Maharaja Trophy 2023: ಮೊಹಮ್ಮದ್ ತಾಹ ಸ್ಫೋಟಕ ಬ್ಯಾಟಿಂಗ್; ಬೆಂಗಳೂರು ವಿರುದ್ಧ ಹುಬ್ಬಳ್ಳಿ ಟೈಗರ್ಸ್‌ಗೆ ಗೆಲುವು
ಮಂಗಳವಾರ, ಆಗಸ್ಟ್ 22ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2023ರ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಪಂದ್ಯಾವಳಿಯ 2ನೇ ಆವೃತ್ತಿಯ 19ನೇ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡದ ವಿರುದ್ಧ ಹುಬ್ಬಳ್ಳಿ ಟೈಗರ್ಸ್ ತಂಡವು 6 ವಿಕೆಟ್‌ಗಳ ಅಮೋಘ ಜಯಭೇರಿ ಬಾರಿಸಿದೆ.
ಮನೀಶ್ ಪಾಂಡೆ ನಾಯಕತ್ವದ ಹುಬ್ಬಳ್ಳಿ ಟೈಗರ್ಸ್ ತಂಡವು ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದರೆ, ಮಯಾಂಕ್ ಅಗರ್ವಾಲ್ ನಾಯಕತ್ವದ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಸತತ ಸೋಲಿನಿಂದ ಕಂಗೆಟ್ಟಿದೆ.

ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ಬ್ಲಾಸ್ಟರ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿತು.
189 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ಹುಬ್ಬಳ್ಳಿ ಟೈಗರ್ಸ್ ತಂಡ ಮೊಹಮ್ಮದ್ ತಾಹ ಅವರ ಭರ್ಜರಿ ಅರ್ಧಶತಕದ ನೆರವಿನಿಂದ 18.3 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 190 ರನ್ ಗಳಿಸಿ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.
ಬೆಂಗಳೂರು ಬ್ಲಾಸ್ಟರ್ಸ್ ತಂಡದ ಪರ ಆರಂಭಿಕರಾದ ಭುವನ್ ರಾಜು 6 ರನ್ ಗಳಿಸಿ ನಿರಾಸೆ ಮೂಡಿಸಿದರೆ, ನಾಯಕ ಮಯಾಂಕ್ ಅಗರ್ವಾಲ್ 38 ಎಸೆತಗಳಲ್ಲಿ 3 ಬೌಂಡರಿ ಮತ್ತು 6 ಭರ್ಜರಿ ಸಿಕ್ಸರ್ ಮೂಲಕ 68 ರನ್ ಬಾರಿಸಿದರು.

ನಂತರ ಬಂದ ದೆಗಾ ನಿಶ್ಚಲ್ 42 ಎಸೆತಗಳಲ್ಲಿ 5 ಬೌಂಡರಿ ಸಮೇತ 54 ರನ್ ಗಳಿಸಿದ ಮಯಾಂಕ್ ಅಗರ್ವಾಲ್ ಅವರೊಂದಿಗೆ ಎರಡನೇ ವಿಕೆಟ್‌ಗೆ 122 ರನ್‌ಗಳ ಜೊತೆಯಾಟ ನೀಡಿದರು. ಆ ಬಳಿಕ ಶುಭಾಂಗ್ ಹೆಗ್ಡೆ 18 ಎಸೆತಗಳಲ್ಲಿ 29 ರನ್, ಸೂರಜ್ ಅಹುಜಾ 5 ರನ್, ಲೋಚನ್ ಅಪ್ಪಣ್ಣ 11 ರನ್ ಗಳಿಸಿದರು.
ಹುಬ್ಬಳ್ಳಿ ಟೈಗರ್ಸ್ ತಂಡದ ಪರ ಬೌಲಿಂಗ್‌ನಲ್ಲಿ ಕೆಸಿ ಕಾರಿಯಪ್ಪ 4 ಓವರ್‌ಗಳಲ್ಲಿ 31 ರನ್ ನೀಡಿ 3 ವಿಕೆಟ್ ಪಡೆದರೆ, ವಿಧ್ವತ್ ಕಾವೇರಪ್ಪ 4 ಓವರ್‌ಗಳಲ್ಲಿ 29 ರನ್ ನೀಡಿ 2 ವಿಕೆಟ್ ಕಬಳಿಸಿದರು.
ಎರಡನೇ ಇನ್ನಿಂಗ್ಸ್‌ನಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡದ ಆರಂಭಿಕರಾದ ಲುವ್ನಿತ್ ಸಿಸೋಡಿಯಾ 9 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 20 ರನ್ ಗಳಿಸಿ ಔಟಾದರೆ, ಮೊಹಮ್ಮದ್ ತಾಹ 35 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಭರ್ಜರಿ ಸಿಕ್ಸರ್ ನೆರವಿನಿಂದ 66 ರನ್ ಬಾರಿಸಿದರು.
ಬಳಿಕ ಬಂದ ಕೃಷ್ಣನ್ ಶ್ರೀಜಿತ್ 30 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್‌ಗಳ ಮೂಲಕ 45 ರನ್, ನಾಯಕ ಮನೀಶ್ ಪಾಂಡೆ 22 ಎಸೆತಗಳಲ್ಲಿ 3 ಬೌಂಡರಿ ಸಮೇತ ಅಜೇಯ 35 ರನ್, ಮೋಹಿತ್ ಬಿಎ 10 ರನ್, ಪ್ರವೀಣ್ ದುಬೆ ಅಜೇಯ 8 ರನ್ ಗಳಿಸಿ ತಮ್ಮ ತಂಡದ ಗೆಲುವಿಗೆ ನೆರವಾದರು.
ಬೌಲಿಂಗ್‌ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡದ ಸರ್ಫರಾಜ್ ಅಶ್ರಫ್ 4 ಓವರ್‌ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರೆ, ಶುಭಾಂಗ್ ಹೆಗ್ಡೆ ಮತ್ತು ರಿಷಿ ಬೋಪಣ್ಣ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications