ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮಹಾರಾಜ ಟ್ರೋಫಿ: 22 ಲೀಗ್ ಪಂದ್ಯಗಳ ನಂತರದ ಅಂಕಪಟ್ಟಿ ಹೇಗಿದೆ? ನಂಬರ್ 1 ಯಾರು?

Maharaja Trophy 2022: Points table standings after the completion of 22 matches

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಿರುವ ಮಹಾರಾಜ ಟಿ ಟ್ವೆಂಟಿ ಲೀಗ್ ಸದ್ಯ ನಡೆಯುತ್ತಿದ್ದು, ಲೀಗ್ ಹಂತದ ಮೊದಲಾರ್ಧದ ಪಂದ್ಯಗಳು ಮೈಸೂರಿನಲ್ಲಿ ಮುಕ್ತಾಯವಾದ ನಂತರ ಉಳಿದ ಪಂದ್ಯಗಳು ಸದ್ಯ ಬೆಂಗಳೂರಿನಲ್ಲಿ ಜರುಗುತ್ತಿವೆ. ನಿನ್ನೆಗೆ ( ಆಗಸ್ಟ್ 18 ) ಟೂರ್ನಿಯ ಲೀಗ್ ಹಂತದ 22 ಪಂದ್ಯಗಳು ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು, ಲೀಗ್ ಹಂತ ಮುಕ್ತಾಯದ ಸನಿಹದಲ್ಲಿದೆ.

IND vs ZIM: 6 ತಿಂಗಳ ನಂತರ ಕಂಬ್ಯಾಕ್ ಮಾಡಿ, ಕಠಿಣ ಪೈಪೋಟಿಗೆ ತೆರೆದುಕೊಂಡ ದೀಪಕ್ ಚಹಾರ್IND vs ZIM: 6 ತಿಂಗಳ ನಂತರ ಕಂಬ್ಯಾಕ್ ಮಾಡಿ, ಕಠಿಣ ಪೈಪೋಟಿಗೆ ತೆರೆದುಕೊಂಡ ದೀಪಕ್ ಚಹಾರ್

ನಿನ್ನೆ ನಡೆದ 21ನೇ ಪಂದ್ಯದಲ್ಲಿ ಬಲಿಷ್ಠ ಬೆಂಗಳೂರು ಬ್ಲಾಸ್ಟರ್ಸ್ ತಂಡದ ವಿರುದ್ಧ ಗುಲ್ಬರ್ಗಾ ಮಿಸ್ಟಿಕ್ಸ್ 6 ವಿಕೆಟ್‍ಗಳ ಜಯ ಸಾಧಿಸಿದರೆ, 22ನೇ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ವಿರುದ್ಧ ಮೈಸೂರು ವಾರಿಯರ್ಸ್ 2 ರನ್‌ಗಳ ರೋಚಕ ಜಯವನ್ನು ಕಂಡಿದೆ. ಹೀಗೆ ನಿನ್ನೆಯ ಪಂದ್ಯಗಳ ಫಲಿತಾಂಶ ಹೊರಬಿದ್ದ ನಂತರ ಅಂಕಪಟ್ಟಿಯಲ್ಲಿ ಬದಲಾವಣೆಗಳಾಗಿದ್ದು, ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಗೆದ್ದ ಗುಲ್ಬರ್ಗಾ ಮಿಸ್ಟಿಕ್ಸ್ ತೃತೀಯ ಸ್ಥಾನಕ್ಕೇರಿದರೆ, ಇನ್ನು ಹುಬ್ಬಳ್ಳಿ ಟೈಗರ್ಸ್ ವಿರುದ್ಧ ಮೈಸೂರು ವಾರಿಯರ್ಸ್ ಗೆದ್ದು ಬೆಂಗಳೂರು ಬ್ಲಾಸ್ಟರ್ಸ್ ತಂಡದಷ್ಟೇ ಅಂಕವನ್ನು ಪಡೆದುಕೊಂಡರೂ ಸಹ ಅಗ್ರಸ್ಥಾನಕ್ಕೆ ಏರಲಾಗದೆ ದ್ವಿತೀಯ ಸ್ಥಾನದಲ್ಲೇ ಉಳಿದುಕೊಂಡಿದೆ.

ಮಹಾರಾಜ ಟ್ರೋಫಿ: ಪಡಿಕ್ಕಲ್ ಸುನಾಮಿ; ಮಯಾಂಕ್ ಪಡೆಗೆ ಸೋಲುಣಿಸಿದ ಗುಲ್ಬರ್ಗಾ!ಮಹಾರಾಜ ಟ್ರೋಫಿ: ಪಡಿಕ್ಕಲ್ ಸುನಾಮಿ; ಮಯಾಂಕ್ ಪಡೆಗೆ ಸೋಲುಣಿಸಿದ ಗುಲ್ಬರ್ಗಾ!

ಹೌದು, ಅಂಕಪಟ್ಟಿಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಮೈಸೂರು ವಾರಿಯರ್ಸ್ ಸರಿಸಮನಾದ ಅಂಕಗಳನ್ನು ಪಡೆದುಕೊಂಡಿದ್ದರೂ ಸಹ ಉತ್ತಮ ನೆಟ್ ರನ್ ರೇಟ್ ಇರುವ ಕಾರಣ ಬೆಂಗಳೂರು ಬ್ಲಾಸ್ಟರ್ಸ್ ಅಗ್ರಸ್ಥಾನದಲ್ಲಿದೆ. ಹಾಗಿದ್ದರೆ ಟೂರ್ನಿಯ ಲೀಗ್ ಹಂತದ 22 ಪಂದ್ಯಗಳು ಮುಕ್ತಾಯವಾದ ನಂತರ ಅಂಕಪಟ್ಟಿಯಲ್ಲಿ ಯಾವ ತಂಡಗಳು ಎಷ್ಟು ಅಂಕಗಳನ್ನು ಪಡೆದುಕೊಂಡು ಎಷ್ಟನೇ ಸ್ಥಾನದಲ್ಲಿವೆ ಎಂಬುದರ ಕುರಿತಾದ ಮಾಹಿತಿ ಕೆಳಕಂಡಂತಿದೆ.

22 ಪಂದ್ಯಗಳ ನಂತರ ಅಂಕಪಟ್ಟಿ

22 ಪಂದ್ಯಗಳ ನಂತರ ಅಂಕಪಟ್ಟಿ

* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳಲ್ಲಿ ಕಣಕ್ಕಿಳಿದು 5 ಪಂದ್ಯಗಳಲ್ಲಿ ಗೆದ್ದು ಉಳಿದ 3 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಮಯಾಂಕ್ ಅಗರ್ವಾಲ್ ನಾಯಕತ್ವದ ಬೆಂಗಳೂರು ಬ್ಲಾಸ್ಟರ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳಲ್ಲಿ ಕಣಕ್ಕಿಳಿದು 5 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಮೈಸೂರು ವಾರಿಯರ್ಸ್ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ.

* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳಲ್ಲಿ ಕಣಕ್ಕಿಳಿದು 4 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಂಡಿರುವ ಗುಲ್ಬರ್ಗಾ ಮಿಸ್ಟಿಕ್ಸ್ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ.

* ಟೂರ್ನಿಯಲ್ಲಿ ಒಟ್ಟು 7 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಂಡಿರುವ ಮಂಗಳೂರು ಯುನೈಟೆಡ್ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳಲ್ಲಿ ಆಡಿ 3 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು 6 ಅಂಕಗಳನ್ನು ಪಡೆದುಕೊಂಡಿರುವ ಹುಬ್ಬಳ್ಳಿ ಟೈಗರ್ಸ್ ತಂಡ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳಲ್ಲಿ ಕಣಕ್ಕಿಳಿದು 1 ಪಂದ್ಯದಲ್ಲಿ ಮಾತ್ರ ಗೆದ್ದು, ಉಳಿದ 6 ಪಂದ್ಯಗಳಲ್ಲಿ ಸೋತು ಕೇವಲ ಎರಡು ಅಂಕಗಳನ್ನು ಮಾತ್ರ ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.

ಉಳಿದ ಪಂದ್ಯಗಳ ವೇಳಾಪಟ್ಟಿ

ಉಳಿದ ಪಂದ್ಯಗಳ ವೇಳಾಪಟ್ಟಿ

ಆಗಸ್ಟ್ 19: ಹುಬ್ಬಳ್ಳಿ ಟೈಗರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್ & ಮಂಗಳೂರು ಯುನೈಟೆಡ್ vs ಗುಲ್ಬರ್ಗಾ ಮಿಸ್ಟಿಕ್ಸ್

ಆಗಸ್ಟ್ 20: ಮಂಗಳೂರು ಯುನೈಟೆಡ್ vs ಶಿವಮೊಗ್ಗ ಸ್ಟ್ರೈಕರ್ಸ್ & ಮೈಸೂರು ವಾರಿಯರ್ಸ್ vs ಬೆಂಗಳೂರು ಬ್ಲಾಸ್ಟರ್ಸ್

ಆಗಸ್ಟ್ 21: ಮೈಸೂರು ವಾರಿಯರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಬೆಂಗಳೂರು ಬ್ಲಾಸ್ಟರ್ಸ್

ಆಗಸ್ಟ್ 22: ಶಿವಮೊಗ್ಗ ಸ್ಟ್ರೈಕರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಮಂಗಳೂರು ಯುನೈಟೆಡ್

ಆಗಸ್ಟ್ 23: ಎಲಿಮಿನೇಟರ್ & ಕ್ವಾಲಿಫೈಯರ್ 1

ಆಗಸ್ಟ್ 24: ವಿಶ್ರಾಂತಿಯ ದಿನ

ಆಗಸ್ಟ್ 25: ಎರಡನೇ ಕ್ವಾಲಿಫೈಯರ್ ಪಂದ್ಯ

ಆಗಸ್ಟ್ 26: ಫೈನಲ್ ಪಂದ್ಯ

ಶಿವಮೊಗ್ಗ ಸ್ಟ್ರೈಕರ್ಸ್ ಟೂರ್ನಿಯಿಂದ ಬಹುತೇಕ ಹೊರಕ್ಕೆ

ಶಿವಮೊಗ್ಗ ಸ್ಟ್ರೈಕರ್ಸ್ ಟೂರ್ನಿಯಿಂದ ಬಹುತೇಕ ಹೊರಕ್ಕೆ

ಕೃಷ್ಣಪ್ಪ ಗೌತಮ್ ನಾಯಕನಾಗಿ ಮುನ್ನಡೆಸುತ್ತಿರುವ ಶಿವಮೊಗ್ಗ ಸ್ಟ್ರೈಕರ್ಸ್ ಟೂರ್ನಿಯಲ್ಲಿನ ತನ್ನ 7 ಲೀಗ್ ಹಂತದ ಪಂದ್ಯಗಳು ಮುಕ್ತಾಯವಾದ ನಂತರ ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಜಯ ಸಾಧಿಸಿದ್ದು, ಉಳಿದ 6 ಪಂದ್ಯಗಳಲ್ಲಿ ಸೋತಿದೆ. ಈ ಮೂಲಕ ಟೂರ್ನಿಯಲ್ಲಿ ಶಿವಮೊಗ್ಗ ಸ್ಟ್ರೈಕರ್ಸ್ ತಂಡಕ್ಕೆ ಇನ್ನೂ 3 ಪಂದ್ಯಗಳು ಬಾಕಿ ಉಳಿದಿದ್ದು ಈ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದರೂ ಸಹ ಶಿವಮೊಗ್ಗ ಸ್ಟ್ರೈಕರ್ಸ್ ಅರ್ಹತೆ ಪಡೆದುಕೊಳ್ಳುವಲ್ಲಿ ವಿಫಲವಾಗಲಿದೆ ಹಾಗೂ ಶಿವಮೊಗ್ಗ ಸ್ಟ್ರೈಕರ್ಸ್ ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲುವುದು ಸಹ ದೂರದ ಮಾತು ಎನ್ನಬಹುದು. ಈ ಮೂಲಕ ಶಿವಮೊಗ್ಗ ಸ್ಟ್ರೈಕರ್ಸ್ ಈಗಾಗಲೇ ಟೂರ್ನಿಯಿಂದ ಬಹುತೇಕ ಹೊರಬಿದ್ದಿದೆ ಎನ್ನಬಹುದು.

Story first published: Friday, August 19, 2022, 11:13 [IST]
Other articles published on Aug 19, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X