Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs MI IPL 2024: ಲಕ್ನೋ-ಮುಂಬೈಗೆ ಕೊನೆಯ ಪಂದ್ಯ; ಟಾಸ್‌, ಆಡುವ 11ರ ಬಳಗ ವರದಿ

ಮೇ 17 ಶುಕ್ರವಾರ, 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ಮತ್ತು ಮುಂಬೈ ಇಂಡಿಯನ್ಸ್ (ಎಂಐ) ತಂಡಗಳು ತಮ್ಮ ಕೊನೆಯ ಪಂದ್ಯವಾಡುತ್ತಿವೆ. ಮುಂಬೈನ ಪ್ರತಿಷ್ಠಿತ ವಾಂಖೆಡೆ ಸ್ಟೇಡಿಯಂನಲ್ಲಿ ಪಂದ್ಯ ಆರಂಭವಾಗಿದೆ.

ಮೊದಲು ಟಾಸ್‌ ಗೆದ್ದ ಮುಂಬೈ ನಾಯಕ ಹಾರ್ದಿಕ್‌ ಪಾಂಡ್ಯ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಕೆಎಲ್‌ ರಾಹುಲ್‌ ಮುನ್ನೆಡೆಸುತ್ತಿರುವ ಲಕ್ನೋ ತಂಡ ಮೊದಲು ಬ್ಯಾಟಿಂಗ್‌ಮಾಡಲಿದೆ.

Lucknow Super Giants vs Mumbai Indians Match Toss On May 17

ಮುಂಬೈ ಈಗಾಗಲೇ ಪ್ಲೇ ಆಫ್‌ ರೇಸ್‌ನಿಂದ ಹೊರಗುಳಿದಿದೆ. ಇನ್ನೊಂದೆಡೆ ಪ್ಲೇ ಆಫ್‌ ಕನಸು ಕಾಣುತ್ತಿರುವ ಲಕ್ನೋ ಈ ಪಂದ್ಯವನ್ನು ದೊಡ್ಡ ಅಂತರದಿಂದ ಗೆಲ್ಲುವುದರೊಂದಿಗೆ ಇತರ ತಂಡಗಳ ಫಲಿತಾಂಶಗಳನ್ನು ಅವಲಂಬಿಸಬೇಕಾಗಿದೆ. ಆದರೇ ಇದು ಕಷ್ಟಕರವಾಗಿದೆ.

ಲಕ್ನೋ 13 ಪಂದ್ಯಗಳನ್ನು ಆಡಿದ್ದು, 6 ಪಂದ್ಯಗಳನ್ನು ಗೆದ್ದು ಪ್ರಸ್ತುತ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಇತ್ತ ಮುಂಬೈ 13 ಪಂದ್ಯಗಳಲ್ಲಿ ಕೇವಲ 4 ರಲ್ಲಿ ಗೆಲುವು ಸಾಧಿಸಿದ್ದು, 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.

ಎಲ್‌ಜಿಎಸ್‌ vs ಎಂಐ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಎಲ್‌ಜಿಎಸ್‌ vs ಎಂಐ ಸಂಭ್ಯಾವ ಆಡುವ 11ರ ಬಳಗ

ಲಕ್ನೋ ಸೂಪರ್ ಜೈಂಟ್ಸ್ ತಂಡ : ಕೆಎಲ್ ರಾಹುಲ್(ವಿ.ಕೀ ನಾಯಕ), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಅರ್ಷದ್ ಖಾನ್, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್.

ಮುಂಬೈ ಇಂಡಿಯನ್ಸ್ ತಂಡ : ಇಶಾನ್ ಕಿಶನ್(ವಿ.ಕೀ), ನಮನ್ ಧೀರ್, ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ಹಾರ್ದಿಕ್ ಪಾಂಡ್ಯ(ನಾಯಕ), ನೆಹಾಲ್ ವಧೇರಾ, ರೊಮಾರಿಯೋ ಶೆಫರ್ಡ್, ಅನ್ಶುಲ್ ಕಾಂಬೋಜ್, ಪಿಯೂಷ್ ಚಾವ್ಲಾ, ಅರ್ಜುನ್ ತೆಂಡೂಲ್ಕರ್, ನುವಾನ್ ತುಷಾರ.

Story first published: Friday, May 17, 2024, 19:12 [IST]
Other articles published on May 17, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+