ಮಹಾರಾಜ ಟ್ರೋಫಿ: ಪ್ಲೇಆಫ್ ಪ್ರವೇಶಿಸಿದ 4 ತಂಡಗಳು; ಪಂದ್ಯ ಯಾವಾಗ, ಮೊಬೈಲ್‌ನಲ್ಲಿ ವೀಕ್ಷಿಸುವುದು ಹೇಗೆ?

ಪ್ರಸ್ತುತ ನಡೆಯುತ್ತಿರುವ ಮಹಾರಾಜ ಟ್ರೋಫಿ ಮುಕ್ತಾಯದ ಹಂತಕ್ಕೆ ತಲುಪಿದ್ದು, ಆಗಸ್ಟ್ 7ರಂದು ಆರಂಭವಾಗಿದ್ದ ಟೂರ್ನಿಯ ಲೀಗ್ ಹಂತದ ಪಂದ್ಯಗಳು ನಿನ್ನೆಯಷ್ಟೇ ( ಆಗಸ್ಟ್ 22 ) ಮುಕ್ತಾಯಗೊಂಡಿವೆ. ಲೀಗ್ ಹಂತದಲ್ಲಿ ಒಟ್ಟು 30 ಪಂದ್ಯಗಳು ಜರುಗಿದ್ದು, ಅಂತಿಮವಾಗಿ ಬೆಂಗಳೂರು ಬ್ಲಾಸ್ಟರ್ಸ್, ಗುಲ್ಬರ್ಗಾ ಮಿಸ್ಟಿಕ್ಸ್, ಮೈಸೂರು ವಾರಿಯರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ತಂಡಗಳು ಪ್ಲೇಆಫ್ ಸುತ್ತಿಗೆ ಲಗ್ಗೆ ಇಟ್ಟಿವೆ.
ಇನ್ನು ಲೀಗ್ ಹಂತದ ಅಂತಿಮ ಪಂದ್ಯದ ಹೊತ್ತಿಗೆ ಬೆಂಗಳೂರು ಬ್ಲಾಸ್ಟರ್ಸ್, ಗುಲ್ಬರ್ಗಾ ಮಿಸ್ಟಿಕ್ಸ್ ಹಾಗೂ ಮೈಸೂರು ವಾರಿಯರ್ಸ್ ತಂಡಗಳು ಪ್ಲೇಆಫ್ ಪ್ರವೇಶಿಸಿದ್ದವು. ಹಾಗೂ ಲೀಗ್ ಹಂತದ ಅಂತಿಮ ಪಂದ್ಯದ ಮುಖಾಮುಖಿಯಲ್ಲಿ ಕಣಕ್ಕಿಳಿದಿದ್ದ ಹುಬ್ಬಳ್ಳಿ ಟೈಗರ್ಸ್ ಹಾಗೂ ಮಂಗಳೂರು ಯುನೈಟೆಡ್ ತಂಡಗಳು ಸರಿಸಮನಾದ ಅಂಕಗಳನ್ನು ಪಡೆದುಕೊಂಡಿದ್ದ ಕಾರಣ ಈ ಪಂದ್ಯದ ವಿಜೇತ ತಂಡ ಪ್ಲೇಆಫ್ ಅರ್ಹತೆ ಪಡೆದುಕೊಳ್ಳುವುದು ಖಚಿತವಾಗಿತ್ತು. ಹೀಗೆ ಸಾಕಷ್ಟು ದೊಡ್ಡ ಮಟ್ಟದ ಕುತೂಹಲವನ್ನು ಹುಟ್ಟಿಸಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮಂಗಳೂರು ಯುನೈಟೆಡ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 184 ರನ್ ಕಲೆಹಾಕಿ ಹುಬ್ಬಳ್ಳಿ ಟೈಗರ್ಸ್ ತಂಡಕ್ಕೆ 185 ರನ್‌ಗಳ ಕಠಿಣ ಗುರಿಯನ್ನೇ ನೀಡಿತು. ಈ ಗುರಿಯನ್ನು ಬೆನ್ನತ್ತಿದ ಹುಬ್ಬಳ್ಳಿ ಟೈಗರ್ಸ್ ನಾಯಕ ಲವ್‌ನೀತ್ ಸಿಸೋಡಿಯಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ 17.5 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 189 ರನ್ ಕಲೆಹಾಕಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್ ಸುತ್ತಿಗೆ ಪ್ರವೇಶ ಪಡೆದುಕೊಂಡಿತು.
ಹೀಗೆ ಲೀಗ್ ಹಂತದ ಅಂತಿಮ ಪಂದ್ಯದವರೆಗೂ ಯಾವ ತಂಡ ಪ್ಲೇಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಬಹುದು ಎಂಬ ನಿರೀಕ್ಷೆಯನ್ನು ಹುಟ್ಟಿಸಿದ್ದ ಟೂರ್ನಿಯ ಪ್ಲೇಆಫ್ ಸುತ್ತಿನ ಪಂದ್ಯಗಳು ಇಂದಿನಿಂದ ( ಆಗಸ್ಟ್ 23 ) ಆರಂಭಗೊಳ್ಳುತ್ತಿವೆ. ಈ ದಿನದಂದು ಎಲಿಮಿನೇಟರ್ ಹಾಗೂ ಕ್ವಾಲಿಫೈಯರ್ ಪಂದ್ಯಗಳು ಜರುಗಲಿದ್ದು, ಪ್ಲೇಆಫ್ ಸುತ್ತಿನಲ್ಲಿ ಯಾವ ತಂಡಗಳು ಮುಖಾಮುಖಿಯಾಗಲಿವೆ ಹಾಗೂ ಪಂದ್ಯಗಳ ನೇರಪ್ರಸಾರ ವೀಕ್ಷಿಸುವುದು ಹೇಗೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಪ್ಲೇಆಫ್ ಸುತ್ತಿಗೆ ಪ್ರವೇಶಿಸಿದ ತಂಡಗಳು
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳಲ್ಲಿ ಕಣಕ್ಕಿಳಿದು 7 ಪಂದ್ಯಗಳಲ್ಲಿ ಗೆದ್ದು ಉಳಿದ 3 ಪಂದ್ಯಗಳಲ್ಲಿ ಸೋತು 14 ಅಂಕಗಳನ್ನು ಪಡೆದುಕೊಂಡಿರುವ ಮಯಾಂಕ್ ಅಗರ್ವಾಲ್ ನಾಯಕತ್ವದ ಬೆಂಗಳೂರು ಬ್ಲಾಸ್ಟರ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡು ಒಂದನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕಕೊಂಡಿದೆ.
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳಲ್ಲಿ ಕಣಕ್ಕಿಳಿದು 6 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು 12 ಅಂಕಗಳನ್ನು ಪಡೆದುಕೊಂಡಿರುವ ಗುಲ್ಬರ್ಗಾ ಮಿಸ್ಟಿಕ್ಸ್ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಒಂದನೇ ಕ್ವಾಲಿಫೈಯರ್ ಪಂದ್ಯಕ್ಕೆ ಪ್ರವೇಶಿಸಿದೆ.
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳಲ್ಲಿ ಕಣಕ್ಕಿಳಿದು 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಮೈಸೂರು ವಾರಿಯರ್ಸ್ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದು, ಎಲಿಮಿನೇಟರ್ ಪಂದ್ಯವನ್ನು ಆಡಲು ಅರ್ಹತೆ ಪಡೆದುಕೊಂಡಿದೆ.
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳಲ್ಲಿ ಆಡಿ 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಹುಬ್ಬಳ್ಳಿ ಟೈಗರ್ಸ್ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದು ಎಲಿಮಿನೇಟರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ.

ಪ್ಲೇಆಫ್ ಸುತ್ತಿನ ಪಂದ್ಯಗಳ ವೇಳಾಪಟ್ಟಿ
ಆಗಸ್ಟ್ 23, ಮಧ್ಯಾಹ್ನ 3 ಗಂಟೆಗೆ: ಎಲಿಮಿನೇಟರ್, ಮೈಸೂರು ವಾರಿಯರ್ಸ್ vs ಹುಬ್ಬಳ್ಳಿ ಟೈಗರ್ಸ್ - ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ
ಆಗಸ್ಟ್ 23, ಸಂಜೆ 7 ಗಂಟೆಗೆ: ಕ್ವಾಲಿಫೈಯರ್ 1, ಬೆಂಗಳೂರು ವಾರಿಯರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್ - ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ

ನೇರಪ್ರಸಾರದ ಮಾಹಿತಿ
ಇನ್ನು ಈ ಪಂದ್ಯಗಳ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್ ಹಾಗೂ ಮೊಬೈಲ್‌ನಲ್ಲಿ ವೂಟ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications