ಏಕದಿನ ವಿಶ್ವಕಪ್: ಹೇಡನ್ ಹೆಸರಿಸಿದ ಭಾರತ ತಂಡದಿಂದ ಸ್ಟಾರ್ ಜೋಡಿ ಔಟ್: ಸಂಜುಗೆ ಅವಕಾಶ!
ವಿಶ್ವಕಪ್ ಟೂರ್ನಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ತಮ್ಮ ಆಯ್ಕೆಯ ಭಾರತ ತಂಡವನ್ನು ಹೆಸರಿಸಿದ್ದಾರೆ. ಆದರೆ ಈ ತಂಡದಲ್ಲಿ ಕೆಲ ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಂಡಿದ್ದು ಕುತೂಹಲ ಮೂಡಿಸಿದೆ. ಏಷ್ಯಾಕಪ್ ತಂಡದಲ್ಲಿ ಸ್ಥಾನವನ್ನು ಪಡೆಯಲು ವಿಫಲವಾಗಿರುವ ಸಂಜು ಸ್ಯಾಮ್ಸನ್ ಹೇಡನ್ ಹೆಸರಿಸಿರುವ ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ಇನ್ನು ಕುತೂಹಲಕಾರಿಯೆನ್ನುವಂತೆ ಭಾರತದ ಸ್ಪಿನ್ ಜೋಡಿಗಳಾದ ಕುಲ್‌ದೀಪ್ ಯಾದವ್ ಹಾಗೂ ಯುಜುವೇಂದ್ರ ಚಾಹಲ್ ಇಬ್ಬರನ್ನು ಕೂಡ ಹೇಡನ್ ವಿಶ್ವಕಪ್ ತಂಡದಿಂದ ಹೊರಗಿಟ್ಟಿದ್ದಾರೆ. ಕುಲ್‌ದೀಪ್ ಯಾದವ್ ಏಷ್ಯಾ ಕಪ್ ತಮಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದರೆ ಯುಜುವೇಂದ್ ಚಾಹಲ್ ಈ ತಂಡದಿಂದ ಹೊರಗುಳಿದಿದ್ದರು.

ಬಿಸಿಸಿಐ ರೋಹಿತ್ ಶರ್ಮಾ ನೇತೃತ್ವದ 17 ಆಟಗಾರರ ಟೀಮ್ ಇಂಡಿಯಾ ತಂಡವನ್ನು ಏಷ್ಯಾಕಪ್ ಟೂರ್ನಿಗಾಗಿ ಈಗಾಗಲೇ ಪ್ರಕಟಿಸಿದೆ. ನಾತಕ ರೋಹಿತ್ ಶರ್ಮಾಗೆ ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಸಾತ್ ನೀಡಲಿದ್ದು ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಮತ್ತು ಪ್ರಸಿದ್ಧ್ ಕೃಷ್ಣ ಈ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಸಂಜು ಸ್ಯಾಮ್ಸನ್‌ಗೆ ಮೀಸಲು ಆಟಗಾರನಾಗಿ ಪ್ರಯಾಣಿಸಲು ಅವಕಾಶ ದೊರೆತಿದೆ.
ಇನ್ನು ಹೇಡನ್ ಪ್ರಕಟಿಸಿರುವ ವಿಶ್ವಕಪ್ ತಂಡದಲ್ಲಿ ಅಗ್ರ ಕ್ರಮಾಂಕದಲ್ಲಿ ಯಾವುದೇ ಬದಲಾವಣೆಯಿಲ್ಲದೆ ನಾಯಕ ರೋಹಿತ್ ಶರ್ಮಾ, ಶುಬ್ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಆದರೆ ತಿಲಕ್ ವರ್ಮಾ, ಯುಜುವೇಂದ್ರ ಚಾಹಲ್ ಹಾಗೂ ಕುಲ್‌ದೀಪ್ ಯಾದವ್ ಅವರನ್ನು ತಂಡದಿಂದ ಹೊರಗಿಟ್ಟಿದ್ದಾರೆ. ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಅವರಿಗೆ ತಂಡದ ಮುಖ್ಯ ಸ್ಫುನ್ನರ್ ಜವಾಬ್ದಾರಿ ನೀಡಿದ್ದಾರೆ.
ಹೇಡನ್ ಪ್ರಕಟಿಸಿದ ಭಾರತದ ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ, ವಿರಾಟ್ ಕೊಹ್ಲಿ, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್ ಮತ್ತು ಅಕ್ಷರ್ ಪಟೇಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications