Manchester Test: ನಾಲ್ಕನೇ ಟೆಸ್ಟ್‌ಗೆ ಕ್ಷಣಗಣನೆ: ಹೇಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಗ್ ಇಲೆವೆನ್?
ಭಾರತ ಹಾಗೂ ಇಂಗ್ಲೆಂಡ್ ನಡುವಣ ಆಂಡರ್ಸನ್, ತೆಂಡುಲ್ಕರ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ. ಈ ಟೆಸ್ಟ್ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡದಲ್ಲಿ ಟೀಮ್ ಇಂಡಿಯಾ ಇದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾಕ್ಕೆ ಗಾಯಳು ಆಟಗಾರರ ಸಮಸ್ಯೆ ಬಹುವಾಗಿ ಕಾಡುತ್ತಿದೆ. ಈ ವೇಳೆ ಟೀಮ್ ಇಂಡಿಯಾದ ಸಂಯೋಜನೆ ಹೇಗಿರಲಿದೆ ಎಂಬ ಚಿಂತೆ ಕಾಡುತ್ತಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸುವ ಕನಸು ಕಾಣುತ್ತಿದೆ.
ಮ್ಯಾಂಚೆಸ್ಟರ್ ಮೈದಾನದಲ್ಲಿ ಈ ವರೆಗೆ ಭಾರತ ಓಲ್ಡ್ ಟ್ರಾಫರ್ಡ್‌ನಲ್ಲಿ 9 ಟೆಸ್ಟ್‌ಗಳನ್ನು ಆಡಿದೆ, ಇದರಲ್ಲಿ 4 ಸೋಲು ಮತ್ತು 5 ಡ್ರಾ ಆಗಿದ್ದವು, ಆದರೆ ಒಂದೇ ಒಂದು ಪಂದ್ಯವನ್ನು ಗೆಲ್ಲಲಿಲ್ಲ. ಈ ಮೈದಾನದಲ್ಲಿ ಗೆದ್ದು ಇತಿಹಾಸ ನಿರ್ಮಿಸುವ ಕನಸಿನಲ್ಲಿ ಟೀಮ್ ಇಂಡಿಯಾ ಇದೆ. ಬರ್ಮಿಂಗ್‌ಹ್ಯಾಮ್‌ನಲ್ಲಿ ಮಾಡಿದ ಮ್ಯಾಜಿಕ್, ಮ್ಯಾಂಚೆಸ್ಟರ್‌ನಲ್ಲಿ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ನಿಜಕ್ಕೂ ಮ್ಯಾನೇಂಜ್ಮೆಂಟ್ ಚಿಂತೆಯನ್ನು ಹೆಚ್ಚಿಸಿದೆ. ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಕಣಕ್ಕೆ ಇಳಿಯಲಿದ್ದಾರೆ. ಈ ಇಬ್ಬರೂ ಆಟಗಾರರು ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಆಡಬೇಕಿದೆ. ಇನ್ನು ಮೂರನೇ ಕ್ರಮಾಂಕದಲ್ಲಿ ಯಾರು ಆಡುತ್ತಾರೆ ಎಂಬ ಪ್ರಶ್ನೆಗೆ ಬುಧವಾರ ಉತ್ತರ ಸಿಗಲಿದೆ. ಕರುಣ್ ನಾಯರ್ ಪ್ರಸಕ್ತ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಇವರ ಸ್ಥಾನದಲ್ಲಿ ಆಡುವ ಆಟಗಾರ ಎಂಬ ಪ್ರಶ್ನೆ ಎದ್ದಿದೆ. ಈ ಸ್ಥಾನದ ಮೇಲೆ ಸಾಯಿ ಸುದರ್ಶನ್ ಹಾಗೂ ಅಭಿಮನ್ಯು ಈಶ್ವರನ್ ಕಣ್ಣು ನೆಟ್ಟಿದ್ದಾರೆ.
ಮಧ್ಯಮ ಕ್ರಮಾಂಕವೇ ಬಲ
ಟೀಮ್ ಇಂಡಿಯಾ ಪರ ನಾಲ್ಕನೇ ಕ್ರಮಾಂಕದಲ್ಲಿ ಆಡುವ ಶುಭಮನ್ ಗಿಲ್, ದೊಡ್ಡ ಇನಿಂಗ್ಸ್ ಕಟ್ಟುವ ಮೂಲಕ ದಾಖಲೆ ಬರೆಯುವ ಕನಸಿನಲ್ಲಿದ್ದಾರೆ. ಇನ್ನು ರಿಷಭ್ ಪಂತ್ ಗಾಯಕ್ಕೆ ತುತ್ತಾಗಿದ್ದಾರೆ. ಇವರು ಆಡುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಇನ್ನು ಆಲ್‌ರೌಂಡರ್ ರೂಪದಲ್ಲಿ ರವೀಂದ್ರ ಜಡೇಜಾ, ವಾಶಿಂಗ್ಟನ್ ಸುಂದರ್ ಆಡುವ ತಂಡದಲ್ಲಿ ಸ್ಥಾನ ಪಡೆಯುವುದು ಕನ್ಫರ್ಮ್ ಆಗಿದೆ. ಈ ಇಬ್ಬರೂ ಆಟಗಾರರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಬಲ್ಲರು.

ಕುಲ್‌ದೀಪ್‌ಗೆ ಸಿಗುತ್ತಾ ಅವಕಾಶ?
ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಹೀಗಾಗಿ ಕುಲ್‌ದೀಪ್ ಯಾದವ್ ತಂಡದಲ್ಲಿ ಸ್ಥಾನಪಡೆಯುತ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ. ಇವರು ನಿತೀಶ್ ಕುಮಾರ್ ರೆಡ್ಡಿ ಸ್ಥಾನದಲ್ಲಿ ಕಾಣಿಸಿಕೊಂಡರೂ ಅಚ್ಚರಿಯಿಲ್ಲ. ಇನ್ನು ವೇಗದ ಬೌಲರ್ ರೂಪದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ತಮ್ಮ ಬಿಗುವಿನ ವೇಗದ ದಾಳಿಯ ಮೂಲಕ ಎದುರಾಳಿಗಳನ್ನು ಕಾಡಬಲ್ಲರು. ಮೂರನೇ ವೇಗದ ಬೌಲರ್ ಸ್ಥಾನದ ಮೇಲೆ ಪ್ರಸಿದ್ಧ್ ಕೃಷ್ಣಾ ಹಾಗೂ ಅನ್ಶುಲ್ ಕಾಂಬೋಜ್ ಕಣ್ಣು ನೆಟ್ಟಿದ್ದಾರೆ. ಈ ಇಬ್ಬರಲ್ಲಿ ಒಬ್ಬರಿಗೆ ಸ್ಥಾನ ಸಿಗುವ ಸಾಧ್ಯತೆ ಇದೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಕಾಂಬಿನಷೇನ್ ಎಲ್ಲರ ಚಿತ್ತ ಕದ್ದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications