Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Team India: ಡಾನ್ ಬ್ರಾಡ್ಮನ್ ಅವರಂತೆ ಬ್ಯಾಟಿಂಗ್; ಭಾರತ ತಂಡದಿಂದ ಕಣ್ಮರೆಯಾದ ಸೂಪರ್ ಸ್ಟಾರ್!

ಟೀಮ್ ಇಂಡಿಯಾದಲ್ಲಿ ಆನೇಕ ಆಟಗಾರರು ಕೆಲಕಾಲ ಆಡಿದರೂ ಮಿಂಚಿದ್ದಾರೆ. ಆದರೆ ಭವಿಷ್ಯದಲ್ಲಿ ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವಲ್ಲಿ ವಿಫಲವಾಗಿದ್ದಾರೆ. ಇದರಲ್ಲಿ ಸೂಪರ್ ಸ್ಟಾರ್ ಬ್ಯಾಟರ್ ಒಬ್ಬರು. ಈ ಪ್ರತಿಭಾವಂತ ಕ್ರಿಕೆಟಿಗನನ್ನು ಮೊದಲು ಕೆಎಲ್ ರಾಹುಲ್ ಕಾರಣದಿಂದ ಭಾರತ ಟೆಸ್ಟ್ ತಂಡದಿಂದ ಕೈಬಿಡಲಾಯಿತು. ಈಗ ಯುವ ಸ್ಪೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್‌ ಅದ್ಭುತ ಪ್ರದರ್ಶನದಿಂದ ಅವರಿಗೆ ಭಾರತ ಟೆಸ್ಟ್ ತಂಡದಲ್ಲಿ ಅವಕಾಶ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಈ ಆಟಗಾರನ ಅಂತಾರಾಷ್ಟ್ರೀಯ ವೃತ್ತಿಜೀವನ ನಿವೃತ್ತಿಯ ಅಂಚಿನಲ್ಲಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ.

ಟೀಮ್ ಇಂಡಿಯಾ ಪರ ಅಬ್ಬರಿಸಿದ ಈ ಸ್ಟಾರ್ ಬ್ಯಾಟರ್ ಅನ್ನು ಆಸ್ಟ್ರೇಲಿಯಾದ ದಿಗ್ಗಜ ಡಾನ್ ಬ್ರಾಡ್‌ಮನ್‌ನೊಂದಿಗೆ ಹೋಲಿಸಲಾಗಿತ್ತು. ಆದರೆ ಆಯ್ಕೆಗಾರರು ಈಗ ಈ ಆಟಗಾರನನ್ನು ಭಾರತ ತಂಡದಿಂದ ಕೈಬಿಟ್ಟಿದ್ದಾರೆ. ಈ ಸ್ಟಾರ್ ಬ್ಯಾಟರ್ ಬೇರೆ ಯಾರು ಅಲ್ಲ, ಕನ್ನಡಿಗ ಮಯಾಂಕ್ ಅಗರ್ವಾಲ್. 2022 ರಲ್ಲಿ ಶ್ರೀಲಂಕಾ ವಿರುದ್ಧ ಮಾಯಾಂಕ್ ಅಗರ್ವಾಲ್ ಭಾರತ ಪರ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಇದಾದ ನಂತರ ಅವರಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಕ್ಕಿಲ್ಲ.

Mayank Agarwal has disappeared from Team India

ಮಯಾಂಕ್ ಅಗರ್ವಾಲ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲು ಎಲ್ಲಾ ಆರ್ಹತೆ ಹೊಂದಿದ್ದಾರೆ. ಆದರೆ ಕಳೆದ ಎರಡೂವರೆ ವರ್ಷಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಮಯಾಂಕ್ ಅಗರ್ವಾಲ್ ಅವರು ತಮ್ಮ ಮೊದಲ 12 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ ಭಾರತ ಪರ 2 ದ್ವಿಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಮಯಾಂಕ್ ಅಗರ್ವಾಲ್ ಡಾನ್ ಬ್ರಾಡ್ಮನ್ ಅವರ ದಾಖಲೆಯನ್ನು ಮುರಿದಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಡಾನ್ ಬ್ರಾಡ್ಮನ್ ಮೊದಲ 13 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ 2 ದ್ವಿಶತಕಗಳನ್ನು ಗಳಿಸಿದ್ದರು.

ಕನ್ನಡಿಗನಿಗೆ ಕನ್ನಡಿಗ ಅಡ್ಡಿ?

ಟೀಮ್ ಇಂಡಿಯಾಕ್ಕೆ ಎಂಟ್ರಿ ಕೊಟ್ಟ ಕೆಎಲ್ ರಾಹುಲ್ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳಲಿಲ್ಲ. ಹೀಗಾಗಿ ರಾಹುಲ್ ಆಗಮನದಿಂದ ಮಯಾಂಕ್ ಅಗರ್ವಾಲ್ ಅವರನ್ನು ಭಾರತ ಟೆಸ್ಟ್ ತಂಡದಿಂದ ಕೈಬಿಡಲಾಯಿತು. ಒಂದು ಸಮಯದಲ್ಲಿ ಮಯಾಂಕ್ ಅಗರ್ವಾಲ್ ಟೆಸ್ಟ್ ಓಪನರ್ ಆಗಿ ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದರು. ಕಾಲಕ್ರಮೇಣ ಕೆಎಲ್ ರಾಹುಲ್ ಆರಂಭಿಕ ಸ್ಥಾನವನ್ನೂ ಕಸಿದುಕೊಂಡರು. ಇದೀಗ ಯಶಸ್ವಿ ಜೈಸ್ವಾಲ್ ಟೆಸ್ಟ್ ತಂಡದ ಖಾಯಂ ಓಪನರ್ ಆಗಿದ್ದು, ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ರಾಹುಲ್ ಇನ್ನಿಂಗ್ಸ್ ತೆರೆದಿದ್ದರು. ಆದರೆ ಯಶಸ್ವಿ ಜೈಸ್ವಾಲ್ ಮತ್ತು ರೋಹಿತ್ ಶರ್ಮಾ ಭಾರತದ ಖಾಯಂ ಟೆಸ್ಟ್ ಆರಂಭಿಕರಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಈಗ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಮಯಾಂಕ್ ಅಗರ್ವಾಲ್ ಅವರಿಗೆ ಮಣೆ ಹಾಕುವುದನ್ನು ನಿಲ್ಲಿಸಿದೆ. ಬಿಸಿಸಿಐ ಆಯ್ಕೆ ಸಮಿತಿ ಇನ್ನು ಮುಂದೆ ಮಯಾಂಕ್ ಅಗರ್ವಾಲ್ ಅವರನ್ನು ಭಾರತ ಟೆಸ್ಟ್ ತಂಡದ ಮಧ್ಯಮ ಕ್ರಮಾಂಕದಲ್ಲಿಯೂ ಅವಕಾಶ ನೀಡುವುದು ಅನುಮಾನವಾಗಿದೆ.

ಟೆಸ್ಟ್ ವೃತ್ತಿಜೀವನ

ಮಯಾಂಕ್ ಅಗರ್ವಾಲ್ ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ. ಮಯಾಂಕ್ ಅಗರ್ವಾಲ್ ಟೀಮ್ ಇಂಡಿಯಾ ಪರ 21 ಟೆಸ್ಟ್ ಪಂದ್ಯಗಳಲ್ಲಿ 1488 ರನ್ ಗಳಿಸಿದ್ದಾರೆ. ಇದರಲ್ಲಿ 2 ದ್ವಿಶತಕ, 4 ಶತಕ ಮತ್ತು 6 ಅರ್ಧ ಶತಕಗಳಿವೆ. ಟೆಸ್ಟ್ ಪಂದ್ಯಗಳಲ್ಲಿ ಮಯಾಂಕ್ ಅಗರ್ವಾಲ್ ಅವರ ಅತ್ಯುತ್ತಮ ಸ್ಕೋರ್ 243 ರನ್.

Story first published: Tuesday, December 3, 2024, 8:01 [IST]
Other articles published on Dec 3, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+