜಾಗಿದ್ದಾರೆ.
ಮುಂಬೈ ತಂಡವು ಸತತ ಸೋಲುಗಳೊಂದಿಗೆ ಐಪಿಎಲ್ 2025 ರ ಸೀಸನ್ ಅನ್ನು ಆರಂಭಿಸಿತು. ನಂತರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಗೆಲುವಿನೊಂದಿಗೆ ಮತ್ತೆ ಪುಟಿದೆದ್ದಿತು. ಜಸ್ಪ್ರೀತ್ ಬುಮ್ರಾ ಇಲ್ಲದಿದ್ದರೂ, ಮುಂಬೈ ತಂಡವು ಐಪಿಎಲ್ 2025 ರಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿದೆ. ಅನುಭವಿ ಟ್ರೆಂಟ್ ಬೌಲ್ಟ್ ಜೊತೆಗೆ ಯುವ ಬೌಲರ್‍ಗಳು ಕಮಾಲ್ ಮಾಡುತ್ತಿದ್ದಾರೆ.
ಬ್ಯಾಟಿಂಗ್ ವಿಷಯಕ್ಕೆ ಬಂದರೆ ಸೂರ್ಯಕುಮಾರ್ ಯಾದವ್ ಮತ್ತೆ ಫಾರ್ಮ್‌ಗೆ ಮರಳಿದ್ದಾರೆ. ಕೆಕೆಆರ್ ವಿರುದ್ಧ ರಯಾನ್ ರಿಕಲ್ಟನ್ ವೇಗವಾಗಿ ಅರ್ಧಶತಕ ಗಳಿಸಿ ಲಯ ಕಂಡುಕೊಂಡಂತೆ ಕಾಣುತ್ತಿದೆ. ಆದರೆ ರೋಹಿತ್ ಶರ್ಮಾ ಅವರ ಮೂರು ಇನ್ನಿಂಗ್ಸ್‌ಗಳಲ್ಲಿ ಕೇವಲ 21 ರನ್‌ಗಳಿಸಿರುವುದು ಕಳವಳಕಾರಿಯಾಗಿದೆ. ಹೀಗಾಗಿ ಈ ಪಂದ್ಯವು ಎರಡೂ ತಂಡಗಳ ಬ್ಯಾಟಿಂಗ್‌ಗೆ ಪರೀಕ್ಷೆಯಾಗಬಹುದು.
ಸಂಭಾವ್ಯ ಪ್ಲೇಯಿಂಗ್-11
ಲಕ್ನೋ ಸೂಪರ್ ಜೈಂಟ್ಸ್: ಮಿಚೆಲ್ ಮಾರ್ಷ್, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ರಿಷಭ್ ಪಂತ್ (ನಾಯಕ-ವಿಕೆಟ್‌ಕೀಪರ್), ಆಯುಷ್ ಬಡೋನಿ, ಡೇವಿಡ್ ಮಿಲ್ಲರ್, ಅಬ್ದುಲ್ ಸಮದ್, ಶಾರ್ದೂಲ್ ಠಾಕೂರ್, ದಿಗ್ವೇಶ್ ರಾಥಿ, ಅವೇಶ್ ಖಾನ್, ರವಿ ಬಿಷ್ಣೋಯ್, ಎಂ ಸಿದ್ಧಾರ್ಥ್.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ರಿಯಾನ್ ರಿಕಲ್ಟನ್(ವಿಕೆಟ್‌ಕೀಪರ್), ವಿಲ್ ಜಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ಟ್ರೆಂಟ್ ಬೌಲ್ಟ್, ಅಶ್ವನಿ ಕುಮಾರ್, ವಿಘ್ನೇಶ್ ಪುತ್ತೂರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications