ಟಿ20 ವಿಶ್ವಕಪ್‌ನಲ್ಲಿ ಟೀಮ ಇಂಡಿಯಾ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈಗ ಅಭಿಮಾನಿಗಳ ಚಿತ್ತ ಮಾರ್ಚ್ 28 ರಿಂದ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮೇಲೆ ನೆಟ್ಟಿದೆ. ಈ ಮೇಗಾ ಲೀಗ್‌ಗಾಗಿ ಎಲ್ಲ ತಂಡಗಳು ತಮ್ಮ ತಮ್ಮ ಅಭ್ಯಾಸ ಶಿಬಿರವನ್ನು ಆರಂಭಿಸಿವೆ. ಭಾರತದ ದೇಶೀಯ ಆಟಗಾರರು ಈಗಾಗಲೇ ತಂಡವನ್ನು ಸೇರಿಕೊಂಡಿದ್ದು ಅಭ್ಯಾಸ ನಡೆಸಿದ್ದಾರೆ. ಇನ್ನು ತಂಡವನ್ನು ವಿದೇಶಿ ಆಟಗಾರರು ಸೇರುವುದು ಮಾತ್ರ ಬಾಕಿ ಇದೆ. ಆರ್‌ಸಿಬಿ ತಂಡ ಪ್ರಶಸ್ತಿಯನ್ನು ಡಿಫೆಂಡ್ ಮಾಡಿಕೊಳ್ಳುವ ಉದ್ದೇಶದಿಂದ ಮೈದಾನಕ್ಕೆ ಇಳಿಯಲಿದೆ. ಆರ್‌ಸಿಬಿ ತಂಡದ ವೇಗದ ಬೌಲರ್ ಬಗ್ಗೆ ಬರುತ್ತಿರುವ ಸುದ್ದಿ ನಿಜಕ್ಕೂ ಅಭಿಮಾನಿಗಳು ಹಾಗೂ ಮ್ಯಾನೇಜ್ಮೆಂಟ್ ಚಿಂತೆಯನ್ನು ದುಪಟ್ಟು ಮಾಡಿದೆ.
18ನೇ ಆವೃತ್ತಿಯ ಐಪಿಎಲ್ ಆರ್‌ಸಿಬಿ ಅಭಿಮಾನಿಗಳಿಗೆ ಎಂದು ಮರೆಯಲಾಗದ ವರ್ಷ. ಈ ಆವೃತ್ತಿಯಲ್ಲಿ ಆರ್‌ಸಿಬಿ ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಟ್ಟು ಇತಿಹಾಸ ನಿರ್ಮಿಸಿತು. ಈ ಮೂಲಕ ಪ್ರಶಸ್ತಿ ಗೆಲುವಿನ ಬರವನ್ನು ಕೊನೆಯಾಗಿಸಿತು. ರಜತ್ ಪಾಟಿದಾರ್ ಅವರ ಮುಂದಾಳತ್ವದಲ್ಲಿ ಆರ್‌ಸಿಬಿ ಮತ್ತೊಮ್ಮೆ ಇದೇ ಪ್ರದರ್ಶನ ನೀಡಲು ಪ್ಲ್ಯಾನ್ ಮಾಡಿಕೊಂಡಿದೆ.

ಕಳೆದ ಬಾರಿ ಆರ್‌ಸಿಬಿ ತಂಡದ ಬ್ಯಾಟಿಂಗ್ ಹಾಗೂ ಬೌಲಿಂಗ್ ಬಲಾಢ್ಯವಾಗಿತ್ತು. ಹೀಗಾಗಿ ಆರ್‌ಸಿಬಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸಿದ್ದ ಜೋಶ್ ಹ್ಯಾಜಲ್‌ವುಡ್ ತಮ್ಮ ಬಿಗುವಿನ ದಾಳಿಯ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದರು. ಆದರೆ ಈ ಬರುತ್ತಿರುವ ಮಾಹಿತಿ ನಿಜಕ್ಕೂ ಆತಂಕ ಹುಟ್ಟಿಸುವಂತಿದೆ.
ಆಸ್ಟ್ರೇಲಿಯಾ ಟಿ20 ವಿಶ್ವಕಪ್ ತಂಡದಲ್ಲೂ ಸ್ಥಾನ ಪಡೆಯದ ಜೋಶ್ ಹ್ಯಾಜಲ್‌ವುಡ್ ಐಪಿಎಲ್ ವೇಳೆಗೆ ಅಚೇತರಿಸಿಕೊಳ್ಳಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈ ನಂಬಿಕೆ ಹುಸಿಯಾಗುವ ಸಾಧ್ಯತೆ ಇದೆ. ಅವರು ಇನ್ನು ಚೇತರಿಕೆಯ ಹಂತದಲ್ಲಿದ್ದು, ಇವರು ಇನ್ನು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಇವರು ಐಪಿಎಲ್‌ನಲ್ಲಿ ಆಡುವ ಬಗ್ಗೆ ತಕ್ಷಣ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ ಇಲ್ಲ. ವೈದ್ಯರ ಅನುಮತಿ ಪಡೆದ ಬಳಿಕವೇ ಅವರಿಗೆ ಅನುಮತಿ ನೀಡಲಾಗುವುದು ಎಂದು ತಿಳಿದು ಬಂದಿದೆ.
ಐಪಿಎಲ್ ಹರಾಜಿನಲ್ಲಿ ಜೋಶ್ ಹ್ಯಾಜಲ್‌ವುಡ್‌ಗೆ ಆರ್‌ಸಿಬಿ ಭಾರೀ ಮೊತ್ತವನ್ನು ನೀಡಿ ತಂಡದಲ್ಲಿ ಉಳಿಸಿಕೊಂಡಿತ್ತು. ಇವರಿಗೆ ಆರ್‌ಸಿಬಿ 12.5 ಕೋಟಿ ನೀಡಿತ್ತು. ಇವರು 2022 ಹಾಗೂ 2024ರಲ್ಲೂ ಆರ್‌ಸಿಬಿ ಪರ ಕಣಕ್ಕೆ ಇಳಿದಿದ್ದರು. ಆಗ ಅವರಿಗೆ 7.5 ಕೋಟಿ ರೂ. ನೀಡಲಾಗಿತ್ತು. ಇವರು ಎರಡು ಆವೃತ್ತಿಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು. ಸಿಎಸ್‌ಕೆ ಇವರನ್ನು 2 ಕೋಟಿ ನೀಡಿ ಖರೀದಿಸಿತ್ತು.
35 ವರ್ಷದ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹ್ಯಾಜಲ್‌ವುಡ್ 39 ಐಪಿಎಲ್ ಪಂದ್ಯಗಳನ್ನು ಆಡಿದ್ದು 8.27 ಎಕಾನಮಿಯಲ್ಲಿ 57 ವಿಕೆಟ್ ಪಡೆದಿದ್ದಾರೆ. ಇವರು ಕಳೆದ ಬಾರಿಯ ಐಪಿಎಲ್‌ನಲ್ಲಿ ಬಿಗುವಿನ ದಾಳಿ ನಡೆಸಿ ಆಡಿದ 12 ಪಂದ್ಯಗಳಲ್ಲಿ 22 ವಿಕೆಟ್ ಕಬಳಿಸಿದ್ದರು.