IND vs AUS: ಪರ್ತ್‌ನಲ್ಲಿ ಆಸೀಸ್‌ಗೆ 7 ವಿಕೆಟ್ ಜಯ: ಗಿಲ್ ಪಡೆಗೆ ಸೋಲು
ಪರ್ತ್: ನಾಯಕ ಮಿಚೆಲ್ ಮಾರ್ಷ್ (ಅಜೇಯ 46) ಹಾಗೂ ಜೋಶ್ ಫಿಲಿಫ್ (37 ರನ್) ಇವರುಗಳ ಭರ್ಜರಿ ಆಟದ ನೆರವಿನಿಂದ ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯದಲ್ಲಿ 3 ವಿಕೆಟ್‌ಗಳಿಂದ ಭಾರತ ತಂಡವನ್ನು ಮಣಿಸಿ, ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ ಮಳೆ ಬಾಧಿತ ಪಂದ್ಯವನ್ನು 26 ಓವರ್‌ಗಳಿಗೆ ಇಳಿಸಲಾಯಿತು. ಟೀಮ್ ಇಂಡಿಯಾ 26 ಓವರ್‌ಗಳಲ್ಲಿ 9 ವಿಕೆಟ್‌ಗೆ 136 ರನ್ ಸೇರಿಸಿತು. ಆಸ್ಟ್ರೇಲಿಯಾ 21.1 ಓವರ್‌ಗಳಲ್ಲಿ 3 ವಿಕೆಟ್‌ಗೆ 131 ರನ್ ಸೇರಿಸಿತು.

ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭ ಭರ್ಜರಿಯಾಗಿತ್ತು. ಭಾರತದ ಟಾಪ್ ಆರ್ಡರ್ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. 7 ತಿಂಗಳು ಬಳಿಕ ಮೈದಾನಕ್ಕೆ ಎಂಟ್ರಿ ನೀಡಿದ್ದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ಎಡವಿದರು. ಈ ಕ್ರಮಾಂಕದಲ್ಲಿ ಭಾರತದ ಪರ ಜೊತೆಯಾಟಗಳು ಬಾರದೆ ಇದ್ದಿದ್ದರಿಂದ ತಂಡ ಒತ್ತಡಕ್ಕೆ ಸಿಲುಕಿತು. ಈ ಅವಧಿಯಲ್ಲಿ ಟೀಮ್ ಇಂಡಿಯಾ 13 ಓವರ್‌ಗಳಲ್ಲಿ 45 ರನ್ ಸೇರಿಸಿದ್ದು, 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಅವಧಿಯಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಕೊಂಚ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು.
ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್ (38), ಅಕ್ಷರ್ ಪಟೇಲ್ (31), ನಿತೀಶ್ ಕುಮಾರ್ ರೆಡ್ಡಿ (ಅಜೇಯ 19) ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಅಂತಿಮವಾಗಿ ಭಾರತ 26 ಓವರ್‌ಗಳಲ್ಲಿ 9 ವಿಕೆಟ್‌ಗೆ 136 ರನ್ ಸೇರಿಸಿತು. ಆಸೀಸ್ ಪರ ಜೋಶ್ ಹ್ಯಾಜಲ್‌ವುಡ್, ಮಿಚೆಲ್ ಓವನ್ ತಲಾ 2 ವಿಕೆಟ್ ಕಬಳಿಸಿದರು.
ಆಸೀಸ್‌ಗೆ ಜಯ
ಆಸ್ಟ್ರೇಲಿಯಾ ತಂಡದ ಪರ ಇನಿಂಗ್ಸ್ ಆರಂಭಿಸಿದ ಟ್ರಾವಿಸ್ ಹೆಡ್ (8), ಮ್ಯಾಥ್ಯೂ ಶಾರ್ಟ್ (8) ರನ್ ಕಲೆ ಹಾಕುವಲ್ಲಿ ವಿಫಲರಾದರು. 3ನೇ ವಿಕೆಟ್‌ಗೆ ಮಿಚೆಲ್ ಮಾರ್ಷ್ ಹಾಗೂ ಜೋಶ್ ಫಿಲಿಫ್ 45 ಎಸೆತಗಳಲ್ಲಿ 55 ರನ್ ಸೇರಿಸಿತು. ಜೋಶ್ ಫಿಲಿಫ್ 3 ಬೌಂಡರಿ, 2 ಸಿಕ್ಸರ್ ಸಹಾಯದಿಂದ 37 ರನ್ ಸೇರಿಸಿದರು. ಮ್ಯಾಟ್ ರೆನ್ಶಾ 24 ಎಸೆತಗಳಲ್ಲಿ ಅಜೇಯ 21 ರನ್ ಸಿಡಿಸಿದರು. ಆರಂಭಿಕರಾದ ಮಿಚೆಲ್ ಮಾರ್ಷ್ 2 ಬೌಂಡರಿ, 3 ಸಿಕ್ಸರ್ ಸಹಾಯದಿಂದ ಅಜೇಯ 46 ರನ್ ಬಾರಿಸಿ ಗೆಲುವಿನಲ್ಲಿ ಮಿಂಚಿದರು. 4ನೇ ವಿಕೆಟ್‌ಗೆ ಮಿಚೆಲ್ ಮಾರ್ಷ್ ಹಾಗೂ ಮ್ಯಾಟ್ ರೆನ್ಶಾ 35 ಎಸೆತಗಳಲ್ಲಿ ಅಜೇಯ 32 ರನ್ ಸೇರಿಸಿತು. ಅಂತಿಮವಾಗಿ ಆಸ್ಟ್ರೇಲಿಯಾ 21.1 ಓವರ್‌ಗಳಲ್ಲಿ 3 ವಿಕೆಟ್‌ಗೆ 131 ರನ್ ಕಲೆ ಹಾಕಿತು.

ವೇಗದ ಬೌಲರ್ ಅರ್ಷದೀಪ್ ಸಿಂಗ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ತಲಾ ಒಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications