IND vs BAN: ಟೀಮ್ ಇಂಡಿಯಾದ ಯುವ ವೇಗಿ ಮೊದಲ ಟಿ20 ಆಡುವ ಸಾಧ್ಯತೆ
ಭಾರತ ಟಿ20 ತಂಡದ ಕಮಾಂಡ್ ಸೂರ್ಯಕುಮಾರ್ ಯಾದವ್ ಅವರ ಕೈಯಲ್ಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಬಾಂಗ್ಲಾದೇಶವನ್ನು 3-0 ಅಂತರದಿಂದ ಸೋಲಿಸುವ ನಿರೀಕ್ಷೆಯಲ್ಲಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ಸರಣಿಯ ಮೊದಲ ಪಂದ್ಯವು ಭಾನುವಾರ, ಅಕ್ಟೋಬರ್ 6 ರಂದು ಗ್ವಾಲಿಯರ್‌ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಂಜೆ 7:00 ಗಂಟೆಗೆ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ ಹನ್ನೊಂದರಲ್ಲಿ ಯುವ ವೇಗದ ಬೌಲರ್‌ನ ಪ್ರವೇಶ ಬಹುತೇಕ ಖಚಿತವಾಗಿದೆ.

ಭಾರತದ ಈ ವೇಗದ ಬೌಲರ್ ಮಾತ್ರ ತಂಡದ ಅರ್ಧದಷ್ಟು ಸಮಾನ. ಈ ಬೌಲರ್ ಬೌಲಂಗ್ ಮಾಡುವಾಗ ಬೆಂಕಿಯ ಚೆಂಡನ್ನು ಎಸೆಯುತ್ತಾರೆ. ದೆಹಲಿಯಲ್ಲಿ ಜನಿಸಿದ ಬಿಹಾರ ಮೂಲದ ವೇಗದ ಬೌಲರ್ ಮಯಾಂಕ್ ಯಾದವ್ ಮೊದಲ ಬಾರಿಗೆ ಟೀಮ್ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ. ಗ್ವಾಲಿಯರ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದ ವೇಳೆ ಮಯಾಂಕ್ ಯಾದವ್‌ಗೆ ಟೀಮ್ ಇಂಡಿಯಾದ ಪ್ಲೇಯಿಂಗ್ ಹನ್ನೊಂದರಲ್ಲಿ ಅವಕಾಶ ನೀಡುವ ಸಾಧ್ಯತೆಯಿದೆ.
ತಂಡಕ್ಕೆ ಆಸರೆ
ಗ್ವಾಲಿಯರ್‌ನಲ್ಲಿ ನಡೆಯಲಿರುವ ಬಾಂಗ್ಲಾದೇಶ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ವೇಗದ ಬೌಲರ್ ಮಯಾಂಕ್ ಯಾದವ್ ಭಾರತಕ್ಕೆ ಗೆಲುವು ತಂದು ಕೊಡಬಹುದು. ತವರಿನಲ್ಲಿ ಟಿ20 ಸರಣಿ ನಡೆಯುತ್ತಿರುವುದರಿಂದ ಅವರು ಇಲ್ಲಿನ ಪಿಚ್‌ಗಳನ್ನು ಆಡಿದ ಅನುಭವ ಹೊಂದಿದ್ದಾರೆ. ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಆಡುತ್ತಿರುವಾಗ ಮಯಾಂಕ್ ಅತ್ಯಂತ ವೇಗದ ಬೌಲಿಂಗ್ ಮಾಡುವ ಮೂಲಕ ಸಂಚಲನ ಮೂಡಿಸಿದ್ದರು. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 156.7 kmph ವೇಗದಲ್ಲಿ ಚೆಂಡೆಸೆದಿದ್ದರು. ಬಾಂಗ್ಲಾದೇಶ ಬ್ಯಾಟರ್‌ಗಳು ಮಾಯಾಂಕ್ ಬೌಲಿಂಗ್ ದಾಳಿಗೆ ತತ್ತರಿಸಬಹುದು.
ವೇಗಕ್ಕೆ ಸಿಕ್ಕ ಅವಕಾಶ
ಮಯಾಂಕ್ ಯಾದವ್ ಸತತವಾಗಿ 150 ಕಿಮೀ ವೇಗದಲ್ಲಿ ಬೌಲಿಂಗ್ ಮಾಡಬಲ್ಲರು. 150 ಕಿಮೀ ವೇಗದಲ್ಲಿ ಸ್ಥಿರವಾಗಿ ಬೌಲಿಂಗ್ ಮಾಡುವ ಸಾಮರ್ಥ್ಯ ಅವರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗುವಂತೆ ಮಾಡಿದೆ.
ಐಪಿಎಲ್ 2024ರಲ್ಲಿ 156.7 ಕಿಮೀ ವೇಗದಲ್ಲಿ ಚೆಂಡನ್ನು ಎಸೆಯುವ ಮೂಲಕ ರಾತ್ರೋರಾತ್ರಿ ತಾರೆಯಾದರು. ಮಯಾಂಕ್ ಯಾದವ್ ಅವರಂತಹ ಅಪಾಯಕಾರಿ ವೇಗದ ಬೌಲರ್ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆದಿರುವ ಉತ್ತಮ ಬೆಳವಣಿಯಾಗಿದೆ.
ಮಯಾಂಕ್ ಯಾದವ್ ಅವರನ್ನು ಟೀಮ್ ಇಂಡಿಯಾದ ಭವಿಷ್ಯದ ಸೂಪರ್ ಸ್ಟಾರ್ ಎಂದು ಕರೆದರೂ ತಪ್ಪಾಗಲಾರದು . ಮಯಾಂಕ್ ಯಾದವ್ ಅವರಿಗೆ ಈ 22 ವರ್ಷ ವಯಸ್ಸಾಗಿದ್ದು, ಹೀಗೆ ಟೀಮ್ ಇಂಡಿಯಾ ಪರ ಅವರು ಅದ್ಭುತ ಪ್ರದರ್ಶನ ನೀಡಿ ತಮ್ಮ ಸ್ಥಾನವನ್ನ ಭದ್ರಪಡಿಸಿಕೊಳ್ಳುವ ಅವಕಾಶವನ್ನು ಹೊಂದಿದ್ದಾರೆ.
ಭಾರತ ಸಂಭಾವ್ಯ ಪ್ಲೇಯಿಂಗ್-11
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ರಿಯಾನ್ ಪರಾಗ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಮಯಾಂಕ್ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications