ಮಹಾರಾಜ ಟ್ರೋಫಿ: 20 ಪಂದ್ಯಗಳ ಮುಕ್ತಾದ ನಂತರ ಅಂಕಪಟ್ಟಿ ಹೀಗಿದೆ; ಬೆಂಗಳೂರು ತಂಡ ಟಾಪ್!

ಸದ್ಯ ಕರ್ನಾಟಕ್ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಿರುವ ಮಹಾರಾಜ ಟಿ ಟ್ವೆಂಟಿ ಲೀಗ್ ಟೂರ್ನಿ ನಡೆಯುತ್ತಿದ್ದು, ನಿನ್ನೆಗೆ ( ಆಗಸ್ಟ್ 17 ) ಟೂರ್ನಿಯ ಮೊದಲ 20 ಪಂದ್ಯಗಳು ಮುಕ್ತಾಯಗೊಂಡಿವೆ. ಟೂರ್ನಿಯ ಮೊದಲ 18 ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದರೆ, ನಿನ್ನೆಯಿಂದ ಪಂದ್ಯಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿವೆ. ನಿನ್ನೆ ಮಧ್ಯಾಹ್ನ ನಡೆದ ಪಂದ್ಯದಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ ಮೈಸೂರು ವಾರಿಯರ್ಸ್ ಜಯ ಸಾಧಿಸಿತ್ತು ಹಾಗೂ ಸಂಜೆ ನಡೆದ ಪಂದ್ಯದಲ್ಲಿ ಶಿವಮೊಗ್ಗ ಸ್ಟ್ರೈಕರ್ಸ್ ವಿರುದ್ಧ ಬೆಂಗಳೂರು ಬ್ಲಾಸ್ಟರ್ಸ್ ಗೆದ್ದು ಬೀಗಿತ್ತು.
ಹೀಗೆ ನಿನ್ನೆಯ ಪಂದ್ಯಗಳು ಮುಕ್ತಾಯವಾದ ನಂತರ ಟೂರ್ನಿಯಲ್ಲಿ ಕಣಕ್ಕಿಳಿದಿರುವ ಆರು ತಂಡಗಳ ಪೈಕಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಕಣಕ್ಕಿಳಿದು ಎಷ್ಟು ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಎಷ್ಟು ಪಂದ್ಯಗಳಲ್ಲಿ ಸೋತಿದೆ ಎಂಬ ಮಾಹಿತಿ ಮತ್ತು ಟೂರ್ನಿಯಲ್ಲಿ ತಂಡಗಳು ಅಂಕಪಟ್ಟಿಯಲ್ಲಿ ಯಾವ ಸ್ಥಾನಗಳನ್ನು ಪಡೆದುಕೊಂಡಿವೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಅಂಕಪಟ್ಟಿ
ನಿನ್ನೆಗೆ ( ಆಗಸ್ಟ್ 17) ಈ ಮಹಾರಾಜ ಟ್ರೋಫಿಯ ಲೀಗ್ ಹಂತದ 20 ಪಂದ್ಯಗಳು ಮುಕ್ತಾಯವಾಗಿದ್ದು, ಅಂಕಪಟ್ಟಿ ಈ ಕೆಳಕಂಡಂತಿದೆ.
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳಲ್ಲಿ ಕಣಕ್ಕಿಳಿದು 5 ಪಂದ್ಯಗಳಲ್ಲಿ ಗೆದ್ದು ಉಳಿದ 2 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಮಯಾಂಕ್ ಅಗರ್ವಾಲ್ ನಾಯಕತ್ವದ ಬೆಂಗಳೂರು ಬ್ಲಾಸ್ಟರ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳಲ್ಲಿ ಕಣಕ್ಕಿಳಿದು 4 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಂಡಿರುವ ಮೈಸೂರು ವಾರಿಯರ್ಸ್ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ.
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳಲ್ಲಿ ಕಣಕ್ಕಿಳಿದು 4 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಂಡಿರುವ ಮಂಗಳೂರು ಯುನೈಟೆಡ್ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ.
* ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತು 6 ಅಂಕಗಳನ್ನು ಪಡೆದುಕೊಂಡಿರುವ ಗುಲ್ಬರ್ಗಾ ಮಿಸ್ಟಿಕ್ಸ್ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 6 ಪಂದ್ಯಗಳಲ್ಲಿ ಆಡಿ 3 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತು 6 ಅಂಕಗಳನ್ನು ಪಡೆದುಕೊಂಡಿರುವ ಹುಬ್ಬಳ್ಳಿ ಟೈಗರ್ಸ್ ತಂಡ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳಲ್ಲಿ ಕಣಕ್ಕಿಳಿದು 1 ಪಂದ್ಯದಲ್ಲಿ ಮಾತ್ರ ಗೆದ್ದು, ಉಳಿದ 6 ಪಂದ್ಯಗಳಲ್ಲಿ ಸೋತು ಕೇವಲ ಎರಡು ಅಂಕಗಳನ್ನು ಮಾತ್ರ ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.

ಟೂರ್ನಿಯ ಉಳಿದ ಪಂದ್ಯಗಳ ವೇಳಾಪಟ್ಟಿ
ಆಗಸ್ಟ್ 18: ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಮೈಸೂರು ವಾರಿಯರ್ಸ್
ಆಗಸ್ಟ್ 19: ಹುಬ್ಬಳ್ಳಿ ಟೈಗರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್ & ಮಂಗಳೂರು ಯುನೈಟೆಡ್ vs ಗುಲ್ಬರ್ಗಾ ಮಿಸ್ಟಿಕ್ಸ್
ಆಗಸ್ಟ್ 20: ಮಂಗಳೂರು ಯುನೈಟೆಡ್ vs ಶಿವಮೊಗ್ಗ ಸ್ಟ್ರೈಕರ್ಸ್ & ಮೈಸೂರು ವಾರಿಯರ್ಸ್ vs ಬೆಂಗಳೂರು ಬ್ಲಾಸ್ಟರ್ಸ್
ಆಗಸ್ಟ್ 21: ಮೈಸೂರು ವಾರಿಯರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಬೆಂಗಳೂರು ಬ್ಲಾಸ್ಟರ್ಸ್
ಆಗಸ್ಟ್ 22: ಶಿವಮೊಗ್ಗ ಸ್ಟ್ರೈಕರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಮಂಗಳೂರು ಯುನೈಟೆಡ್
ಆಗಸ್ಟ್ 23: ಎಲಿಮಿನೇಟರ್ & ಕ್ವಾಲಿಫೈಯರ್ 1
ಆಗಸ್ಟ್ 24: ವಿಶ್ರಾಂತಿಯ ದಿನ
ಆಗಸ್ಟ್ 25: ಎರಡನೇ ಕ್ವಾಲಿಫೈಯರ್ ಪಂದ್ಯ
ಆಗಸ್ಟ್ 26: ಫೈನಲ್ ಪಂದ್ಯ

ಇನ್ನೊಂದು ಪಂದ್ಯ ಗೆದ್ದರೂ ಬೆಂಗಳೂರು ಬ್ಲಾಸ್ಟರ್ಸ್ ಸೆಮಿಫೈನಲ್‌ಗೆ
ಸದ್ಯ ಟೂರ್ನಿಯಲ್ಲಿ 7 ಪಂದ್ಯಗಳಲ್ಲಿ ಕಣಕ್ಕಿಳಿದು 5 ಪಂದ್ಯಗಳಲ್ಲಿ ಗೆದ್ದು ಉಳಿದ 2 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಬೆಂಗಳೂರು ಬ್ಲಾಸ್ಟರ್ಸ್ ಈಗಾಗಲೇ ಸೆಮಿಫೈನಲ್ ಸುತ್ತಿಗೆ ಸಮೀಪಿಸಿದ್ದು ಇನ್ನೊಂದು ಪಂದ್ಯ ಗೆದ್ದರೂ ಸೆಮಿಫೈನಲ್ ಸುತ್ತಿಗೆ ಪ್ರವೇಶಿಸಲು ಬೇಕಾದ ಅಂಕಗಳನ್ನು ಪಡೆದುಕೊಳ್ಳಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications