Women's T20 World Cup: ಸ್ಮೃತಿ, ಶಫಾಲಿ ಅರ್ಧಶತಕ: ಟೀಮ್ ಇಂಡಿಯಾ ದಾಖಲೆ
ಲೀಡ್ಸ್: ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಅವರು ಬಾರಿಸಿದ ಅರ್ಧಶತಕದ ಬಲದಿಂದ ಟೀಮ್ ಇಂಡಿಯಾ ಮಹಿಳಾ ಟಿ20 ವಿಶ್ವಕಪ್‌ನ ಲೀಗ್ ಹಂತದ ಎರಡನೇ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್ ವಿರುದ್ಧ 20 ಓವರ್‌ಗಳಲ್ಲಿ 209 ರನ್ ಕಲೆ ಹಾಕಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭ ಭರ್ಜರಿಯಾಗಿತ್ತು. ಆರಂಭಿಕರಾದ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧನಾ ಜೋಡಿ ತಂಡಕ್ಕೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ತಮ್ಮ ಅನುಭವದ ಲಾಭ ಪಡೆದು ಬ್ಯಾಟ್ ಮಾಡಿ ಅಬ್ಬರಿಸಿತು. ಈ ಜೋಡಿ ಮೊದಲ ವಿಕೆಟ್‌ಗೆ 11.4 ಓವರ್‌ಗಳಲ್ಲಿ 115 ರನ್ ಸೇರಿಸಿತು.

ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 157 ಸ್ಟ್ರೈಕ್ ರೇಟ್‌ನಲ್ಲಿ 74 ರನ್ ಕಲೆ ಹಾಕಿದರು. ಶಫಾಲಿ 47 ಎಸೆತಗಳಲ್ಲಿ 11 ಬೌಂಡರಿ, 1 ಸಿಕ್ಸರ್ ಸಹಾಯದಿಂದ 74 ರನ್ ಸಿಡಿಸಿ ಔಟ್ ಆದರು. ಇನ್ನು ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದ ಉಪನಾಯಕಿ ಸ್ಮೃತಿ ಮಂಧಾನ ಸಹ ದೊಡ್ಡ ಇನಿಂಗ್ಸ್ ಕಟ್ಟಿದರು. ಇವರು 38 ಎಸೆತಗಳಲ್ಲಿ 10 ಬೌಂಡರಿ ಸಹಾಯದಿಂದ 55 ರನ್ ಬಾರಿಸಿದರು.
ಮಧ್ಯಮ ಕ್ರಮಾಂಕದಲ್ಲಿ ಜೆಮಿಮಾ ರೊಡ್ರಿಗಸ್ 19, ಯಾಸ್ತಿಕಾ ಭಾಟಿಯಾ 3 ರನ್ ಬಾರಿಸಿ ಔಟ್ ಆದರು. ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಇವರು 250 ಸ್ಟ್ರೈಕ್ ರೇಟ್‌ನಲ್ಲಿ ರನ್ ಕಲೆ ಹಾಕಿದರು. ನಾಯಕ ಹರ್ಮನ್ ಪ್ರೀತ್ ಕೌರ್ 12 ರನ್ ಸಿಡಿಸಿ ಔಟ್ ಆದರು.
ಮೊದಲ ಬಾರಿಗೆ 200 ರನ್
ಈ ಮೂಲಕ ಟೀಮ್ ಇಂಡಿಯಾ ಟಿ20 ಕ್ರಿಕೆಟ್‌ನಲ್ಲಿ ಐದನೇ ಬಾರಿ 200ಕ್ಕೂ ಹೆಚ್ಚು ರನ್ ಬಾರಿಸಿದ ದಾಖಲೆಯನ್ನು ನಿರ್ಮಿಸಿತು. ಟೀಮ್ ಇಂಡಿಯಾ ವಿಶ್ವಕಪ್‌ನಲ್ಲಿ ಇದೇ ಮೊದಲ ಬಾರಿಗೆ 200ಕ್ಕೂ ಹೆಚ್ಚು ರನ್ ಸೇರಿಸಿದೆ. ಇನ್ನು ಈ ವಿಶ್ವಕಪ್‌ನಲ್ಲಿ ಎರಡನೇ ಬಾರಿಗೆ 200ಕ್ಕೂ ಹೆಚ್ಚು ರನ್ ದಾಖಲಾಗಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications