Maharaja Trophy 2023: ನೊರಾನ್ನಾ, ಸ್ಮರಣ್ ಆರ್ಧಶತಕ; ಹುಬ್ಬಳ್ಳಿ ಟೈಗರ್ಸ್‌ಗೆ ಸೋಲುಣಿಸಿದ ಗುಲ್ಬರ್ಗ ಮಿಸ್ಟಿಕ್ಸ್
ಬುಧವಾರ, ಆಗಸ್ಟ್ 23ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2023ರ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಪಂದ್ಯಾವಳಿಯ 2ನೇ ಆವೃತ್ತಿಯ 21ನೇ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡದ ವಿರುದ್ಧ ಗುಲ್ಬರ್ಗ ಮಿಸ್ಟಿಕ್ಸ್ ತಂಡವು 7 ವಿಕೆಟ್‌ಗಳ ಅಭೂತಪೂರ್ವ ಗೆಲುವು ದಾಖಲಿಸಿತು.
ವಿಜಯ್‌ಕುಮಾರ್ ವೈಶಾಕ್ ನಾಯಕತ್ವದ ಗುಲ್ಬರ್ಗ ಮಿಸ್ಟಿಕ್ಸ್ ತಂಡವು ಸತತ ಗೆಲುವಿನಿಂದ ಬೀಗುತ್ತಿದ್ದರೆ, ತನ್ನ ಕೊನೆಯ ಪಂದ್ಯದಲ್ಲಿ ಗೆದ್ದಿದ್ದ ಮನೀಶ್ ಪಾಂಡೆ ನಾಯಕತ್ವದ ಹುಬ್ಬಳ್ಳಿ ಟೈಗರ್ಸ್ ತಂಡವು ಇಲ್ಲಿ ಸೋಲು ಕಂಡಿತು.

ಮೊದಲು ಬ್ಯಾಟಿಂಗ್ ಮಾಡಿದ ಹುಬ್ಬಳ್ಳಿ ಟೈಗರ್ಸ್ ತಂಡ ಕೃಷ್ಣನ್ ಶ್ರೀಜಿತ್ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 164 ರನ್‌ಗಳ ಸವಾಲಿನ ಮೊತ್ತವನ್ನು ಗಳಿಸಿತು.
165 ರನ್‌ಗಳ ಗುರಿ ಬೆನ್ನಟ್ಟಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡ ಮ್ಯಾಕ್ನೆಲ್ ನೊರಾನ್ನಾ ಮತ್ತು ಸ್ಮರಣ್ ಆರ್ ಅವರ ಅಮೋಘ ಅರ್ಧಶತಕದ ಸಹಾಯದಿಂದ 18.4 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 164 ರನ್ ಗಳಿಸುವ ಮೂಲಕ ಇನ್ನೂ 8 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.
Story first published: Wednesday, August 23, 2023, 17:47 [IST]
Other articles published on Aug 23, 2023
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications