ಮಹಾರಾಜ ಟ್ರೋಫಿ 2022: ಈ 2 ಊರುಗಳಲ್ಲಿ ಮಾತ್ರ ನಡೆಯಲಿವೆ ಹೊಸ ಕೆಪಿಎಲ್‌ನ 34 ಪಂದ್ಯಗಳು

ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿ ಮರಳಿ ಬಂದಿದ್ದು, ಈ ಬಾರಿ ಈ ಟೂರ್ನಿಗೆ ಮಹಾರಾಜ ಟ್ರೋಫಿ ಎಂದು ಹೆಸರನ್ನು ಇಡಲಾಗಿದೆ. 2019ರವರೆಗೂ ಯಾವುದೇ ಅಡಚಣೆ ಇಲ್ಲದೇ ನಡೆದಿದ್ದ ಈ ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿ ನಂತರದ ದಿನಗಳಲ್ಲಿ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ವಿವಾದಕ್ಕೆ ಸಿಲುಕಿ ಸ್ಥಗಿತಗೊಂಡಿತ್ತು. ನಂತರ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ ಯಾವುದೇ ಫ್ರಾಂಚೈಸಿ ಕ್ರಿಕೆಟ್ ಟೂರ್ನಿಗಳನ್ನು ಆಯೋಜಿಸುವ ಯತ್ನಕ್ಕೆ ಕೈ ಹಾಕಿರಲಿಲ್ಲ.

ಮಹಾರಾಜ ಟ್ರೋಫಿ: ಹೊಸ ಕೆಪಿಎಲ್‌ನ ಎಲ್ಲಾ 6 ತಂಡಗಳ ನಾಯಕರ ಘೋಷಣೆ; ಬೆಂಗಳೂರಿಗೆ ಮಯಾಂಕ್ ನಾಯಕ!ಮಹಾರಾಜ ಟ್ರೋಫಿ: ಹೊಸ ಕೆಪಿಎಲ್‌ನ ಎಲ್ಲಾ 6 ತಂಡಗಳ ನಾಯಕರ ಘೋಷಣೆ; ಬೆಂಗಳೂರಿಗೆ ಮಯಾಂಕ್ ನಾಯಕ!

ಆದರೆ, ಇದೀಗ ಮಹಾರಾಜ ಟ್ರೋಫಿಯೊಂದಿಗೆ ತನ್ನ ಫ್ರಾಂಚೈಸಿ ಲೀಗ್‌ನ್ನು ಮುಂದುವರಿಸುತ್ತಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಈ ಟೂರ್ನಿಯನ್ನೂ ಸಹ ಕರ್ನಾಟಕ ಪ್ರೀಮಿಯರ್ ಲೀಗ್ ಮಾದರಿಯಲ್ಲಿಯೇ ಆಯೋಜಿಸಿದೆ. ಈ ಟೂರ್ನಿಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್, ಮೈಸೂರು ವಾರಿಯರ್ಸ್, ಗುಲ್ಬರ್ಗಾ ಮಿಸ್ಟಿಕ್ಸ್, ಶಿವಮೊಗ್ಗ ಸ್ಟ್ರೈಕರ್ಸ್, ಮಂಗಳೂರು ಯುನೈಟೆಡ್ ಹಾಗೂ ಹುಬ್ಬಳ್ಳಿ ಟೈಗರ್ಸ್ ಹೀಗೆ ಒಟ್ಟು ಆರು ತಂಡಗಳು ಸೆಣಸಾಟ ನಡೆಸಲಿದ್ದು, ಲೀಗ್ ಹಂತದಲ್ಲಿ ಒಟ್ಟು 30 ಪಂದ್ಯಗಳು, ಒಂದು ಎಲಿಮಿನೇಟರ್ ಪಂದ್ಯ, ಎರಡು ಕ್ವಾಲಿಫೈಯರ್ ಪಂದ್ಯಗಳು ಹಾಗೂ ಒಂದು ಫೈನಲ್ ಪಂದ್ಯ ಸೇರಿದಂತೆ ಒಟ್ಟು 34 ಪಂದ್ಯಗಳು ಜರುಗಲಿವೆ.

ಕೊನೆಯ 10 ಟಿ20ಯಲ್ಲಿ ಅತಿಹೆಚ್ಚು ರನ್ ಬಾರಿಸಿದ ಭಾರತೀಯರ ಪಟ್ಟಿ; ಇಲ್ಲ ನಾಯಕ ರೋಹಿತ್!ಕೊನೆಯ 10 ಟಿ20ಯಲ್ಲಿ ಅತಿಹೆಚ್ಚು ರನ್ ಬಾರಿಸಿದ ಭಾರತೀಯರ ಪಟ್ಟಿ; ಇಲ್ಲ ನಾಯಕ ರೋಹಿತ್!

ಆಗಸ್ಟ್ 7ರಂದು ಶುರುವಾಗಲಿರುವ ಲೀಗ್ ಹಂತದ ಪಂದ್ಯಗಳು ಆಗಸ್ಟ್ 22ಕ್ಕೆ ಮುಕ್ತಾಯವಾಗಲಿದ್ದು, ನಂತರ ಅಂಕಪಟ್ಟಿಯಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನ ಪಡೆಯಲಿರುವ ಪಂದ್ಯಗಳು ಎಲಿಮಿನೇಟರ್ ಪಂದ್ಯದಲ್ಲಿ ಸೆಣಸಾಟ ನಡೆಸಲಿವೆ ಹಾಗೂ ಗೆದ್ದ ತಂಡ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಪ್ರವೇಶಿಸಲಿದೆ. ಇನ್ನು ಅಂಕಪಟ್ಟಿಯಲ್ಲಿ ಮೊದಲ ಹಾಗೂ ಎರಡನೇ ಸ್ಥಾನಗಳನ್ನು ಪಡೆಯುವ ತಂಡಗಳು ಒಂದನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್‌ಗೆ ಪ್ರವೇಶಿಸಲಿದೆ ಮತ್ತು ಸೋಲಲಿರುವ ತಂಡ ಎರಡನೇ ಕ್ವಾಲಿಫೈಯರ್ ಸುತ್ತಿನಲ್ಲಿ ಎಲಿಮಿನೇಟರ್ ಸುತ್ತಿನಲ್ಲಿ ಗೆದ್ದು ಬರುವ ತಂಡದ ಜೊತೆ ಸೆಣಸಾಡಲಿದೆ. ಈ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ ಪಂದ್ಯಕ್ಕೆ ಲಗ್ಗೆ ಇಡಲಿದೆ ಹಾಗೂ ಈ ಫೈನಲ್ ಪಂದ್ಯ ಆಗಸ್ಟ್ 26ರಂದು ನಡೆಯಲಿದೆ.

ಎರಡು ಕ್ರೀಡಾಂಗಣಗಳಲ್ಲಿ ಪಂದ್ಯಗಳ ಆಯೋಜನೆ

ಎರಡು ಕ್ರೀಡಾಂಗಣಗಳಲ್ಲಿ ಪಂದ್ಯಗಳ ಆಯೋಜನೆ

ಮಹಾರಾಜ ಟ್ರೋಫಿಯ ಪಂದ್ಯಗಳನ್ನು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣ ಹಾಗೂ ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಗಳಲ್ಲಿ ಆಯೋಜಿಸಲಾಗಿದೆ. ಲೀಗ್ ಹಂತದ ಮೊದಲ 18 ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಉಳಿದ ಎಲ್ಲಾ ಪಂದ್ಯಗಳೂ ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿವೆ.

ಮೈಸೂರಿನಲ್ಲಿ ನಡೆಯಲಿರುವ ಪಂದ್ಯಗಳು

ಮೈಸೂರಿನಲ್ಲಿ ನಡೆಯಲಿರುವ ಪಂದ್ಯಗಳು

ಈ ಕೆಳಕಂಡ ಎಲ್ಲಾ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿವೆ.

ಆಗಸ್ಟ್ 7: ಹುಬ್ಬಳ್ಳಿ ಟೈಗರ್ಸ್ vs ಮಂಗಳೂರು ಯುನೈಟೆಡ್ & ಮೈಸೂರು ವಾರಿಯರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್

ಆಗಸ್ಟ್ 8: ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್ & ಮೈಸೂರು ವಾರಿಯರ್ಸ್ vs ಮಂಗಳೂರು ಯುನೈಟೆಡ್

ಆಗಸ್ಟ್ 9: ಗುಲ್ಬರ್ಗಾ ಮಿಸ್ಟಿಕ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್ & ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್ ಆಗಸ್ಟ್

10: ಮೈಸೂರು ವಾರಿಯರ್ಸ್ vs ಹುಬ್ಬಳ್ಳಿ ಟೈಗರ್ಸ್ & ಮಂಗಳೂರು ಯುನೈಟೆಡ್ vs ಶಿವಮೊಗ್ಗ ಸ್ಟ್ರೈಕರ್ಸ್

ಆಗಸ್ಟ್ 11: ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಯುನೈಟೆಡ್ & ಮೈಸೂರು ವಾರಿಯರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್

ಆಗಸ್ಟ್ 12: ಹುಬ್ಬಳ್ಳಿ ಟೈಗರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್ & ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್

ಆಗಸ್ಟ್ 13: ಹುಬ್ಬಳ್ಳಿ ಟೈಗರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್ & ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್

ಆಗಸ್ಟ್ 14: ಮೈಸೂರು ವಾರಿಯರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್ & ಗುಲ್ಬರ್ಗ ಮಿಸ್ಟಿಕ್ಸ್ vs ಮಂಗಳೂರು ಯುನೈಟೆಡ್

ಆಗಸ್ಟ್ 15: ಮಂಗಳೂರು ಯುನೈಟೆಡ್ vs ಬೆಂಗಳೂರು ಬ್ಲಾಸ್ಟರ್ಸ್ & ಗುಲ್ಬರ್ಗ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್

ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯಗಳು

ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯಗಳು

ಈ ಕೆಳಕಂಡ ಎಲ್ಲಾ ಪಂದ್ಯಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿವೆ

ಆಗಸ್ಟ್ 17: ಮೈಸೂರು ವಾರಿಯರ್ಸ್ vs ಮಂಗಳೂರು ಯುನೈಟೆಡ್ & ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್

ಆಗಸ್ಟ್ 18: ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಮೈಸೂರು ವಾರಿಯರ್ಸ್

ಆಗಸ್ಟ್ 19: ಹುಬ್ಬಳ್ಳಿ ಟೈಗರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್ & ಮಂಗಳೂರು ಯುನೈಟೆಡ್ vs ಗುಲ್ಬರ್ಗಾ ಮಿಸ್ಟಿಕ್ಸ್

ಆಗಸ್ಟ್ 20: ಮಂಗಳೂರು ಯುನೈಟೆಡ್ vs ಶಿವಮೊಗ್ಗ ಸ್ಟ್ರೈಕರ್ಸ್ & ಮೈಸೂರು ವಾರಿಯರ್ಸ್ vs ಬೆಂಗಳೂರು ಬ್ಲಾಸ್ಟರ್ಸ್

ಆಗಸ್ಟ್ 21: ಮೈಸೂರು ವಾರಿಯರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಬೆಂಗಳೂರು ಬ್ಲಾಸ್ಟರ್ಸ್

ಆಗಸ್ಟ್ 22: ಶಿವಮೊಗ್ಗ ಸ್ಟ್ರೈಕರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್ & ಹುಬ್ಬಳ್ಳಿ ಟೈಗರ್ಸ್ vs ಮಂಗಳೂರು ಯುನೈಟೆಡ್

ಆಗಸ್ಟ್ 23: ಎಲಿಮಿನೇಟರ್ & ಕ್ವಾಲಿಫೈಯರ್ 1

ಆಗಸ್ಟ್ 24: ವಿಶ್ರಾಂತಿಯ ದಿನ

ಆಗಸ್ಟ್ 25: ಎರಡನೇ ಕ್ವಾಲಿಫೈಯರ್ ಪಂದ್ಯ

ಆಗಸ್ಟ್ 26: ಫೈನಲ್ ಪಂದ್ಯ

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Read more about: mykhel original bengaluru kpl
Story first published: Friday, August 5, 2022, 18:35 [IST]
Other articles published on Aug 5, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X