Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023 Auction: ದೊಡ್ಡ ಮೊತ್ತಕ್ಕೆ ಮಯಾಂಕ್ ಅಗರ್ವಾಲ್ ಖರೀದಿಸಿದ ಸನ್‌ರೈಸರ್ಸ್ ಹೈದರಾಬಾದ್

Mayank Agarwal Acquired By Sunrisers Hyderabad For Rs 8.25 Cr

2023ರ ಇಂಡಿಯನ್ ಪ್ರೀಮಿಯರ್ ಲೀಗ್‌ಗಾಗಿ (ಐಪಿಎಲ್) ಮಿನಿ ಹರಾಜು ಶುಕ್ರವಾರ, ಡಿಸೆಂಬರ್ 23ರಂದು ಕೊಚ್ಚಿಯಲ್ಲಿ ಅದ್ಧೂರಿಯಾಗಿ ಪ್ರಾರಂಭವಾಗಿದೆ. ಕರ್ನಾಟಕದ ಆಟಗಾರ ಮಯಾಂಕ್ ಅಗರ್ವಾಲ್ ದೊಡ್ಡ ಮೊತ್ತಕ್ಕೆ ಖರೀದಿಯಾಗಿದ್ದಾರೆ.

ಭಾರಿ ಬೆಲೆಗೆ ಮಾರಾಟವಾಗುವ ನಿರೀಕ್ಷೆ ಮೂಡಿಸಿದ್ದ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ ಬರೋಬ್ಬರಿ 8.25 ಕೋಟಿ ರೂ.ಗೆ ಖರೀದಿಸಿದೆ. ಎಸ್‌ಆರ್‌ಎಚ್ ದೊಡ್ಡ ಆಟಗಾರರಿಗೆ ಮಣೆ ಹಾಕಲಿದೆ ಎಂದು ಅಂದಾಜು ಹಾಕಲಾಗಿತ್ತು, ಇದೀಗ ಅದನ್ನೇ ಮಾಡಿದ್ದಾರೆ.

ಕಳೆದ ಬಾರಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ಮಯಾಂಕ್ ಅಗರ್ವಾಲ್ ತಂಡವನ್ನು ಮುನ್ನಡೆಸಿದ್ದರು. ಅದರೆ ಈ ಬಾರಿ ಅವರನ್ನು ರಿಟೇನ್ ಮಾಡಿಕೊಳ್ಳದೆ ಬಿಡುಗಡೆ ಮಾಡಿತ್ತು. ಇದೀಗ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕತ್ವ ವಹಿಸಿಕೊಳ್ಳುವ ಸಾದ್ಯತೆ ಇದೆ.

ಗುಜರಾತ್ ಟೈಟನ್ಸ್ ತಂಡಕ್ಕೆ ಕೇನ್ ವಿಲಿಯಮ್ಸನ್
ಇದಕ್ಕೂ ಮುನ್ನ ನ್ಯೂಜಿಲೆಂಡ್ ತಂಡದ ಆಟಗಾರ ಕೇನ್ ವಿಲಿಯಮ್ಸನ್ ಅವರನ್ನು ಗುಜರಾತ್ ಟೈಟನ್ಸ್ ತಂಡ 2 ಕೋಟಿ ರೂಪಾಯಿಗೆ ಖರೀದಿ ಮಾಡಿದೆ. ಈ ಹಿಂದೆ 2022ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 16 ಕೋಟಿ ರೂ.ಗೆ ಮಾರಾಟವಾಗಿದ್ದ ಕೇನ್ ವಿಲಿಯಮ್ಸನ್, ಈ ಬಾರಿ ಮೂಲ ಬೆಲೆಗೆ ಸೋಲ್ಡ್ ಔಟ್ ಆಗಿದ್ದಾರೆ.

ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್‌ಗೆ ತೆರಳಿದ್ದು, ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಆಡಲಿದ್ದಾರೆ. ದೊಡ್ಡ ಮೊತ್ತ ನಿರೀಕ್ಷಿಸಿದ್ದ ನ್ಯೂಜಿಲೆಂಡ್ ತಂಡದ ವೈಟ್-ಬಾಲ್ ನಾಯಕನಿಗೆ ನಿರಾಸೆಯಾಗಿದೆ.

Story first published: Friday, December 23, 2022, 15:24 [IST]
Other articles published on Dec 23, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+