ಮಹಾರಾಜ ಟ್ರೋಫಿ: ಲೀಗ್ ಹಂತ ಮುಕ್ತಾಯ; ಹುಬ್ಬಳ್ಳಿ ಸೇರಿ 4 ತಂಡಗಳು ಪ್ಲೇಆಫ್‌ಗೆ ಲಗ್ಗೆ

ಆಗಸ್ಟ್ 7ರಂದು ಆರಂಭವಾಗಿದ್ದ ಮಹಾರಾಜ ಟ್ರೋಫಿಯ ಲೀಗ್ ಹಂತದ ಒಟ್ಟು 30 ಪಂದ್ಯಗಳು ನಿನ್ನೆಗೆ ಮುಕ್ತಾಯಗೊಂಡಿವೆ. ಟೂರ್ನಿಯಲ್ಲಿ ಭಾಗವಹಿಸಿದ್ದ ಎಲ್ಲಾ ಆರು ತಂಡಗಳು ತಲಾ ಹತ್ತು ಪಂದ್ಯಗಳನ್ನು ಆಡಿದ್ದು ಈ ಪೈಕಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡ 4 ತಂಡಗಳು ಪ್ಲೇಆಫ್ ಸುತ್ತಿಗೆ ಅರ್ಹತೆ ಪಡೆದುಕೊಂಡಿವೆ. ಇನ್ನು ಟೂರ್ನಿಯ ಲೀಗ್ ಹಂತದ ಅಂತಿಮ ದಿನಕ್ಕೂ ಮುನ್ನವೇ ಪ್ಲೇಆಫ್ ಪ್ರವೇಶಿಸಬಹುದಾದ ಮೂರು ತಂಡಗಳು ಯಾವುವು ಎಂಬುದು ಖಚಿತವಾಗಿತ್ತು. ಆದರೆ, ಲೀಗ್ ಹಂತದ ಮುಕ್ತಾಯದ ಹಂತಕ್ಕೆ ಅಂಕಪಟ್ಟಿಯಲ್ಲಿ ಯಾವ ತಂಡ ನಾಲ್ಕನೇ ಸ್ಥಾನಕ್ಕೆ ಪಡೆದುಕೊಂಡು ಪ್ಲೇಆಫ್ ಪ್ರವೇಶಿಸಲಿದೆ ಎಂಬ ಕುತೂಹಲ ಹುಟ್ಟಿತ್ತು.
ಇನ್ನು ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ಮಂಗಳೂರು ಯುನೈಟೆಡ್ ತಂಡವನ್ನು ಸೋಲಿಸಿದ ಹುಬ್ಬಳ್ಳಿ ಟೈಗರ್ಸ್ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿ ಪ್ಲೇಆಫ್ ಟಿಕೆಟ್ ಪಡೆದುಕೊಂಡಿತು. ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳು ಸಮನಾದ ಅಂಕಗಳನ್ನು ಪಡೆದುಕೊಂಡಿದ್ದ ಕಾರಣ ಪಂದ್ಯದಲ್ಲಿ ಗೆಲ್ಲಲಿರುವ ತಂಡ ಪ್ಲೇಆಫ್ ಪ್ರವೇಶಿಸಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮಂಗಳೂರು ಯುನೈಟೆಡ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 184 ರನ್ ಕಲೆಹಾಕಿ ಹುಬ್ಬಳ್ಳಿ ಟೈಗರ್ಸ್ ತಂಡಕ್ಕೆ 185 ರನ್‌ಗಳ ಕಠಿಣ ಗುರಿಯನ್ನೇ ನೀಡಿತು. ಈ ಗುರಿಯನ್ನು ಬೆನ್ನತ್ತಿದ ಹುಬ್ಬಳ್ಳಿ ಟೈಗರ್ಸ್ ನಾಯಕ ಲವ್‌ನೀತ್ ಸಿಸೋಡಿಯಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ 17.5 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 189 ರನ್ ಕಲೆಹಾಕಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್ ಸುತ್ತಿಗೆ ಲಗ್ಗೆ ಇಟ್ಟಿದೆ.
ಹೀಗೆ ಲೀಗ್ ಹಂತ ಸಂಪೂರ್ಣವಾಗಿ ಮುಕ್ತಾಯವಾದ ನಂತರ ಯಾವ ತಂಡಗಳು ಪ್ಲೇಆಫ್ ಸುತ್ತಿಗೆ ಪ್ರವೇಶ ಪಡೆದುಕೊಂಡಿವೆ ಎಂಬುದರ ಕುರಿತ ಮಾಹಿತಿ ಈ ಕೆಳಕಂಡಂತಿದೆ.

ಲೀಗ್ ಹಂತ ಮುಕ್ತಾಯದ ಹಂತಕ್ಕೆ ಅಂಕಪಟ್ಟಿ
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳಲ್ಲಿ ಕಣಕ್ಕಿಳಿದು 7 ಪಂದ್ಯಗಳಲ್ಲಿ ಗೆದ್ದು ಉಳಿದ 3 ಪಂದ್ಯಗಳಲ್ಲಿ ಸೋತು 14 ಅಂಕಗಳನ್ನು ಪಡೆದುಕೊಂಡಿರುವ ಮಯಾಂಕ್ ಅಗರ್ವಾಲ್ ನಾಯಕತ್ವದ ಬೆಂಗಳೂರು ಬ್ಲಾಸ್ಟರ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳಲ್ಲಿ ಕಣಕ್ಕಿಳಿದು 6 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು 12 ಅಂಕಗಳನ್ನು ಪಡೆದುಕೊಂಡಿರುವ ಗುಲ್ಬರ್ಗಾ ಮಿಸ್ಟಿಕ್ಸ್ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ.
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳಲ್ಲಿ ಕಣಕ್ಕಿಳಿದು 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಮೈಸೂರು ವಾರಿಯರ್ಸ್ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ.
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳಲ್ಲಿ ಆಡಿ 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಹುಬ್ಬಳ್ಳಿ ಟೈಗರ್ಸ್ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
* ಟೂರ್ನಿಯಲ್ಲಿ ಒಟ್ಟು 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಂಡಿರುವ ಮಂಗಳೂರು ಯುನೈಟೆಡ್ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳಲ್ಲಿ ಕಣಕ್ಕಿಳಿದು 3 ಪಂದ್ಯಗಳಲ್ಲಿ ಮಾತ್ರ ಗೆದ್ದು, ಉಳಿದ 7 ಪಂದ್ಯಗಳಲ್ಲಿ ಸೋತು ಕೇವಲ ಆರು ಅಂಕಗಳನ್ನು ಮಾತ್ರ ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.

ಟಾಪ್ ನಾಲ್ಕು ತಂಡಗಳು ಪ್ಲೇಆಫ್‌ಗೆ
ಅಂಕಪಟ್ಟಿಯಲ್ಲಿ ಟಾಪ್ ನಾಲ್ಕು ಸ್ಥಾನಗಳನ್ನು ಪಡೆದುಕೊಂಡಿರುವ ಬೆಂಗಳೂರು ಬ್ಲಾಸ್ಟರ್ಸ್, ಗುಲ್ಬರ್ಗಾ ಮಿಸ್ಟಿಕ್ಸ್, ಮೈಸೂರು ವಾರಿಯರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ತಂಡಗಳು ಪ್ಲೇಆಫ್ ಸುತ್ತಿಗೆ ಲಗ್ಗೆ ಇಟ್ಟಿವೆ. ಈ ಪೈಕಿ ಟಾಪ್ 2 ಸ್ಥಾನಗಳನ್ನು ಪಡೆದುಕೊಂಡಿರುವ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ಕ್ವಾಲಿಫೈಯರ್ ಪಂದ್ಯಕ್ಕೆ ಪ್ರವೇಶಿಸಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟರೆ, ಸೋಲುವ ತಂಡಕ್ಕೆ ಮತ್ತೊಂದು ಅವಕಾಶವಿರಲಿದೆ. ಇನ್ನು ಅಂಕಪಟ್ಟಿಯಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನಗಳನ್ನು ಪಡೆದುಕೊಂಡಿರುವ ಮೈಸೂರು ವಾರಿಯರ್ಸ್ ಹಾಗೂ ಎಲಿಮಿನೇಟರ್ ಪಂದ್ಯವನ್ನಾಡಲಿದ್ದು, ಈ ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರಬಿದ್ದರೆ ಗೆಲ್ಲುವ ತಂಡ ಕ್ವಾಲಿಫೈಯರ್ 2 ಪಂದ್ಯಕ್ಕೆ ಲಗ್ಗೆ ಇಡಲಿದೆ.

ಪ್ಲೇಆಫ್ ವೇಳಾಪಟ್ಟಿ
ಆಗಸ್ಟ್ 23, ಮಧ್ಯಾಹ್ನ 3 ಗಂಟೆಗೆ: ಎಲಿಮಿನೇಟರ್, ಮೈಸೂರು ವಾರಿಯರ್ಸ್ vs ಹುಬ್ಬಳ್ಳಿ ಟೈಗರ್ಸ್
ಆಗಸ್ಟ್ 23, ಸಂಜೆ 7 ಗಂಟೆಗೆ: ಕ್ವಾಲಿಫೈಯರ್ 1, ಬೆಂಗಳೂರು ವಾರಿಯರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್
ಈ ಎರಡೂ ಪಂದ್ಯಗಳೂ ಸಹ ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications