Maharaja Trophy 2023: ತಿಪ್ಪಾರೆಡ್ಡಿ ಭರ್ಜರಿ ಬ್ಯಾಟಿಂಗ್; ಶಿವಮೊಗ್ಗ ಸೋಲಿಸಿ ಗೆಲುವಿನ ಹಳಿಗೆ ಮರಳಿದ ಮಂಗಳೂರು
ಗುರುವಾರ, ಆಗಸ್ಟ್ 24ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2023ರ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಪಂದ್ಯಾವಳಿಯ 2ನೇ ಆವೃತ್ತಿಯ 23ನೇ ಪಂದ್ಯದಲ್ಲಿ ಶಿವಮೊಗ್ಗ ಲಯನ್ಸ್ ತಂಡದ ವಿರುದ್ಧ ಮಂಗಳೂರು ಡ್ರಾಗನ್ಸ್ ತಂಡವು 15 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಕೃಷ್ಣಪ್ಪ ಗೌತಮ್ ನಾಯಕತ್ವದ ಮಂಗಳೂರು ಡ್ರಾಗನ್ಸ್ ತಂಡವು ಗೆಲುವಿನ ಹಳಿಗೆ ಮರಳಿದರೆ, ತನ್ನ ಕೊನೆಯ ಪಂದ್ಯದಲ್ಲಿ ಗೆದ್ದಿದ್ದ ಶ್ರೇಯಸ್ ಗೋಪಾಲ್ ನಾಯಕತ್ವದ ಶಿವಮೊಗ್ಗ ಲಯನ್ಸ್ ಇಲ್ಲಿ ಸೋಲು ಅನುಭವಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಮಂಗಳೂರು ಡ್ರಾಗನ್ಸ್ ತಂಡ ತಿಪ್ಪಾರೆಡ್ಡಿ ಅವರ ಭರ್ಜರಿ ಅರ್ಧಶತಕದ ಸಹಾಯದಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 191 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
192 ರನ್‌ಗಳ ಗುರಿ ಬೆನ್ನಟ್ಟಿದ ಶಿವಮೊಗ್ಗ ಲಯನ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 176 ರನ್ ಗಳಿಸುವ ಮೂಲಕ ಕೇವಲ 15 ರನ್‌ಗಳಿಂದ ಸೋಲೊಪ್ಪಿಕೊಂಡಿತು.
ಮಂಗಳೂರು ಡ್ರಾಗನ್ಸ್ ತಂಡ ಪರ ಆರಂಭಿಕರಾದ ಶರತ್ ಬಿಆರ್ 1 ರನ್ ಮತ್ತು ರೋಹನ್ ಪಾಟೀಲ್ 7 ರನ್ ಗಳಿಸಿ ಔಟಾಗುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ವಿಫಲರಾದರು.

ಬಳಿಕ ಬಂದ ಸಿದ್ಧಾರ್ಥ್ 17 ರನ್, ತಿಪ್ಪಾರೆಡ್ಡಿ 47 ಎಸೆತಗಳಲ್ಲಿ 11 ಬೌಂಡರಿ ಮತ್ತು 2 ಸಿಕ್ಸರ್ ಸಮೇತ 82 ರನ್ ಬಾರಿಸಿದರು. ನವೀನ್ ಎಂಜಿ 16 ರನ್, ಅನಿರುದ್ಧ್ ಜೋಶಿ 20 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ಮೂಲಕ 34 ರನ್ ಗಳಿಸಿದರು.
ಇನ್ನು ಕೊನೆಯಲ್ಲಿ ನಾಯಕ ಕೃಷ್ಣಪ್ಪ ಗೌತಮ್ 8 ಎಸೆತಗಳಲ್ಲಿ 16 ರನ್, ಕೃತಿಕ್ ಕೃಷ್ಣ 6 ರನ್ ಗಳಿಸಿ ತಂಡದ ಮೊತ್ತವನ್ನು 190ರ ಗಡಿ ದಾಟಿಸಿದರು.
ಶಿವಮೊಗ್ಗ ಲಯನ್ಸ್ ಪರ ಬೌಲಿಂಗ್‌ನಲ್ಲಿ ಆದಿತ್ಯ ಸೋಮಣ್ಣ 4 ಓವರ್‌ಗಳಲ್ಲಿ 38 ರನ್ ನೀಡಿ 3 ವಿಕೆಟ್ ಪಡೆದರೆ, ಶ್ರೇಯಸ್ ಗೋಪಾಲ್ 4 ಓವರ್‌ಗಳಲ್ಲಿ 35 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ವಾಸುಕಿ ಕೌಶಿಕ್ ಒಂದು ವಿಕೆಟ್ ತಮ್ಮದಾಗಿಸಿಕೊಂಡರು.
ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ 192 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಶಿವಮೊಗ್ಗ ಲಯನ್ಸ್ ತಂಡದ ಆರಂಭಿಕರಾದರೋಹನ್ ಕದಂ 25 ರನ್, ನಿಹಾಲ್ ಉಳ್ಳಾಲ 7 ರನ್, ರೋಹನ್ ನವೀನ್ 11 ರನ್ ಗಳಿಸಿದರು.
ಬಳಿಕ ರೋಹಿತ್ ಕುಮಾರ್ 16 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 23 ರನ್, ಶ್ರೇಯಸ್ ಗೋಪಾಲ್ 4 ರನ್, ಅಭಿನವ್ ಮನೋಹರ್ 16 ಎಸೆತಗಳಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್ ಸಮೇತ 25 ರನ್, ಪ್ರಣವ್ ಭಾಟಿಯಾ 18 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ಮೂಲಕ 39 ರನ್ ಬಾರಿಸಿದರು. ಕೊನೆಯಲ್ಲಿ ಕ್ರಾಂತಿ ಕುಮಾರ್ 7 ಎಸೆತಗಳಲ್ಲಿ 5 ಬೌಂಡರಿ ನೆರವಿನಿಂದ 21 ರನ್ ಗಳಿಸಿದರೂ ತಂಡವನ್ನು ಗೆಲ್ಲಿಸುವಲ್ಲಿ ವಿಫಲರಾದರು.
ಮಂಗಳೂರು ಡ್ರಾಗನ್ಸ್ ತಂಡದ ಪರ ಬೌಲಿಂಗ್‌ನಲ್ಲಿ ಸಂಕಲ್ಪ್ ಶೆಟ್ಟೆಣ್ಣನವರ, ಆನಂದ್ ದೊಡ್ಡಮನಿ, ಪಾರಸ್ ಗುರ್ಬಾಕ್ಸ್ ಆರ್ಯ ತಲಾ ಎರಡೆರಡು ವಿಕೆಟ್ ಪಡೆದು ಮಿಂಚಿದರೆ, ಆದಿತ್ಯ ಗೋಯಲ್, ನವೀನ್ ಎಂಜಿ, ಕೃಷ್ಣಪ್ಪ ಗೌತಮ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications