ಮ್ಯಾಂಚೆಸ್ಟರ್‌ ಟೆಸ್ಟ್: ಹವಾಮಾನ ವರದಿ, ನೇರಪ್ರಸಾರದ ಮಾಹಿತಿ ಮತ್ತು ಸಂಭಾವ್ಯ ಆಡುವ ಬಳಗ

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚೆಗೀಡಾಗಿರುವ ವಿಷಯವೆಂದರೆ ಅದು ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿ. ಹೌದು, ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಈ ಸರಣಿ ಅಂತಿಮ ಘಟ್ಟಕ್ಕೆ ತಲುಪಿದ್ದು ಯಾವ ತಂಡ ಸರಣಿಯಲ್ಲಿ ವಿಜೇತ ತಂಡವಾಗಿ ಹೊರಹೊಮ್ಮಲಿದೆ ಅಥವಾ ಸರಣಿ ಡ್ರಾನಲ್ಲಿ ಅಂತ್ಯಗೊಳ್ಳಲಿದೆಯಾ ಎಂಬ ಕುತೂಹಲ ಮತ್ತು ಕಾತರತೆ ಇದೀಗ ಎಲ್ಲರಲ್ಲಿಯೂ ಮೂಡಿದೆ. ಸರಣಿಯಲ್ಲಿ ಈಗಾಗಲೇ ಮುಗಿದಿರುವ 4 ಪಂದ್ಯಗಳ ಪೈಕಿ ಟೀಮ್ ಇಂಡಿಯಾ 2 ಪಂದ್ಯಗಳಲ್ಲಿ ಜಯವನ್ನು ಸಾಧಿಸಿ ಸರಣಿಯಲ್ಲಿ ಮೇಲುಗೈ ಸಾಧಿಸಿದ್ದರೆ, ಅತ್ತ ಇಂಗ್ಲೆಂಡ್ ಕೇವಲ ಒಂದೇ ಒಂದು ಪಂದ್ಯದಲ್ಲಿ ಜಯ ಗಳಿಸುವುದರ ಮೂಲಕ ಅಂತಿಮ ಪಂದ್ಯವನ್ನು ಗೆಲ್ಲಲೇಬೇಕಾದ ಪರಿಸ್ಥಿತಿಯಲ್ಲಿದೆ.

ಹೌದು, ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ತಂಡ ಗೆದ್ದರೆ ಸರಣಿ ಡ್ರಾ ಆಗಲಿದೆ, ಒಂದುವೇಳೆ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕೂಡ ಟೀಮ್ ಇಂಡಿಯಾ ಗೆದ್ದರೆ ಅಥವಾ ಪಂದ್ಯ ಡ್ರಾ ಆದರೆ ಸರಣಿ ವಿರಾಟ್ ಕೊಹ್ಲಿ ಪಡೆಯ ಕೈವಶವಾಗಲಿದೆ. ಹೀಗಾಗಿ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಿಮ ಪಂದ್ಯದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆಗಳು ಹುಟ್ಟಿಕೊಂಡಿವೆ.

ಇನ್ನು ಓವಲ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 157 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿದ್ದು ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಲಿರುವ ಐದನೇ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳುವತ್ತ ಚಿತ್ತ ನೆಟ್ಟಿದೆ. ಇನ್ನು ಸರಣಿಯಲ್ಲಿ ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಜಯ ಗಳಿಸಿರುವ ಇಂಗ್ಲೆಂಡ್ ಅಂತಿಮ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸುವುದರ ಮೂಲಕ ಸರಣಿಯನ್ನು ಡ್ರಾ ಮಾಡಿಕೊಳ್ಳುವ ಚಿಂತನೆಯಲ್ಲಿದೆ.

ಹೀಗೆ ಭಾರೀ ನಿರೀಕ್ಷೆಯನ್ನು ಹುಟ್ಟು ಹಾಕಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯದ ಕುರಿತ ವಿವರಗಳು ಮತ್ತು ಕೆಲ ಮಾಹಿತಿಗಳು ಈ ಕೆಳಕಂಡಂತಿವೆ ಓದಿ..

ಪಂದ್ಯದ ಸಮಯ ಮತ್ತು ಸ್ಥಳ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಲಂಡನ್ ನಗರದ ಮ್ಯಾಂಚೆಸ್ಟರ್ ಓಲ್ಡ್ ಟ್ರಾಫೊರ್ಡ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 10ರಿಂದ ಸೆಪ್ಟೆಂಬರ್ 14ರವರೆಗೆ ನಡೆಯಲಿದೆ. ಸೆಪ್ಟೆಂಬರ್ 10ರಂದು ಭಾರತದ ಕಾಲಮಾನದ ಪ್ರಕಾರ ಮಧ್ಯಾಹ್ನ 3.30ಕ್ಕೆ ಈ ಪಂದ್ಯ ಆರಂಭವಾಗಲಿದೆ.

ಭಾರತದ ಈ ನಾಲ್ವರು ಬ್ಯಾಟ್ಸ್‌ಮನ್‌ಗಳಿಗೆ ಬೌಲಿಂಗ್‌ ಮಾಡುವುದು ಬಲು ಕಠಿಣ: ಮಾರ್ಕ್ ವುಡ್ಭಾರತದ ಈ ನಾಲ್ವರು ಬ್ಯಾಟ್ಸ್‌ಮನ್‌ಗಳಿಗೆ ಬೌಲಿಂಗ್‌ ಮಾಡುವುದು ಬಲು ಕಠಿಣ: ಮಾರ್ಕ್ ವುಡ್

ಹವಾಮಾನ ವರದಿ :

ಭಾರತ ಮತ್ತು ಇಂಗ್ಲೆಂಡ್ ನಡುವೆ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಅಂತಿಮ ಟೆಸ್ಟ್ ಪಂದ್ಯದ ಮೊದಲನೇ ದಿನದ ಆರಂಭಕ್ಕೂ 1 ಗಂಟೆಯ ಮುನ್ನ ಮಳೆಯಾಗುವ ಸಂಭವವಿದೆ. ಮೊದಲನೆ ದಿನ ಸುಮಾರು 40% ಮಳೆಯಾಗುವ ನಿರೀಕ್ಷೆಗಳಿದ್ದು ಮೊದಲನೇ ದಿನದಾಟ ಆಟಗಾರರಿಗೆ ಸುಲಭವಾಗಿರುವುದಿಲ್ಲ ಎಂದು ಹವಾಮಾನ ವರದಿ ಹೇಳುತ್ತಿದೆ.

ಭಾರತ ಮತ್ತು ಇಂಗ್ಲೆಂಡ್ ತಂಡಗಳ ಸಂಭಾವ್ಯ ಆಡುವ ಬಳಗ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸಲಿರುವ ಎರಡೂ ತಂಡಗಳ ಸಂಭಾವ್ಯ ಆಟಗಾರರ ಪಟ್ಟಿ ಈ ಕೆಳಕಂಡಂತಿದೆ..

ಭಾರತ ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ, ಲೋಕೇಶ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ/ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್

ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ನಾಯಕ), ಜಾನಿ ಬೈರ್‌ಸ್ಟೊ (ವಿಕೆಟ್ ಕೀಪರ್), ಒಲ್ಲಿ ಪೋಪ್/ಜೋಸ್ ಬಟ್ಲರ್, ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್/ಮಾರ್ಕ್ ವುಡ್, ಓಲ್ಲಿ ಎಡ್ವರ್ಡ್ ರಾಬಿನ್ಸನ್, ಜೇಮ್ಸ್ ಆಂಡರ್ಸನ್/ಜ್ಯಾಕ್ ಲೀಚ್

ಮ್ಯಾಂಚೆಸ್ಟರ್ ಪಿಚ್ ರಿಪೋರ್ಟ್

ಮ್ಯಾಂಚೆಸ್ಟರ್ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದ ಪಿಚ್ ವೇಗಿಗಳಿಗೆ ಹೆಚ್ಚು ಅನುಕೂಲಕರವಾಗಿರಲಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುವ ತಂಡ ಗೆಲ್ಲುವ ಸಾಧ್ಯತೆಗಳನ್ನು ಹೆಚ್ಚು ಹೊಂದಿದೆ. ನಾಲ್ಕನೇ ಮತ್ತು ಐದನೇ ದಿನದಾಟದಲ್ಲಿ ಬ್ಯಾಟಿಂಗ್ ಮಾಡುವುದು ತೀರಾ ಕಷ್ಟವೆನಿಸಲಿದ್ದು ಟಾಸ್ ಗೆಲ್ಲುವ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಮೊದಲನೇ ಇನ್ನಿಂಗ್ಸ್‌ನಲ್ಲಿಯೇ ಹೆಚ್ಚು ರನ್ ಕಲೆ ಹಾಕಿಕೊಳ್ಳುವುದು ಉತ್ತಮ ಉಪಾಯ.

ನೇರ ಪ್ರಸಾರ:

Kohli ಹಾಗು Siraj ನಾಳೆ RCB camp ಸೇರಲಿದ್ದಾರೆ | Oneindia Kannada

ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯವನ್ನು ಸೋನಿ ಸಿಕ್ಸ್ ಚಾನೆಲ್‌ನಲ್ಲಿ ವೀಕ್ಷಿಸಬಹುದಾಗಿದೆ ಮತ್ತು ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಸಹ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 15 - October 24 2021, 03:30 PM
ಶ್ರೀಲಂಕಾ
ಬಾಂಗ್ಲಾದೇಶ್
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Friday, September 10, 2021, 12:15 [IST]
Other articles published on Sep 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X