ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮಹಾರಾಜ ಟ್ರೋಫಿ: ಅರ್ಧ ಟೂರ್ನಿ ಮುಕ್ತಾಯದ ನಂತರ ಶಿವಮೊಗ್ಗಕ್ಕೆ ಕೊನೆಯ ಸ್ಥಾನ; ನಂಬರ್ 1 ಯಾರು?

Maharaja Trophy 2022: Points table standings after the completion of 18 matches

ಸದ್ಯ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಿರುವ ಮಹಾರಾಜ ಟ್ರೋಫಿ ನಡೆಯುತ್ತಿದ್ದು, ಈ ಟೂರ್ನಿಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್, ಮೈಸೂರು ವಾರಿಯರ್ಸ್, ಶಿವಮೊಗ್ಗ ಸ್ಟ್ರೈಕರ್ಸ್, ಮಂಗಳೂರು ಯುನೈಟೆಡ್, ಹುಬ್ಬಳ್ಳಿ ಟೈಗರ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ಎಂಬ 6 ತಂಡಗಳು ಕಣಕ್ಕಿಳಿದು ಟ್ರೋಫಿಗಾಗಿ ಸೆಣಸಾಟ ನಡೆಸಿವೆ.

Asia Cup 2022: ನನಗೆ ಇದು ಮತ್ತೊಂದು ಪಂದ್ಯವಷ್ಟೆ; IND vs PAK ಪಂದ್ಯದ ಕುರಿತು ಗಂಗೂಲಿ ಮಾತುAsia Cup 2022: ನನಗೆ ಇದು ಮತ್ತೊಂದು ಪಂದ್ಯವಷ್ಟೆ; IND vs PAK ಪಂದ್ಯದ ಕುರಿತು ಗಂಗೂಲಿ ಮಾತು

ಈ ಹಿಂದೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಬೋರ್ಡ್ ಕರ್ನಾಟಕ ಪ್ರೀಮಿಯರ್ ಲೀಗ್ ಎಂಬ ಜನಪ್ರಿಯ ಟೂರ್ನಿಯ 8 ಆವೃತ್ತಿಗಳನ್ನು ಯಶಸ್ವಿಯಾಗಿ ನಡೆಸಿತ್ತು ಆದರೆ ನಂತರದಲ್ಲಿ ಬೆಟ್ಟಿಂಗ್ ಹಾಗೂ ಸ್ಪಾಟ್ ಫಿಕ್ಸಿಂಗ್ ವಿವಾದಕ್ಕೆ ಒಳಗಾದ ಕಾರಣ ಆ ಟೂರ್ನಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಅದೇ ಮಾದರಿಯಲ್ಲಿ ಸದ್ಯ ನಡೆಯುತ್ತಿರುವ ಮಹಾರಾಜಾ ಟ್ರೋಫಿಯನ್ನು ಸಹ ಆಯೋಜಿಸಲಾಗಿದ್ದು, ಟೂರ್ನಿಯಲ್ಲಿ ಭಾಗವಹಿಸಿರುವ ಒಟ್ಟು 6 ತಂಡಗಳು ಲೀಗ್ ಹಂತದಲ್ಲಿನ ತಮ್ಮ ಮೊದಲ 6 ಪಂದ್ಯಗಳನ್ನು ಆಡಿ ಮುಗಿಸಿವೆ.

ಭಾರತ ಫುಟ್‌ಬಾಲ್‌ ಫೆಡರೇಶನ್ ಅಮಾನತುಗೊಳಿಸಿದ ಫಿಫಾ; ಭಾರತಕ್ಕೆ ಭಾರೀ ಮುಖಭಂಗಭಾರತ ಫುಟ್‌ಬಾಲ್‌ ಫೆಡರೇಶನ್ ಅಮಾನತುಗೊಳಿಸಿದ ಫಿಫಾ; ಭಾರತಕ್ಕೆ ಭಾರೀ ಮುಖಭಂಗ

ಹೌದು, ಟೂರ್ನಿಯ ಲೀಗ್ ಹಂತದ 18 ಪಂದ್ಯಗಳು ಆಗಸ್ಟ್ 15ಕ್ಕೆ ಮುಕ್ತಾಯಗೊಂಡಿದ್ದು, ಈ ಎಲ್ಲ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದವು. ಈ ಪಂದ್ಯಗಳ ನಂತರ 1 ದಿನದ ವಿಶ್ರಾಂತಿ ಇದ್ದು ಆಟಗಾರರು ಬೆಂಗಳೂರಿಗೆ ಮುಂದಿನ ಪಂದ್ಯಗಳನ್ನು ಆಡಲು ಪ್ರಯಾಣ ಕೈಗೊಳ್ಳುತ್ತಿದ್ದಾರೆ. ಹೀಗೆ ಟೂರ್ನಿಯ 18 ಪಂದ್ಯಗಳು ಮುಕ್ತಾಯವಾದ ನಂತರ ಯಾವ ತಂಡಗಳು ಎಷ್ಟು ಪಂದ್ಯಗಳಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನ ಪಡೆದುಕೊಂಡಿವೆ ಎಂಬುದರ ಕುರಿತಾದ ಮಾಹಿತಿ ಈ ಕೆಳಗಿನಂತಿದೆ.

ಅಂಕ ಪಟ್ಟಿ ಹೀಗಿದೆ

ಅಂಕ ಪಟ್ಟಿ ಹೀಗಿದೆ

ಮಹಾರಾಜ ಟ್ರೋಫಿಯ ಲೀಗ್ ಹಂತದ 18 ಪಂದ್ಯಗಳು ಮುಕ್ತಾಯವಾದ ನಂತರ ತಂಡಗಳು ಪಡೆದುಕೊಂಡಿರುವ ಅಂಕ ಹಾಗೂ ಸ್ಥಾನಗಳ ಕುರಿತಾದ ಪಟ್ಟಿ ಕೆಳಕಂಡಂತಿದೆ.

1. 6 ಪಂದ್ಯಗಳನ್ನಾಡಿರುವ ಬೆಂಗಳೂರು ಬ್ಲಾಸ್ಟರ್ಸ್ 4 ಪಂದ್ಯಗಳಲ್ಲಿ ಗೆದ್ದು ಉಳಿದೆರಡು ಪಂದ್ಯಗಳಲ್ಲಿ ಸೋತು ಉತ್ತಮ ನೆಟ್ ರನ್ ರೇಟ್ ಜತೆಗೆ 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

2. ಮಂಗಳೂರು ಯುನೈಟೆಡ್ ತಂಡ ಕೂಡ 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು ಉಳಿದೆರಡು ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ತನ್ನದಾಗಿಸಿಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ.

3. ಮೈಸೂರು ವಾರಿಯರ್ಸ್ ತಂಡ ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿ ಮೂರರಲ್ಲಿ ಗೆದ್ದು ಉಳಿದ 3 ಪಂದ್ಯಗಳಲ್ಲಿ ಸೋತು 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ.

4. ಗುಲ್ಬರ್ಗ ಮಿಸ್ಟಿಕ್ಸ್ ತಂಡ ಕೂಡ ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿ ಮೂರರಲ್ಲಿ ಗೆದ್ದು ಉಳಿದ 3 ಪಂದ್ಯಗಳಲ್ಲಿ ಸೋತಿದ್ದು 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

5. ಹುಬ್ಬಳ್ಳಿ ಟೈಗರ್ಸ್ ತಂಡ ಕೂಡ ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿ ಮೂರರಲ್ಲಿ ಗೆದ್ದು ಉಳಿದ 3 ಪಂದ್ಯಗಳಲ್ಲಿ ಸೋತಿದ್ದು 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

6. ಇನ್ನು ಶಿವಮೊಗ್ಗ ಸ್ಟ್ರೈಕರ್ಸ್ ತಂಡ ಕೂಡ ಟೂರ್ನಿಯಲ್ಲಿ ಇಲ್ಲಿಯವರೆಗೂ 6 ಪಂದ್ಯಗಳಲ್ಲಿ ಭಾಗವಹಿಸಿದ್ದು ಕೇವಲ ಒಂದೇ ಒಂದು ಪಂದ್ಯದಲ್ಲಿ ಗೆದ್ದು ಉಳಿದ ಎಲ್ಲಾ 5 ಪಂದ್ಯಗಳಲ್ಲಿಯೂ ಸೋಲನ್ನು ಅನುಭವಿಸಿ ಕೇವಲ 2 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಮುಂದಿನ ಪಂದ್ಯಗಳ ವೇಳಾಪಟ್ಟಿ

ಮುಂದಿನ ಪಂದ್ಯಗಳ ವೇಳಾಪಟ್ಟಿ

ಆಗಸ್ಟ್ 16: ವಿಶ್ರಾಂತಿ ದಿನ

ಆಗಸ್ಟ್ 17: ಮೈಸೂರು ವಾರಿಯರ್ಸ್ vs ಮಂಗಳೂರು ಯುನೈಟೆಡ್ & ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್

ಆಗಸ್ಟ್ 18: ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಮೈಸೂರು ವಾರಿಯರ್ಸ್

ಆಗಸ್ಟ್ 19: ಹುಬ್ಬಳ್ಳಿ ಟೈಗರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್ & ಮಂಗಳೂರು ಯುನೈಟೆಡ್ vs ಗುಲ್ಬರ್ಗಾ ಮಿಸ್ಟಿಕ್ಸ್

ಆಗಸ್ಟ್ 20: ಮಂಗಳೂರು ಯುನೈಟೆಡ್ vs ಶಿವಮೊಗ್ಗ ಸ್ಟ್ರೈಕರ್ಸ್ & ಮೈಸೂರು ವಾರಿಯರ್ಸ್ vs ಬೆಂಗಳೂರು ಬ್ಲಾಸ್ಟರ್ಸ್

ಆಗಸ್ಟ್ 21: ಮೈಸೂರು ವಾರಿಯರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಬೆಂಗಳೂರು ಬ್ಲಾಸ್ಟರ್ಸ್

ಆಗಸ್ಟ್ 22: ಶಿವಮೊಗ್ಗ ಸ್ಟ್ರೈಕರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಮಂಗಳೂರು ಯುನೈಟೆಡ್

ಆಗಸ್ಟ್ 23: ಎಲಿಮಿನೇಟರ್ & ಕ್ವಾಲಿಫೈಯರ್ 1

ಆಗಸ್ಟ್ 24: ವಿಶ್ರಾಂತಿಯ ದಿನ

ಆಗಸ್ಟ್ 25: ಎರಡನೇ ಕ್ವಾಲಿಫೈಯರ್ ಪಂದ್ಯ

ಆಗಸ್ಟ್ 26: ಫೈನಲ್ ಪಂದ್ಯ

ಮುಂದಿನ ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಳ್ಳಲು ಪೈಪೋಟಿ

ಮುಂದಿನ ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಳ್ಳಲು ಪೈಪೋಟಿ

ಅಂಕಪಟ್ಟಿಯನ್ನು ಗಮನಿಸಿದರೆ ಶಿವಮೊಗ್ಗ ಸ್ಟ್ರೈಕರ್ಸ್ ಹೊರತುಪಡಿಸಿ ಉಳಿದೆಲ್ಲ ತಂಡಗಳು ಸಹ ಉತ್ತಮ ಅಂಕಗಳನ್ನೇ ಪಡೆದುಕೊಂಡಿದ್ದು ಅಂಕಪಟ್ಟಿಯಲ್ಲಿ ಟಾಪ್ 4 ಸ್ಥಾನಗಳನ್ನು ಗಿಟ್ಟಿಸಿಕೊಂಡು ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಳ್ಳುವತ್ತ ಚಿತ್ತ ನೆಟ್ಟಿವೆ. ಈ ಮೂಲಕ ಈ ಐದೂ ತಂಡಗಳ ನಡುವೆ ಮುಂದಿನ ಸುತ್ತಿನ ಅರ್ಹತೆಗಾಗಿ ನಂತರದ ಪಂದ್ಯಗಳಲ್ಲಿ ಜಿದ್ದಾಜಿದ್ದಿನ ಪೈಪೋಟಿ ಏರ್ಪಡುವುದು ಖಚಿತ.

Story first published: Tuesday, August 16, 2022, 9:56 [IST]
Other articles published on Aug 16, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X