ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ?

Mahendra Singh Dhoni may contest from BJP in Lok Sabha Elections 2019

ನವದೆಹಲಿ, ಅಕ್ಟೋಬರ್ 22: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿರುವ ಬಿಜೆಪಿ ಗೆಲ್ಲುವ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ.

ಅದಕ್ಕಾಗಿ ಕೆಲವು ಸೆಲೆಬ್ರಿಟಿ ಕ್ರಿಕೆಟ್ ಸ್ಟಾರ್ ಗಳನ್ನೂ ಅದು ತನ್ನ ತೆಕ್ಕೆಗೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ. ಅದರಲ್ಲಿ ಪ್ರಮುಖವಾಗಿ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ ಎಂಬ ಮಾಹಿತಿಯನ್ನು ಬಿಜೆಪಿಯ ಆಪ್ತ ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಗಂಭೀರ್ ಸ್ಪರ್ಧೆ? ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಗಂಭೀರ್ ಸ್ಪರ್ಧೆ?

ಜೊತೆಗೆ ಕ್ರಿಕೆಟಿಗ ಗೌತಮ್ ಗಂಭೀರ್ ಅವರನ್ನೂ ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ. ಅಕಸ್ಮಾತ್ ಈ ಸುದ್ದಿ ಸತ್ಯವೇ ಆದರೆ ಈ ಇಬ್ಬರು ಕ್ರಿಕೆಟ್ ದಿಗ್ಗಜರನ್ನು ಸಂಸತ್ತಿನಲ್ಲಿ ನೋಡಬಹುದಾದ ದಿನಗಳು ದೂರವಿಲ್ಲ!

ಜಾರ್ಖಂಡ್ ನಿಂದ ಸ್ಪರ್ಧಿಸಲಿದ್ದಾರೆ ಧೋನಿ!

ಜಾರ್ಖಂಡ್ ನಿಂದ ಸ್ಪರ್ಧಿಸಲಿದ್ದಾರೆ ಧೋನಿ!

ಬಿಜೆಪಿಯ ಹಿರಿಯ ನಾಯಕರೇ ಒಬ್ಬರು ಖಚಿತಪಡಿಸಿರುವ ಪ್ರಕಾರ ಧೋನಿ ಜಾರ್ಖಂಡ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಅವರು ಬಿಜೆಪಿಯ ಸ್ಟಾರ್ ಕ್ಯಾಂಪೇನರ್ ಸಹ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಿಂದ ಗಂಭೀರ್?

ದೆಹಲಿಯಿಂದ ಗಂಭೀರ್?

ಗೌತಮ್ ಗಂಭೀರ್ ಅವರು ದೆಹಲಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಬಿಜೆಪಿ ನಾಯಕಿ ಮೀನಾಕ್ಷಿ ಲೇಖಿ ಅವರ ಸಾಧನೆಯ ಬಗ್ಗೆ ಬಿಜೆಪಿಗೆ ತೃಪ್ತಿ ಇಲ್ಲದ ಕಾರಣ, ಅವರ ಕ್ಷೇತ್ರದಲ್ಲಿ ಗಂಭೀರ್ ಅವರನ್ನು ಕಣಕ್ಕಿಳಿಸಿಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ.

ಲೋಕಸಭಾ ಚುನಾವಣೆಗೆ ಸಜ್ಜಾದ ಕೇಜ್ರಿವಾಲ್, ಬಿಜೆಪಿ ಗಡಗಡ?!

ಧೋನಿ ಆಯ್ಕೆಗೆ ಕಾರಣವೇನು?

ಧೋನಿ ಆಯ್ಕೆಗೆ ಕಾರಣವೇನು?

ಧೋನಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕನಾಗಿ ಮಾತ್ರವಲ್ಲದೆ, ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಚೆನ್ನೈ ಸೂಪರ್ ಕಿಂಗ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಮೂಲಕ ಅವರು ದಕ್ಷಿಣ ಭಾರತದಲ್ಲೂ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ದೇಶದಾದ್ಯಂತ ಅಭಿಮಾನಿಗಳನ್ನು ಹೊಂಡಿರುವ ಅವರು ಬಿಜೆಪಿಯಿಂದ ಸ್ಪರ್ಧಿಸುವುದರಿಂದ ಮತ್ತು ಬಿಜೆಪಿ ಸ್ಟಾರ್ ಕ್ಯಾಂಪೇನರ್ ಆಗುವುದರಿಂದ ಬಿಜೆಪಿಗೆ ಮತ್ತಷ್ಟು ಬಲ ಬಂದಂತಾಗುತ್ತದೆ.

ವೀರೆಂದ್ರ ಸೆಹ್ವಾಹ್

ವೀರೆಂದ್ರ ಸೆಹ್ವಾಹ್

ಕೆಲವು ಮೂಲಗಳ ಪ್ರಕಾರ ಮಾಜಿ ಕ್ರಿಕೆಟಿಗೆ ವೀರೇಂದ್ರ ಸೆಹ್ವಾಗ್ ಅವರು ಸಹ ಬಿಜೆಪಿಗೆ ಸೇರಲಿದ್ದಾರೆ. ಈಗಾಗಲೇ ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ಪರ ಪ್ರಚಾರ ಆರಂಭಿಸಿರುವ ಅವರು, ಅಧಿಕೃತವಾಗಿ ಪಕ್ಷ ಸೇರಿದರೆ ಅವರಿಗೂ ಬಿಜೆಪಿಯಿಂದ ಟಿಕೆಟ್ ಸಿಕ್ಕರೆ ಅಚ್ಚರಿಯೇನಿಲ್ಲ.

Story first published: Monday, October 22, 2018, 15:16 [IST]
Other articles published on Oct 22, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X