Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮಹಾರಾಜ ಟ್ರೋಫಿ, ಕ್ವಾಲಿಫೈಯರ್: ಮಯಾಂಕ್ ಶತಕ; ಪಾಂಡೆ ಪಡೆಗೆ 228 ಗುರಿ ನೀಡಿದ ಬೆಂಗಳೂರು

Maharaja Trophy 2022: Gulbarga Mystics need 228 runs to win against Bengaluru Blasters in Qualifier 1

ಆಗಸ್ಟ್ 7ರಂದು ಆರಂಭವಾದ ಮಹಾರಾಜ ಟ್ರೋಫಿ ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು, ಇಂದು ( ಆಗಸ್ಟ್ 23 ) ಒಂದನೇ ಕ್ವಾಲಿಫೈಯರ್ ಪಂದ್ಯ ನಡೆದಿದೆ. ಈ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಮುಖಾಮುಖಿಯಾಗಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ಬ್ಲಾಸ್ಟರ್ಸ್ ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 227 ರನ್ ಕಲೆಹಾಕಿದ್ದು, ಎದುರಾಳಿ ಗುಲ್ಬರ್ಗಾ ಮಿಸ್ಟಿಕ್ಸ್ ತಂಡಕ್ಕೆ 228 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡದ ನಾಯಕ ಮನೀಶ್ ಪಾಂಡೆ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ಬ್ಲಾಸ್ಟರ್ಸ್ ಅಬ್ಬರಿಸಿ ಬೊಬ್ಬಿರಿದಿದ್ದು, ಮಹಾರಾಜ ಟ್ರೋಫಿಯಲ್ಲೇ ಬೃಹತ್ ಮೊತ್ತವನ್ನು ದಾಖಲಿಸಿದೆ.

ಬೆಂಗಳೂರು ಪರ ಮಯಾಂಕ್, ಚೇತನ್ ಅಬ್ಬರ

ಬೆಂಗಳೂರು ಪರ ಮಯಾಂಕ್, ಚೇತನ್ ಅಬ್ಬರ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ಬ್ಲಾಸ್ಟರ್ಸ್ ಪರ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ಎಲ್ ಆರ್ ಚೇತನ್ ಆರಂಭಿಕರಾಗಿ ಕಣಕ್ಕಿಳಿದರು. 15.2 ಓವರ್‌ಗಳಲ್ಲಿ 162 ರನ್‌ಗಳ ಜತೆಯಾಟವನ್ನಾಡಿದ ಈ ಜೋಡಿ ಭರ್ಜರಿ ಆರಂಭವನ್ನು ಕಟ್ಟಿಕೊಟ್ಟಿತು. ಎಲ್ ಆರ್ ಚೇತನ್ 48 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್ ಸಹಿತ 80 ರನ್ ಚಚ್ಚಿದರೆ, ನಾಯಕ ಮಯಾಂಕ್ ಅಗರ್ವಾಲ್ 61 ಎಸೆತಗಳಲ್ಲಿ 9 ಬೌಂಡರಿ, 6 ಸಿಕ್ಸರ್ ಸಹಿತ ಅಜೇಯ 112 ರನ್ ಕಲೆಹಾಕಿದರು. ಇನ್ನುಳಿದಂತೆ ಅನಿರುದ್ಧಾ ರಕ್ಷಿತ್ 20 ರನ್, ಶಿವಕುಮಾರ್ ರಕ್ಷಿತ್ 7 ರನ್ ಹಾಗೂ ಜಗದೀಶ ಸುಚಿತ್ ಔಟ್ ಆಗದೇ 1 ರನ್ ಕಲೆಹಾಕಿದರು.

ಮಂಕಾದ ಗುಲ್ಬರ್ಗಾ ಮಿಸ್ಟಿಕ್ಸ್ ಬೌಲಿಂಗ್

ಮಂಕಾದ ಗುಲ್ಬರ್ಗಾ ಮಿಸ್ಟಿಕ್ಸ್ ಬೌಲಿಂಗ್

ಗುಲ್ಬರ್ಗಾ ಮಿಸ್ಟಿಕ್ಸ್ ಪರ ವಿಧ್ವತ್ ಕಾವೇರಪ್ಪ ಎರಡು ವಿಕೆಟ್ ಹಾಗೂ ಅಜಯ್ ಗೌಡ ಒಂದು ವಿಕೆಟ್ ಪಡೆದದ್ದು ಬಿಟ್ಟರೆ ಉಳಿದ ಯಾವುದೇ ಬೌಲರ್ ಕೂಡ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ. ಇನ್ನು ಗುಲ್ಬರ್ಗಾ ಮಿಸ್ಟಿಕ್ಸ್ ತಂಡದ ಬೌಲರ್‌ಗಳು ಕನಿಷ್ಟ 7.50 ಹಾಗೂ ಗರಿಷ್ಠ 14.80ರ ಎಕಾನಮಿ ದರದಲ್ಲಿ ಬೌಲಿಂಗ್ ಮಾಡಿದ್ದು, ಕೆಟ್ಟ ಪ್ರದರ್ಶನ ನೀಡಿದ್ದಾರೆ.

ಆಡುವ ಬಳಗಗಳು

ಆಡುವ ಬಳಗಗಳು

ಬೆಂಗಳೂರು ಬ್ಲಾಸ್ಟರ್ಸ್ ಆಡುವ ಬಳಗ: ಮಯಾಂಕ್ ಅಗರ್ವಾಲ್ (ನಾಯಕ), ಎಲ್ ಆರ್ ಚೇತನ್, ಕುಶ್ ಮರಾಠೆ, ಶಿವಕುಮಾರ್ ರಕ್ಷಿತ್ (ವಿಕೆಟ್ ಕೀಪರ್), ಅನಿರುದ್ಧ ಜೋಶಿ, ಜಗದೀಶ ಸುಚಿತ್, ಕ್ರಾಂತಿ ಕುಮಾರ್, ರಿಷಿ ಬೋಪಣ್ಣ, ರೋನಿತ್ ಮೋರೆ, ಪ್ರದೀಪ್ ಟಿ, ಸಂತೋಕ್ ಸಿಂಗ್

ಗುಲ್ಬರ್ಗಾ ಮಿಸ್ಟಿಕ್ಸ್ ಆಡುವ ಬಳಗ: ರೋಹನ್ ಪಾಟೀಲ್, ಜೆಸ್ವತ್ ಆಚಾರ್ಯ, ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪ್), ಮನೀಶ್ ಪಾಂಡೆ (ನಾಯಕ), ಮನೋಜ್ ಭಾಂಡಗೆ, ಅಜಯ್ ಗೌಡ, ರಿತೇಶ್ ಭಟ್ಕಳ್, ಕುಶಾಲ್ ವಾಧ್ವಾನಿ, ಪ್ರಣವ್ ಭಾಟಿಯಾ, ವಿಧ್ವತ್ ಕಾವೇರಪ್ಪ, ಧನುಷ್ ಗೌಡ

Story first published: Tuesday, August 23, 2022, 21:32 [IST]
Other articles published on Aug 23, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+