Maharaja Trophy: ಪ್ಲೇಆಫ್ ಆರಂಭಕ್ಕೆ 6 ಪಂದ್ಯಗಳಷ್ಟೇ ಬಾಕಿ; ಅಂಕಪಟ್ಟಿಯಲ್ಲಿ ಬೆಂಗಳೂರು ಟಾಪ್!

ಪ್ರಸ್ತುತ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಆಯೋಜನೆ ಮಾಡಿರುವ ಮಹಾರಾಜ ಟ್ರೋಫಿಯ ಟಿ ಟ್ವೆಂಟಿ ಲೀಗ್ ನಡೆಯುತ್ತಿದ್ದು, ಆಗಸ್ಟ್ 7ರಿಂದ ನಿನ್ನೆಯವರೆಗೂ ( ಆಗಸ್ಟ್ 19 ) ಲೀಗ್ ಹಂತದ ಒಟ್ಟು 30 ಪಂದ್ಯಗಳ ಪೈಕಿ 24 ಪಂದ್ಯಗಳು ಮುಕ್ತಾಯಗೊಂಡಿದ್ದು, ಇನ್ನು ಕೇವಲ 6 ಪಂದ್ಯಗಳು ಬಾಕಿ ಉಳಿದಿವೆ.
ಇನ್ನು ನಿನ್ನೆ ನಡೆದ ಪ್ರಥಮ ಪಂದ್ಯದಲ್ಲಿ ಕೃಷ್ಣಪ್ಪ ಗೌತಮ್ ನಾಯಕತ್ವದ ಶಿವಮೊಗ್ಗ ಸ್ಟ್ರೈಕರ್ಸ್ ತಂಡವನ್ನು ಹುಬ್ಬಳ್ಳಿ ಟೈಗರ್ಸ್ ಸೋಲಿಸಿದರೆ, ಎರಡನೇ ಪಂದ್ಯದಲ್ಲಿ ಮಂಗಳೂರು ಯುನೈಟೆಡ್ ತಂಡವನ್ನು ಸೋಲಿಸಿದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಏರಿಕೆ ಕಂಡಿದೆ. ಹೀಗೆ ನಿನ್ನೆಯ ಪಂದ್ಯಗಳು ಮುಕ್ತಾಯವಾದ ನಂತರ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆಗಳಾಗಿದ್ದು, ಶಿವಮೊಗ್ಗ ಸ್ಟ್ರೈಕರ್ಸ್ ತಂಡ ಟೂರ್ನಿಯಲ್ಲಿ ತನ್ನ ಏಳನೇ ಸೋಲನ್ನು ಕಾಣುವುದರ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿಯೇ ಮುಂದುವರಿದಿದ್ದು, ಪ್ಲೇ ಆಫ್ ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಳ್ಳುವ ಅವಕಾಶವನ್ನು ಸಂಪೂರ್ಣವಾಗಿ ಕಳೆದುಕೊಂಡಿದೆ.
ಹೀಗೆ ಈ ಬಾರಿಯ ಮಹಾರಾಜ ಟ್ರೋಫಿಯ 24 ಪಂದ್ಯಗಳ ಮುಕ್ತಾಯದ ನಂತರ ಯಾವ ತಂಡಗಳು ಎಷ್ಟು ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನಗಳಲ್ಲಿವೆ ಎಂಬುದರ ಕುರಿತಾದ ವಿವರ ಕೆಳಕಂಡಂತಿದೆ.

24 ಪಂದ್ಯಗಳ ನಂತರ ಅಂಕಪಟ್ಟಿ ಹೀಗಿದೆ
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳಲ್ಲಿ ಕಣಕ್ಕಿಳಿದು 5 ಪಂದ್ಯಗಳಲ್ಲಿ ಗೆದ್ದು ಉಳಿದ 3 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಮಯಾಂಕ್ ಅಗರ್ವಾಲ್ ನಾಯಕತ್ವದ ಬೆಂಗಳೂರು ಬ್ಲಾಸ್ಟರ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳಲ್ಲಿ ಕಣಕ್ಕಿಳಿದು 5 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಗುಲ್ಬರ್ಗಾ ಮಿಸ್ಟಿಕ್ಸ್ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ.
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳಲ್ಲಿ ಕಣಕ್ಕಿಳಿದು 5 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಮೈಸೂರು ವಾರಿಯರ್ಸ್ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ.
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳಲ್ಲಿ ಆಡಿ 4 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಂಡಿರುವ ಹುಬ್ಬಳ್ಳಿ ಟೈಗರ್ಸ್ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
* ಟೂರ್ನಿಯಲ್ಲಿ ಒಟ್ಟು 8 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಂಡಿರುವ ಮಂಗಳೂರು ಯುನೈಟೆಡ್ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
* ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳಲ್ಲಿ ಕಣಕ್ಕಿಳಿದು 1 ಪಂದ್ಯದಲ್ಲಿ ಮಾತ್ರ ಗೆದ್ದು, ಉಳಿದ 7 ಪಂದ್ಯಗಳಲ್ಲಿ ಸೋತು ಕೇವಲ ಎರಡು ಅಂಕಗಳನ್ನು ಮಾತ್ರ ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.

ಉಳಿದ ಪಂದ್ಯಗಳ ವೇಳಾಪಟ್ಟಿ
ಆಗಸ್ಟ್ 20: ಮಂಗಳೂರು ಯುನೈಟೆಡ್ vs ಶಿವಮೊಗ್ಗ ಸ್ಟ್ರೈಕರ್ಸ್ & ಮೈಸೂರು ವಾರಿಯರ್ಸ್ vs ಬೆಂಗಳೂರು ಬ್ಲಾಸ್ಟರ್ಸ್
ಆಗಸ್ಟ್ 21: ಮೈಸೂರು ವಾರಿಯರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಬೆಂಗಳೂರು ಬ್ಲಾಸ್ಟರ್ಸ್
ಆಗಸ್ಟ್ 22: ಶಿವಮೊಗ್ಗ ಸ್ಟ್ರೈಕರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಮಂಗಳೂರು ಯುನೈಟೆಡ್
ಆಗಸ್ಟ್ 23: ಎಲಿಮಿನೇಟರ್ & ಕ್ವಾಲಿಫೈಯರ್ 1
ಆಗಸ್ಟ್ 24: ವಿಶ್ರಾಂತಿಯ ದಿನ
ಆಗಸ್ಟ್ 25: ಎರಡನೇ ಕ್ವಾಲಿಫೈಯರ್ ಪಂದ್ಯ
ಆಗಸ್ಟ್ 26: ಫೈನಲ್ ಪಂದ್ಯ

ಪ್ಲೇ ಆಫ್ ಸುತ್ತಿನಿಂದ ಶಿವಮೊಗ್ಗ ಸ್ಟ್ರೈಕರ್ಸ್ ಔಟ್
ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ತಾನಾಡಿರುವ 8 ಪಂದ್ಯಗಳ ಪೈಕಿ ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಗೆದ್ದು ಉಳಿದ 7 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿರುವ ಶಿವಮೊಗ್ಗ ಸ್ಟ್ರೈಕರ್ಸ್ ತಂಡ ಪ್ಲೇ ಆಫ್ ಸುತ್ತಿಗೆ ಪ್ರವೇಶಿಸುವ ಅರ್ಹತೆಯನ್ನು ಕಳೆದುಕೊಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications