ಮಹಾರಾಜ ಟ್ರೋಫಿ: 12 ಪಂದ್ಯಗಳು ಮುಕ್ತಾಯ; ಅಗ್ರಸ್ಥಾನಕ್ಕಾಗಿ 3 ತಂಡಗಳ ಪೈಪೋಟಿ!

ಈ ಹಿಂದೆ ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿಯಂತಹ ಜನಪ್ರಿಯ ಫ್ರಾಂಚೈಸಿ ಕ್ರಿಕೆಟ್ ಲೀಗ್ ಟೂರ್ನಿಯನ್ನು ನಡೆಸಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಇದೀಗ ಮಹಾರಾಜ ಟಿ ಟ್ವೆಂಟಿ ಲೀಗ್ ಎಂಬ ನೂತನ ಫ್ರಾಂಚೈಸಿ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಿದ್ದು, ಈ ಟೂರ್ನಿಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್, ಮೈಸೂರು ವಾರಿಯರ್ಸ್, ಶಿವಮೊಗ್ಗ ಸ್ಟ್ರೈಕರ್ಸ್, ಹುಬ್ಬಳ್ಳಿ ಟೈಗರ್ಸ್, ಗುಲ್ಬರ್ಗಾ ಮಿಸ್ಟಿಕ್ಸ್ ಮತ್ತು ಮಂಗಳೂರು ಯುನೈಟೆಡ್ ಎಂಬ ಒಟ್ಟು ಆರು ತಂಡಗಳು ಕಣಕ್ಕಿಳಿದಿದ್ದು ಟ್ರೋಫಿಗಾಗಿ ಸೆಣಸಾಟ ಆರಂಭಿಸಿವೆ.
ಕಳೆದ ಆಗಸ್ಟ್ 7ರಂದು ಆರಂಭವಾದ ಈ ಟೂರ್ನಿಯ ಲೀಗ್ ಹಂತದಲ್ಲಿ ಸದ್ಯ ಇಂದಿಗೆ ( ಆಗಸ್ಟ್ 12 ) ಒಟ್ಟು 12 ಪಂದ್ಯಗಳು ಮುಕ್ತಾಯಗೊಂಡಿದ್ದು, ಇಂದು ನಡೆದ ಪ್ರಥಮ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡಕ್ಕೆ ಸೋಲುಣಿಸಿದ ಗುಲ್ಬರ್ಗಾ ಮಿಸ್ಟಿಕ್ಸ್ 9 ವಿಕೆಟ್‌ಗಳ ಭರ್ಜರಿ ಜಯವನ್ನು ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ.
ಹೀಗೆ ಟೂರ್ನಿಯ ಲೀಗ್ ಹಂತದ 12 ಪಂದ್ಯಗಳು ಮುಕ್ತಾಯವಾದ ನಂತರ ಯಾವ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಹಾಗೂ ಅಂಕಪಟ್ಟಿಯಲ್ಲಿ ವಿವಿಧ ತಂಡಗಳು ಯಾವ ಸ್ಥಾನದಲ್ಲಿವೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಟಾಪ್ 1ಗಾಗಿ ಮೂರು 3 ತಂಡಗಳ ಪೈಪೋಟಿ
ಹನ್ನೆರಡನೇ ದಿನದ ಪಂದ್ಯಗಳು ಆರಂಭವಾಗುವ ಮುನ್ನ ಟೂರ್ನಿಯಲ್ಲಿ 4 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 1 ಪಂದ್ಯದಲ್ಲಿ ಸೋತಿದ್ದ ಮಂಗಳೂರು ಯುನೈಟೆಡ್ 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು. ಆದರೆ, ಈ ದಿನದ ಪ್ರಥಮ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡದ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ಕಂಡ ಗುಲ್ಬರ್ಗಾ ಮಿಸ್ಟಿಕ್ಸ್ ಭರ್ಜರಿ ನೆಟ್ ರನ್‌ರೇಟ್‌ನೊಂದಿಗೆ ಅಗ್ರಸ್ಥಾನಕ್ಕೇರಿ ಮಂಗಳೂರು ಯುನೈಟೆಡ್ ತಂಡವನ್ನು ಎರಡನೇ ಸ್ಥಾನಕ್ಕೆ ತಳ್ಳಿತು. ಇನ್ನು ಇಂದಿನ ದ್ವಿತೀಯ ಪಂದ್ಯದಲ್ಲಿ ಶಿವಮೊಗ್ಗ ಸ್ಟ್ರೈಕರ್ಸ್ ವಿರುದ್ಧ ಬೆಂಗಳೂರು ಬ್ಲಾಸ್ಟರ್ಸ್ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಹೀಗೆ ಈ ಮೂರು ತಂಡಗಳೂ ಸಹ ಟೂರ್ನಿಯ 12 ಪಂದ್ಯಗಳು ಮುಕ್ತಾಯವಾಗುವ ಸಮಯಕ್ಕೆ 4 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 1 ಪಂದ್ಯದಲ್ಲಿ ಸೋತು 6 ಅಂಕಗಳನ್ನು ಪಡೆದುಕೊಂಡು ನಂಬರ್ ಒನ್ ರೇಸ್‌ಗೆ ಇಳಿದಿವೆ.

ಉಳಿದ ಪಂದ್ಯಗಳು
ಟೂರ್ನಿಯ ಹನ್ನೆರಡು ಪಂದ್ಯಗಳ ಮುಕ್ತಾಯದ ನಂತರದ ಪಂದ್ಯಗಳ ಪಟ್ಟಿ
ಆಗಸ್ಟ್ 13: ಹುಬ್ಬಳ್ಳಿ ಟೈಗರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್ & ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್
ಆಗಸ್ಟ್ 14: ಮೈಸೂರು ವಾರಿಯರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್ & ಗುಲ್ಬರ್ಗ ಮಿಸ್ಟಿಕ್ಸ್ vs ಮಂಗಳೂರು ಯುನೈಟೆಡ್
ಆಗಸ್ಟ್ 15: ಮಂಗಳೂರು ಯುನೈಟೆಡ್ vs ಬೆಂಗಳೂರು ಬ್ಲಾಸ್ಟರ್ಸ್ & ಗುಲ್ಬರ್ಗ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್
ಆಗಸ್ಟ್ 16: ವಿಶ್ರಾಂತಿ ದಿನ
ಆಗಸ್ಟ್ 17: ಮೈಸೂರು ವಾರಿಯರ್ಸ್ vs ಮಂಗಳೂರು ಯುನೈಟೆಡ್ & ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್
ಆಗಸ್ಟ್ 18: ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಮೈಸೂರು ವಾರಿಯರ್ಸ್
ಆಗಸ್ಟ್ 19: ಹುಬ್ಬಳ್ಳಿ ಟೈಗರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್ & ಮಂಗಳೂರು ಯುನೈಟೆಡ್ vs ಗುಲ್ಬರ್ಗಾ ಮಿಸ್ಟಿಕ್ಸ್
ಆಗಸ್ಟ್ 20: ಮಂಗಳೂರು ಯುನೈಟೆಡ್ vs ಶಿವಮೊಗ್ಗ ಸ್ಟ್ರೈಕರ್ಸ್ & ಮೈಸೂರು ವಾರಿಯರ್ಸ್ vs ಬೆಂಗಳೂರು ಬ್ಲಾಸ್ಟರ್ಸ್
ಆಗಸ್ಟ್ 21: ಮೈಸೂರು ವಾರಿಯರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಬೆಂಗಳೂರು ಬ್ಲಾಸ್ಟರ್ಸ್
ಆಗಸ್ಟ್ 22: ಶಿವಮೊಗ್ಗ ಸ್ಟ್ರೈಕರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಮಂಗಳೂರು ಯುನೈಟೆಡ್
ಆಗಸ್ಟ್ 23: ಎಲಿಮಿನೇಟರ್ & ಕ್ವಾಲಿಫೈಯರ್ 1
ಆಗಸ್ಟ್ 24: ವಿಶ್ರಾಂತಿಯ ದಿನ
ಆಗಸ್ಟ್ 25: ಎರಡನೇ ಕ್ವಾಲಿಫೈಯರ್ ಪಂದ್ಯ
ಆಗಸ್ಟ್ 26: ಫೈನಲ್ ಪಂದ್ಯ

ಅಬ್ಬರದ ಶತಕ ಬಾರಿಸಿದ ಮಯಾಂಕ್ ಅಗರ್ವಾಲ್
ಶಿವಮೊಗ್ಗ ಸ್ಟ್ರೈಕರ್ಸ್ ಮತ್ತು ಬೆಂಗಳೂರು ಬ್ಲಾಸ್ಟರ್ಸ್ ನಡುವಿನ ಪಂದ್ಯದಲ್ಲಿ ಶಿವಮೊಗ್ಗ ಸ್ಟ್ರೈಕರ್ಸ್ ನೀಡಿದ 174 ರನ್‌ಗಳ ಕಠಿಣ ಗುರಿಯನ್ನು ಕೇವಲ 15.4 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 176 ರನ ಕಲೆಹಾಕಿ ಬೆನ್ನತ್ತಿದ ಬೆಂಗಳೂರು ಬ್ಲಾಸ್ಟರ್ಸ್ ಪರ ಮಯಾಂಕ್ ಅಗರ್ವಾಲ್ 10 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 49 ಎಸೆತಗಳಲ್ಲಿ 102 ರನ್ ಬಾರಿಸಿ ಅಜೇಯರಾಗಿ ಉಳಿದು ಅಬ್ಬರಿಸಿ ಟೂರ್ನಿಯಲ್ಲಿ ಶತಕ ಬಾರಿಸಿದ ಮೊದಲ ನಾಯಕ ಎನಿಸಿಕೊಂಡರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications