For Quick Alerts
ALLOW NOTIFICATIONS  
For Daily Alerts
 

ಭಾರತ vs ಕೀವಿಸ್ ಏಕದಿನ: ರೋಹಿತ್ ಶರ್ಮಾ ಸ್ಥಾನಕ್ಕೆ ಕನ್ನಡಿಗ ಮಯಾಂಕ್‌ಗೆ ಅವಕಾಶ

Prithvi Shaw returns to Test squad; Mayank Agarwal replaces Rohit Sharma in ODIs
Mayank Agarwal replaces Rohit Sharma in ODIs

ಟೀಮ್ ಇಂಡಿಯಾದ ಉಪ ನಾಯಕ ಸ್ಪೋಟಕ ಆಟಗಾರ ರೋಹಿತ್ ಶರ್ಮಾ ನ್ಯೂಜಿಲ್ಯಾಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಗಾಯಗೊಂಡಿದ್ದಾರೆ. ಹೀಗಾಗಿ ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿ ಮತ್ತು ಟೆಸ್ಟ್‌ ಸರಣಿಯಿಂದ ಶರ್ಮಾ ಹೊರಗುಳಿಯಲಿದ್ದಾರೆ. ಹೀಗಾಗಿ ಏಕದಿನ ತಂಡದಲ್ಲಿ ರೋಹಿತ್ ಸ್ಥಾನಕ್ಕೆ ಕನ್ನಡಿಗನಿಗೆ ಲಕ್‌ ಲಭಿಸಿದೆ.

ಟೆಸ್ಟ್ ತಂಡದಲ್ಲಿ ಅವಕಾಶವನ್ನು ಪಡೆದು ಅದ್ಭುತ ಆಟವನ್ನು ಪ್ರದರ್ಶಿಸಿರುವ ಮಯಾಂಕ್ ಅಗರ್ವಾಲ್ ಈಗ ಏಕದಿನ ತಂಡದಲ್ಲೂ ಅವಕಾಶವನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ಈ ಅವಕಾಶವನ್ನು ಯುವ ಆಟಗಾರ ಯಾವ ರೀತಿ ಬಳಸಿಕೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಮಯಾಂಕ್ ಅಗರ್ವಾಲ್ ಈಗಾಗಲೇ ನ್ಯೂಜಿಲ್ಯಾಂಡ್ ಎ ತಂಡದ ವಿರುದ್ಧ ಆಡುತ್ತಿರುವ ಭಾರತ ಎ ತಂಡದ ಪರವಾಗಿ ಅನಧೀಕೃತ ಸರಣಿಯಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಏಕದಿನ ಸರಣಿಯಲ್ಲಿ ಮಿಂಚಲು ಸಿದ್ಧರಾಗಿದ್ದಾರೆ.

ಟೆಸ್ಟ್‌ ನಿಂದಲೂ ರೋಹಿತ್ ಶರ್ಮಾ ಹೊರಗುಳಿಯಲಿದ್ದು ಅದಕ್ಕೂ ಬದಲಿ ಆಟಗಾರನನ್ನು ಆಯ್ಕೆ ಮಾಡಲಾಗಿದೆ. ಟೆಸ್ಟ್‌ ತಂಡದಲ್ಲಿ ಯುವ ಆಟಗಾರ ಪೃಥ್ವಿ ಶಾಗೆ ಅವಕಾಶ ದೊರೆತಿದೆ. ಪೃಥ್ವಿ ಶಾ ಕೂಡ ನ್ಯೂಜಿಲ್ಯಾಂಡ್ ಎ ತಂಡದ ವಿರುದ್ಧದ ಅನಧೀಕೃತ ಸರಣಿಯಲ್ಲಿ ಪಾಲ್ಗೊಂಡಿದ್ದಾರೆ.

ನ್ಯೂಜಿಲ್ಯಾಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಬುಧವಾರದಂದು ಏಕದಿನ ಸರಣಿಗೆ ಚಾಲನೆ ದೊರೆಯಲಿದ್ದು ಸರಣಿಯ ಮೊದಲ ಪಂದ್ಯ ನಡೆಯಲಿದೆ. ಈಗಾಗಲೇ ಟಿ20 ಸರಣಿಯ 5 ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಏಕದಿನ ಸರಣಿಯ ಮೇಲೆ ಕಣ್ಣಿಟ್ಟಿದೆ.

Story first published: Tuesday, February 4, 2020, 10:51 [IST]
Other articles published on Feb 4, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+