Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WTC Final: ಎಲ್ಲರೂ ಐಪಿಎಲ್‌ನಲ್ಲಿ ಬ್ಯುಸಿ ಇದ್ರೆ ಈತ ಮಾತ್ರ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಇಂಗ್ಲೆಂಡ್‌ಗೆ ಹೊರಟ!

ಜೂನ್ 7 ರಿಂದ 12 ರವರೆಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಈ ಬಾರಿ ಫೈನಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಸೆಣೆಸಲಿವೆ. ಭಾರತ ಮತ್ತು ಆಸ್ಟ್ರೇಲಿಯಾದ ಟೆಸ್ಟ್ ತಂಡದ ಬಹುತೇಕ ಆಟಗಾರರು ಐಪಿಎಲ್‌ನಲ್ಲಿ ಬ್ಯುಸಿಯಾಗಿದ್ದರೆ, ಆಸ್ಟ್ರೇಲಿಯಾದ ಮಾರ್ನಸ್ ಲ್ಯಾಬುಸ್ಚಾಗ್ನೆ ಮಾತ್ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ಆಶಸ್ ಸರಣಿಗೆ ಸಿದ್ಧತೆ ನಡೆಸಲು ಇಂಗ್ಲೆಂಡ್‌ಗೆ ಪ್ರಯಾಣ ಮಾಡಿದ್ದಾರೆ.

ಟೆಸ್ಟ್ ಕ್ರಿಕೆಟ್‌ನ ಐಸಿಸಿ ನಂಬರ್ 1 ರ್‍ಯಾಂಕಿಂಗ್ ಆಟಗಾರನಾಗಿರುವ ಮಾರ್ನಸ್ ಲ್ಯಾಬುಸ್ಚಾಗ್ನೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ಇಂಗ್ಲೆಂಡ್ ವಿರುದ್ಧದ ಆಶಸ್ ಸರಣಿಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಪ್ರತಿಷ್ಠಿತಿ ಪಂದ್ಯಗಳಿಗಾಗಿ ಸಿದ್ಧತೆ ನಡೆಸಲು ಅವರು ಬುಧವಾರ ಇಂಗ್ಲೆಂಡ್‌ಗೆ ಪ್ರಯಾಣ ಮಾಡಿದ್ದಾರೆ. ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಗ್ಲಾಮೊರ್ಗಾನ್‌ಗಾಗಿ ಆಡಲಿದ್ದು, ಇಂಗ್ಲೆಂಡ್‌ಗೆ ಸುದೀರ್ಘ ಪ್ರಯಾಣ ಕೈಗೊಂಡಿದ್ದಾರೆ.

Marnus Labuschagne

2019ರಲ್ಲಿ ಅವರು ಕೌಂಟಿ ಕ್ರಿಕೆಟ್‌ ಆಡಲು ಗ್ಲಾಮೊರ್ಗಾನ್ ಕ್ಲಬ್ ಜೊತೆ ಸಂಪರ್ಕ ಹೊಂದಿದ್ದರು. ಕಳೆದ ವರ್ಷ ಅವರು ಗ್ಲಾಮೊರ್ಗಾನ್ ತಂಡದ ಜೊತೆ ಒಪ್ಪಂದಕ್ಕಾಗಿ ಸಹಿ ಹಾಕಿದರು. 2024ರ ಕೌಂಟಿ ಚಾಂಪಿಯನ್‌ಶಿಪ್‌ವರೆಗೆ ಅವರು ಅದೇ ತಂಡದಲ್ಲಿ ಮುಂದುವರಿಯಲಿದ್ದಾರೆ. ಗ್ಲಾಮೊರ್ಗಾನ್‌ಗಾಗಿ ಅವರು 21 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದಾರೆ, 52.09 ಸರಾಸರಿಯಲ್ಲಿ 1,719 ರನ್ ಗಳಿಸಿದ್ದು, 31 ವಿಕೆಟ್ ಪಡೆದುಕೊಂಡಿದ್ದಾರೆ.

ಇಂಗ್ಲೆಂಡ್‌ನಲ್ಲಿ ನಡೆಯುವ ಟಿ20 ಬ್ಲಾಸ್ಟ್ ಲೀಗ್‌ನಲ್ಲಿ ಕೂಡ ಅವರು 14 ಪಂದ್ಯಗಳನ್ನಾಡಿದ್ದು 508 ರನ್ ಗಳಿಸಿದ್ದಾರೆ ಮತ್ತು 12 ವಿಕೆಟ್‌ಗಳನ್ನು ಕೂಡ ಪಡೆದುಕೊಂಡಿದ್ದಾರೆ. ಈ ಬಾರಿ ಅವರು ಇಂಗ್ಲೆಂಡ್‌ನಲ್ಲಿ ಕೌಂಟಿ ಪಂದ್ಯಗಳನ್ನು ಆಡುವ ಜೊತೆಯಲ್ಲೇ ಭಾರತದ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಸಿದ್ಧತೆ ನಡೆಸಲಿದ್ದಾರೆ.

ಫೈನಲ್‌ನಲ್ಲಿ ಲ್ಯಾಬುಸ್ಚಾಗ್ನೆ ನಿರ್ಣಾಯಕ ಪಾತ್ರ?

ಯುನೈಟೆಡ್ ಕಿಂಗ್‌ಡಂನ ಲಂಡನ್‌ನಲ್ಲಿರುವ ಕೆನ್ನಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ಎರಡನೇ ಬಾರಿಗೆ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಸೆಣೆಸುತ್ತಿದೆ. ಕಳೆದ ಬಾರಿ ಅವರು ನ್ಯೂಜಿಲೆಂಡ್‌ ವಿರುದ್ಧ ಸೋಲುವ ಮೂಲಕ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಸೋತು ಮುಖಭಂಗ ಅನುಭವಿಸಿರುವ ಆಸ್ಟ್ರೇಲಿಯಾ ಫೈನಲ್ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. 28 ವರ್ಷದ ಲ್ಯಾಬುಸ್ಚಾಗ್ನೆ ಇಂಗ್ಲೆಂಡ್‌ನ ಪರಿಸ್ಥಿತಿಗೆ ಹೊಂದಿಕೊಳ್ಳಲು ಮುಂಚೆಯೇ ತೆರಳಿದ್ದಾರೆ. ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಂ. 1 ಸ್ಥಾನದಲ್ಲಿರುವ ಅವರು ಫೈನಲ್‌ನಲ್ಲಿ ಆಸ್ಟ್ರೇಲಿಯಾದ ಪ್ರಮುಖ ಬ್ಯಾಟಿಂಗ್ ಅಸ್ತ್ರವಾಗಲಿದ್ದಾರೆ.

Marnus Labuschagne

ಪ್ರತಿಷ್ಠೆಯ ಕದನ ಆಶಸ್ ಸರಣಿ

ಆಶಸ್ ಸರಣಿ ಎಂದರೆ ಅದು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳಿಗೆ ದೊಡ್ಡ ಕದನ ಎನ್ನುವಂತೆ ಬಿಂಬಿಸಲಾಗಿದೆ. ಭಾರತ ಪಾಕಿಸ್ತಾನ ಹೇಗೆ ಸಾಂಪ್ರದಾಯಿಕ ಎದುರಾಳಿಗಳೋ, ಆಸ್ಟ್ರೇಲಿಯಾ ಇಂಗ್ಲೆಂಡ್ ಕೂಡ ಹಾಗೆ. ಆಶಸ್ ಸರಣಿ ಎರಡೂ ತಂಡಗಳಿಗೆ ಪ್ರತಿಷ್ಠಿತ ಹೋರಾಟ. 2021-22ರ ಆಶಸ್ ಸರಣಿಯಲ್ಲಿ ಆಸ್ಟ್ರೇಲಿಯಾ 4-0 ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು.

ಜೂನ್ 16ರಿಂದ ಜುಲೈ 31ರವರೆಗೆ ಈ ಪ್ರತಿಷ್ಠಿತ ಟೆಸ್ಟ್ ಸರಣಿ ನಡೆಯಲಿದೆ. ಇಂಗ್ಲೆಂಡ್ ತವರಿನಲ್ಲಿ ಈ ಬಾರಿ ಸರಣಿ ಗೆಲ್ಲುವ ಉತ್ಸಾಹದಲ್ಲಿದೆ. ಬೆನ್‌ಸ್ಟೋಕ್ಸ್ ತಂಡದ ನಾಯಕತ್ವ ವಹಿಸಿಕೊಂಡು, ಬ್ರೆಂಡನ್ ಮೆಕಲಮ್ ಕೋಚ್ ಆಗಿ ನೇಮಕವಾದ ನಂತರ ಇಂಗ್ಲೆಂಡ್‌ ಆಕ್ರಮಣಕಾರಿ ಟೆಸ್ಟ್ ಕ್ರಿಕೆಟ್ ಆಡುತ್ತಿದೆ. ಈ ಎರಡು ಬಲಿಷ್ಠ ಟೆಸ್ಟ್ ತಂಡಗಳ ರೋಚಕ ಹೋರಾಟ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Story first published: Wednesday, April 12, 2023, 16:50 [IST]
Other articles published on Apr 12, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+