ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಎಬಿಡಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವ ಸೂಚನೆ ನೀಡಿದ ಬೌಚರ್

Mark Boucher hints AB de Villiers’ international comeback talks are still on

ಎಬಿ ಡಿವಿಲಿಯರ್ಸ್ ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಬ್ಯುಸಿಯಾಗಿದ್ದಾರೆ. 2018ರಲ್ಲಿ ಎಬಿ ಡಿವಿಲಿಯರ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. 2018ರ ಮಾರ್ಚ್ 30ರಂದು ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ಪಂದ್ಯ ಎಬಿ ಡಿವಿಲಿಯರ್ಸ್ ಆಡಿದ ಕೊನೆಯ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವಾಗಿದೆ. ಇದಾದ ಬಳಿಕ ಅನೇಕ ಬಾರಿ ಎಬಿ ಡಿವಿಲಿಯರ್ಸ್ ಅವರು ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

2020ರಲ್ಲಿ ನಡೆಯಬೇಕಿದ್ದ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಎಬಿಡಿ ಸೌತ್ ಆಫ್ರಿಕಾ ತಂಡದ ಪರ ಆಡಲಿದ್ದಾರೆ ಎಂಬ ಸುದ್ದಿ ಇತ್ತು ಆದರೆ ಕೊರೊನಾ ವೈರಸ್ ಹಾವಳಿಯಿಂದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಮುಂದೂಡಲಾಯಿತು. ಇದೀಗ ಮತ್ತೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಹತ್ತಿರವಾಗುತ್ತಿದ್ದಂತೆ ಎಬಿ ಡಿವಿಲಿಯರ್ಸ್ ಅವರು ಮತ್ತೆ ಅಂತಾರಾಷ್ಟ್ರೀಯ ಪಂದ್ಯ ಆಡಲಿದ್ದಾರೆ ಎಂಬ ಮಾತುಗಳು ಹೆಚ್ಚಾಗುತ್ತಿವೆ. ಸೌತ್ ಆಫ್ರಿಕಾದ ಮಾಜಿ ಕ್ರಿಕೆಟಿಗ ಮತ್ತು ಪ್ರಸ್ತುತ ಕೋಚ್ ಆಗಿರುವ ಮಾರ್ಕ್ ಬೌಚರ್ ಎಬಿ ಡಿವಿಲಿಯರ್ಸ್ ಅವರ ಜೊತೆ ಈ ಕುರಿತು ಮಾತುಕತೆ ನಡೆಸಿದ್ದಾರೆ.

ವಿರಾಟ್ ಕೊಹ್ಲಿ ಜೊತೆ ಆಡೋದೆ ಖುಷಿ - Glen maxwell | Oneindia Kannada

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಾಗಿ ಎಬಿಡಿ ಭಾರತಕ್ಕೆ ಬರುವ ಮುಂಚೆ ಎಬಿ ಡಿವಿಲಿಯರ್ಸ್ ಅವರನ್ನು ಮಾರ್ಕ್ ಬೌಚರ್ ಭೇಟಿಯಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವ ಕುರಿತು ಮಾತುಕತೆ ನಡೆಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಎಬಿ ಡಿವಿಲಿಯರ್ಸ್ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುವ ಗುರಿಯನ್ನು ಹೊಂದಿದ್ದು ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ತೋರಿಸುವ ಹಂಬಲ ವ್ಯಕ್ತಪಡಿಸಿದ್ದಾರೆ ಹಾಗೂ ಐಪಿಎಲ್ ಮುಗಿದ ಬಳಿಕ ಮತ್ತೆ ಎಬಿಡಿಯವರನ್ನು ಭೇಟಿಯಾಗಿ ಮತ್ತೊಂದು ಸುತ್ತಿನ ಮಾತುಕತೆ ನಡೆಸುವುದಾಗಿ ಮಾರ್ಕ್ ಬೌಚರ್ ಹೇಳಿಕೊಂಡಿದ್ದಾರೆ.

Story first published: Friday, April 16, 2021, 9:49 [IST]
Other articles published on Apr 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X