ಮಹಾರಾಜ ಟ್ರೋಫಿ 2023: ಮಿಂಚಿದ ಶರತ್; ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ ಶಿವಮೊಗ್ಗ ಲಯನ್ಸ್ ತಂಡಕ್ಕೆ ರೋಚಕ ಗೆಲುವು
ಬುಧವಾರ, ಆಗಸ್ಟ್ 17ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2023ರ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಪಂದ್ಯಾವಳಿಯ 2ನೇ ಆವೃತ್ತಿಯ ಒಂಬತ್ತನೇ ಪಂದ್ಯದ ಕೊನೆಯ ಓವರ್‌ನಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ತಂಡದ ವಿರುದ್ಧ ಶಿವಮೊಗ್ಗ ಲಯನ್ಸ್ ತಂಡವು 3 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು.
ಶ್ರೇಯಸ್ ಗೋಪಾಲ್ ನಾಯಕತ್ವದ ಶಿವಮೊಗ್ಗ ಲಯನ್ಸ್ ತಂಡವು ಪಂದ್ಯಾವಳಿಯಲ್ಲಿ ಸತತ ಮೂರನೇ ಗೆಲುವು ದಾಖಲಿಸಿದರೆ, ಇನ್ನು ವಿಜಯ್‌ಕುಮಾರ್ ವೈಶಾಕ್ ನಾಯಕತ್ವದ ಗುಲ್ಬರ್ಗ ಮಿಸ್ಟಿಕ್ಸ್ ತಂಡವು ಪಂದ್ಯಾವಳಿಯಲ್ಲಿ ಮೂರು ಸೋಲು ಮತ್ತು ಒಂದು ಗೆಲುವು ಕಂಡಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 175 ರನ್ ಕಲೆಹಾಕಿತು. 176 ರನ್‌ಗಳ ಸವಾಲಿನ ಮೊತ್ತ ಗುರಿ ಬೆನ್ನಟ್ಟಿದ ಶಿವಮೊಗ್ಗ ಲಯನ್ಸ್ ತಂಡ 19.5 ಓವರ್‌ಗಳಲ್ಲಿ 7 ವಿಕೆಟ್‌ಗೆ 179 ರನ್ ಗಳಿಸಿ ಭರ್ಜರಿ 3 ವಿಕೆಟ್‌ಗಳ ಗೆಲುವು ದಾಖಲಿಸಿತು.
ಗುಲ್ಬರ್ಗ ಮಿಸ್ಟಿಕ್ಸ್ ತಂಡದ ಪರ ಆರಂಭಿಕ ಎಲ್ಆರ್ ಚೇತನ್ 3 ರನ್, ಆದರ್ಶ್ ಪ್ರಜ್ವಲ್ 41 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಸಮೇತ 43 ರನ್ ಗಳಿಸಿದರೆ, ಸೌರಭ್ ಮುಟ್ಟೂರು 7 ರನ್ ಗಳಿಸಿದರು.
ಸ್ಮರಣ್ ಆರ್ 28 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 40 ರನ್ ಬಾರಿಸಿದರು. ಮ್ಯಾಕ್ನೆಲ್ ನೊರೊನ್ನಾ 16 ರನ್, ಅಮಿತ್ ವರ್ಮಾ 10 ರನ್, ಶ್ರೀನಿವಾಸ ಶರತ್ 22 ರನ್, ಅವಿನಾಶ್ ಡಿ 19 ರನ್ ಗಳಿಸಿ ತಂಡದ ಮೊತ್ತವನ್ನು 170ರ ಗಡಿ ದಾಟಿಸಲು ನೆರವಾದರು.
ಬೌಲಿಂಗ್‌ನಲ್ಲಿ ಶಿವಮೊಗ್ಗ ಲಯನ್ಸ್ ತಂಡದ ಪರ ಕ್ರಾಂತಿ ಕುಮಾರ್ 4 ಓವರ್‌ಗಳಲ್ಲಿ 17 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ವಾಸುಕಿ ಕೌಶಿಕ್ ಮತ್ತು ಶ್ರೇಯಸ್ ಗೋಪಾಲ್ ತಲಾ ಒಂದೊಂದು ವಿಕೆಟ್ ಪಡೆದರು.
ಬಳಿಕ 176 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಶಿವಮೊಗ್ಗ ತಂಡದ ಆರಂಭಿಕರಾದ ರೋಹನ್ ಕದಂ 12 ರನ್ ಗಳಿಸಿ ಔಟಾದರೆ, ನಿಹಾಲ್ ಉಳ್ಳಾಲ 4 ರನ್ ಗಳಿಸಿದ್ದಾಗ ವಿಕೆಟ್ ಒಪ್ಪಿಸಿದರು. ರೋಹಿತ್ ಕುಮಾರ್ ಸೊನ್ನೆ ಸುತ್ತಿದರು.
ನಂತರ ಬಂದ ನಾಯಕ ಶ್ರೇಯಸ್ ಗೋಪಾಲ್ 37 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ ಸಮೇತ 52 ರನ್ ಬಾರಿಸಿದರು. ಪ್ರಣವ್ ಭಾಟಿಯಾ 4 ರನ್, ಕ್ರಾಂತಿ ಕುಮಾರ್ 6 ರನ್ ಗಳಿಸಿದರು.
ಕೊನೆಯಲ್ಲಿ ಅಭಿನವ್ ಮನೋಹರ್ 28 ರನ್, ಶಿವರಾಜ್ 27 ರನ್ ಮತ್ತು ಹೆಚ್ಎಸ್ ಶರತ್ 11 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್ ಸಹಾಯದಿಂದ ಸ್ಫೋಟಕ 31 ರನ್ ಬಾರಿಸುವ ಮೂಲಕ ತಂಡವನ್ನು ಗೆಲ್ಲಿಸಿದರು.
ಗುಲ್ಬರ್ಗ ಮಿಸ್ಟಿಕ್ಸ್ ತಂಡದ ಪರ ಬೌಲಿಂಗ್‌ನಲ್ಲಿ ಅಭಿಲಾಷ್ ಶೆಟ್ಟಿ 4 ಓವರ್‌ಗಳಲ್ಲಿ 45 ರನ್ ನೀಡಿ 2 ವಿಕೆಟ್ ಪಡೆದರೆ, ವಿಜಯ್‌ಕುಮಾರ್ ವೈಶಾಕ್ 3.5 ಓವರ್‌ಗಳಲ್ಲಿ 25 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಶರಣ್ ಗೌಡ, ಹಾರ್ದಿಕ್ ರಾಜ್ ತಲಾ ಒಂದೊಂದು ವಿಕೆಟ್ ಪಡೆದರು.
ಶಿವಮೊಗ್ಗ ಲಯನ್ಸ್ ತಂಡದ ಪರ ಒಂದು ವಿಕೆಟ್ ಪಡೆದು, ಬ್ಯಾಟಿಂಗ್‌ನಲ್ಲಿ ಅರ್ಧಶತಕ ಬಾರಿಸಿದ ನಾಯಕ ಶ್ರೇಯಸ್ ಗೋಪಾಲ್ ಪಂದ್ಯಶ್ರೇಷ್ಠ ಆಟಗಾರ ಪ್ರಶಸ್ತಿಗೆ ಭಾಜನರಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications