ಮಹಾರಾಜ ಟ್ರೋಫಿ: 14 ಪಂದ್ಯಗಳ ನಂತರ ಅಂಕಪಟ್ಟಿಯಲ್ಲಿ ಯಾರು ಟಾಪ್? ಯಾರು ಲಾಸ್ಟ್?

ಸದ್ಯ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಿರುವ ಮಹಾರಾಜ ಟ್ರೋಫಿ ನಡೆಯುತ್ತಿದ್ದು, ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಟೂರ್ನಿಯ ಮೊದಲಾರ್ಧದ ಪಂದ್ಯಗಳು ಜರುಗುತ್ತಿವೆ. ಟೂರ್ನಿಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್, ಮೈಸೂರು ವಾರಿಯರ್ಸ್, ಹುಬ್ಬಳ್ಳಿ ಟೈಗರ್ಸ್, ಮಂಗಳೂರು ವಾರಿಯರ್ಸ್, ಶಿವಮೊಗ್ಗ ಸ್ಟ್ರೈಕರ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ಈ ಆರು ತಂಡಗಳು ಟ್ರೋಫಿಗಾಗಿ ಸೆಣಸಾಟ ನಡೆಸುತ್ತಿದ್ದು, ಟೂರ್ನಿಯ ಲೀಗ್ ಹಂತದ ಹದಿನಾಲ್ಕು ಪಂದ್ಯಗಳು ನಿನ್ನೆಗೆ ( ಆಗಸ್ಟ್ 13 ) ಮುಕ್ತಾಯಗೊಂಡಿವೆ.
ನಿನ್ನೆ ನಡೆದ ಪ್ರಥಮ ಪಂದ್ಯದಲ್ಲಿ ಶಿವಮೊಗ್ಗ ಸ್ಟ್ರೈಕರ್ಸ್ ವಿರುದ್ಧ ಹುಬ್ಬಳ್ಳಿ ಟೈಗರ್ಸ್ ಆರು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಮೈಸೂರು ವಾರಿಯರ್ಸ್ 6 ರನ್‌ಗಳ ಗೆಲುವನ್ನು ಕಂಡಿದೆ. ಹೀಗೆ ಟೂರ್ನಿಯ 13 ಮತ್ತು 14ನೇ ಪಂದ್ಯಗಳು ಮುಕ್ತಾಯವಾದ ನಂತರ ಅಂಕಪಟ್ಟಿಯಲ್ಲಿ ಕೆಲ ಬದಲಾವಣೆಗಳಾಗಿದ್ದು, ಯಾವ ತಂಡಗಳು ಯಾವ ಸ್ಥಾನದಲ್ಲಿವೆ ಹಾಗೂ ಎಷ್ಟು ಪಂದ್ಯಗಳನ್ನಾಡಿ, ಎಷ್ಟು ಪಂದ್ಯಗಳಲ್ಲಿ ಗೆದ್ದು ಎಷ್ಟು ಅಂಕಗಳನ್ನು ಪಡೆದುಕೊಂಡಿವೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

14 ಪಂದ್ಯಗಳ ನಂತರ ಯಾರು ಟಾಪ್?
ನಿನ್ನೆ ( ಆಗಸ್ಟ್ 13 ) ನಡೆದ ಹದಿನಾಲ್ಕನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ವಿರುದ್ಧ ಸೋತರೂ ಸಹ ಬೆಂಗಳೂರು ಬ್ಲಾಸ್ಟರ್ಸ್ ಅಗ್ರಸ್ಥಾನದಲ್ಲಿಯೇ ಮುಂದುವರಿದಿದೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 5 ಪಂದ್ಯಗಳನ್ನಾಡಿರುವ ಬೆಂಗಳೂರು ಬ್ಲಾಸ್ಟರ್ಸ್ 3 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋತು 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಇನ್ನು ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಮಣಿಸಿದ ಮೈಸೂರು ವಾರಿಯರ್ಸ್ ಕೂಡ 5 ಪಂದ್ಯಗಳನ್ನಾಡಿ ಮೂರರಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋತು 6 ಅಂಕಗಳನ್ನು ಪಡೆದುಕೊಂಡಿದ್ದು, ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿವೆ. ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಮೈಸೂರು ವಾರಿಯರ್ಸ್ ತಂಡಗಳ ನಡುವಿನ ಈ ಪಂದ್ಯದ ಫಲಿತಾಂಶ ಹೊರಬೀಳುವುದಕ್ಕೂ ಮುನ್ನ ಮೈಸೂರು ವಾರಿಯರ್ಸ್ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿತ್ತು. ಆದರೆ ಈ ಪಂದ್ಯದ ಗೆಲುವು ಮೈಸೂರು ವಾರಿಯರ್ಸ್ ತಂಡಕ್ಕೆ 2 ಸ್ಥಾನ ಜಿಗಿತ ಕಾಣಲು ನೆರವಾಗಿದೆ.

ಉಳಿದ ತಂಡಗಳ ಸ್ಥಾನಗಳು
14 ಪಂದ್ಯಗಳು ಮುಕ್ತಾಯವಾದ ನಂತರ ಬೆಂಗಳೂರು ಬ್ಲಾಸ್ಟರ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಹಾಗೂ ಮೈಸೂರು ವಾರಿಯರ್ಸ್ ದ್ವಿತೀಯ ಸ್ಥಾನದಲ್ಲಿದ್ದರೆ, ತಲಾ 4 ಪಂದ್ಯಗಳನ್ನಾಡಿ ಮೂರರಲ್ಲಿ ಗೆಲುವು ಸಾಧಿಸಿ ಒಂದರಲ್ಲಿ ಸೋತು 6 ಅಂಕಗಳನ್ನು ಪಡೆದುಕೊಂಡಿರುವ ಗುಲ್ಬರ್ಗಾ ಮಿಸ್ಟಿಕ್ಸ್ ತೃತೀಯ ಸ್ಥಾನ ಹಾಗೂ ಮಂಗಳೂರು ಯುನೈಟೆಡ್ ನಾಲ್ಕನೇ ಸ್ಥಾನದಲ್ಲಿವೆ. 5 ಪಂದ್ಯಗಳನ್ನಾಡಿ ಎರಡರಲ್ಲಿ ಗೆದ್ದು ಮೂರರಲ್ಲಿ ಸೋತಿರುವ ಹುಬ್ಳಿ ಟೈಗರ್ಸ್ ಐದನೇ ಸ್ಥಾನ ಹಾಗೂ 5 ಪಂದ್ಯಗಳನ್ನಾಡಿ ಯಾವುದೇ ಪಂದ್ಯದಲ್ಲಿಯೂ ಗೆಲುವು ಸಾಧಿಸದೇ ಇರುವ ಶಿವಮೊಗ್ಗ ಸ್ಟ್ರೈಕರ್ಸ್ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.

ಉಳಿದ ಪಂದ್ಯಗಳ ವೇಳಾಪಟ್ಟಿ
ಆಗಸ್ಟ್ 14: ಮೈಸೂರು ವಾರಿಯರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್ & ಗುಲ್ಬರ್ಗ ಮಿಸ್ಟಿಕ್ಸ್ vs ಮಂಗಳೂರು ಯುನೈಟೆಡ್
ಆಗಸ್ಟ್ 15: ಮಂಗಳೂರು ಯುನೈಟೆಡ್ vs ಬೆಂಗಳೂರು ಬ್ಲಾಸ್ಟರ್ಸ್ & ಗುಲ್ಬರ್ಗ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್
ಆಗಸ್ಟ್ 16: ವಿಶ್ರಾಂತಿ ದಿನ
ಆಗಸ್ಟ್ 17: ಮೈಸೂರು ವಾರಿಯರ್ಸ್ vs ಮಂಗಳೂರು ಯುನೈಟೆಡ್ & ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್
ಆಗಸ್ಟ್ 18: ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಮೈಸೂರು ವಾರಿಯರ್ಸ್
ಆಗಸ್ಟ್ 19: ಹುಬ್ಬಳ್ಳಿ ಟೈಗರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್ & ಮಂಗಳೂರು ಯುನೈಟೆಡ್ vs ಗುಲ್ಬರ್ಗಾ ಮಿಸ್ಟಿಕ್ಸ್
ಆಗಸ್ಟ್ 20: ಮಂಗಳೂರು ಯುನೈಟೆಡ್ vs ಶಿವಮೊಗ್ಗ ಸ್ಟ್ರೈಕರ್ಸ್ & ಮೈಸೂರು ವಾರಿಯರ್ಸ್ vs ಬೆಂಗಳೂರು ಬ್ಲಾಸ್ಟರ್ಸ್
ಆಗಸ್ಟ್ 21: ಮೈಸೂರು ವಾರಿಯರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಬೆಂಗಳೂರು ಬ್ಲಾಸ್ಟರ್ಸ್
ಆಗಸ್ಟ್ 22: ಶಿವಮೊಗ್ಗ ಸ್ಟ್ರೈಕರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಮಂಗಳೂರು ಯುನೈಟೆಡ್
ಆಗಸ್ಟ್ 23: ಎಲಿಮಿನೇಟರ್ & ಕ್ವಾಲಿಫೈಯರ್ 1
ಆಗಸ್ಟ್ 24: ವಿಶ್ರಾಂತಿಯ ದಿನ
ಆಗಸ್ಟ್ 25: ಎರಡನೇ ಕ್ವಾಲಿಫೈಯರ್ ಪಂದ್ಯ
ಆಗಸ್ಟ್ 26: ಫೈನಲ್ ಪಂದ್ಯ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications