For Quick Alerts
ALLOW NOTIFICATIONS  
For Daily Alerts
 

ರಾಜಸ್ಥಾನ ವಿರುದ್ಧದ ಪಂದ್ಯಕ್ಕೂ ಮುನ್ನ ಸಿಎಸ್‌ಕೆಗೆ ಮತ್ತೊಂದು ಪೆಟ್ಟು

ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್) ಆರಂಭವಾಗಿದೆ. ಸೋಮವಾರ ಚೆನ್ನೈ ಸೂಪರ್ ಕಿಂಗ್ಸ್‌ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಗುವಾಹಟಿಯ ಬರ್ಸಪಾರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಿಎಸ್‌ಕೆ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಲಿದೆ. ಐದು ಬಾರಿ ಐಪಿಎಲ್‌ ಚಾಂಪಿಯನ್‌ ಸಿಎಸ್‌ಕೆ ತಂಡದ ಸ್ಟಾರ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಗಾಯದ ಕಾರಣದಿಂದ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಈ ಗಾಯದ ನೋವು ಸಿಎಸ್‌ಕೆ ಕ್ಯಾಂಪ್‌ನಲ್ಲಿ ಇನ್ನೂ ತಾಜಾ ಆಗಿ ಇರುವಾಗಲೇ, ಮತ್ತೊಬ್ಬ ಪ್ಲೇಯರ್ ಗಾಯದಿಂದ ಬಳಲುತ್ತಿದ್ದು ರಾಜಸ್ಥಾನ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಋತುವಿನ ಮೊದಲ ಪಂದ್ಯಕ್ಕೂ ಮುನ್ನ ಮತ್ತೊಬ್ಬ ಆಟಗಾರ ಗಾಯಕ್ಕೆ ತುತ್ತಾಗಿದ್ದಾರೆ. ದಕ್ಷಿಣ ಆಫ್ರಿಕಾ ಭರವಸೆಯ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ ಮೊದಲ ಪಂದ್ಯದಿಂದ ದೂರ ಸರಿದಿದ್ದಾರೆ. ಇವರು ತಂಡದಿಂದ ಹೊರಗುಳಿದಿದ್ದು ನಿಶ್ಚಿತವಾಗಿ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಂತಾಗಿದೆ.

Dewald Brevis

ಯುವ ಆಟಗಾರ ಡೆವಾಲ್ಡ್ ಬ್ರೆವಿಸ್ ಕೂಡ ಗಾಯದಿಂದ ಬಳಲುತ್ತಿದ್ದು ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್‌ ತಂಡ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದೆ. ಡೆವಾಲ್ಡ್ ಬ್ರೆವಿಸ್ ಪ್ರಸ್ತುತ ಗಾಯದಿಂದ ಬಳಲುತ್ತಿದ್ದು, ಸೋಮವಾರ ಪಂದ್ಯವನ್ನು ಆಡುವುದಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ" ಎಂದು ಬರೆದುಕೊಂಡಿದೆ.

ಬ್ರೆವಿಸ್ ಸಾಧನೆ

22 ವರ್ಷದ ಡೆವಾಲ್ಡ್ ಬ್ರೆವಿಸ್ 2022 ರಿಂದ ಐಪಿಎಲ್‌ನಲ್ಲಿ ಆಡುತ್ತಿದ್ದಾರೆ. ಇವರಿಗೆ ಐಪಿಎಲ್‌ನಲ್ಲಿ ಹೆಚ್ಚು ಪಂದ್ಯಗಳನ್ನು ಆಡುವ ಅವಕಾಶ ಸಿಕ್ಕಿಲ್ಲ. ಈ ವರೆಗೆ ಬ್ರೆವಿಸ್‌ ಆಡಿದ 16 ಪಂದ್ಯಗಳಲ್ಲಿ 153.2 ರ ಸ್ಟ್ರೈಕ್ ರೇಟ್‌ನಲ್ಲಿ 455 ರನ್ ಗಳಿಸಿದ್ದಾರೆ. ಬ್ರೆವಿಸ್ ಐಪಿಎಲ್‌ನಲ್ಲಿ ಎರಡು ಅರ್ಧಶತಕಗಳನ್ನು ಗಳಿಸಿದ್ದಾರೆ. ಇವರು ಸಿಎಸ್‌ಕೆ ತಂಡವನ್ನು ಸೇರುವ ಮೊದಲು ಮುಂಬೈ ಪರವೂ ಬ್ಯಾಟ್ ಮಾಡಿದ ಅನುಭವ ಹೊಂದಿದ್ದಾರೆ.

ಬ್ರೆವಿಸ್‌ ದಕ್ಷಿಣ ಆಫ್ರಿಕಾದ ಪರ ಮೂರು ಫಾರ್ಮೆಟ್‌ಗಳಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಇವರು 4 ಟೆಸ್ಟ್‌, 9 ಏಕದಿನ ಹಾಗೂ 30 ಟಿ20 ಪಂದ್ಯಗಳನ್ನು ಆಡಿದ ಅನುಭವ ಇದೆ. ಇವರು ಟಿ20 ಕ್ರಿಕೆಟ್‌ನಲ್ಲಿ 26ರ ಸರಾಸರಿಯಲ್ಲಿ 697 ರನ್‌ ಕಲೆ ಹಾಕಿದ್ದಾರೆ. ಅಲ್ಲದೆ 1 ಶತಕ ಹಾಗೂ 1 ಅರ್ಧಶತಕ ಬಾರಿಸಿದ್ದಾರೆ.

Story first published: Sunday, March 29, 2026, 22:47 [IST]
Other articles published on Mar 29, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+