ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ಬೃಹತ್ ಕಲೆ ಹಾಕಿದೆ. ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 474 ರನ್‌ಗಳನ್ನು ಪೇರಿಸಿದೆ. ಭಾರತ ತಂಡದ ಬೌಲರ್‌ಗಳು ಕಡಿಮೆ ಮೊತ್ತಕ್ಕೆ ಆಸ್ಟ್ರೇಲಿಯಾವನ್ನು ಕಟ್ಟಿ ಹಾಕುವಲ್ಲಿ ವಿಫಲವಾಗಿದ್ದಾರೆ. ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ಪರ ಗರಿಷ್ಠ 140 ರನ್ ಗಳಿಸಿದರು. ಹೀಗಾಗಿ ಆಸೀಸ್ ಪಡೆ ಬೃಹತ್ ಮೊತ್ತ ಗಳಿಸುವುದಕ್ಕೆ ಸಾಧ್ಯವಾಯಿತು.
ಆಸ್ಟ್ರೇಲಿಯಾ ಪರ ಸ್ಟೀವ್ ಸ್ಮಿತ್ ಹೊರೆತುಪಡೆಸಿ ಮಾರ್ನಸ್ ಲ್ಯಾಬುಸ್ಚಾಗ್ನೆ 72 ರನ್‌ಗಳ ಅದ್ಭುತ ಇನಿಂಗ್ಸ್ ಆಡಿದರು. ಭಾರತದ ಪರ ಮೊದಲ ಇನಿಂಗ್ಸ್‌ನಲ್ಲಿ ಜಸ್ಪ್ರೀತ್ ಬುಮ್ರಾ ಗರಿಷ್ಠ 4 ವಿಕೆಟ್ ಪಡೆದು ಮಿಂಚಿದರು. ರವೀಂದ್ರ ಜಡೇಜಾ 3, ಆಕಾಶದೀಪ್ 2 ಮತ್ತು ವಾಷಿಂಗ್ಟನ್ ಸುಂದರ್ 1 ವಿಕೆಟ್ ಕಬಳಿಸಿದರು.

ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್‌ಗಳಿಗೆ ಸ್ಟೀವ್ ಸ್ಮಿತ್ ಬೆವರಿಳಿಸಿದರು. ಎರಡನೇ ದಿನದಂದು ಸ್ಟೀವ್ ಸ್ಮಿತ್ ತಮ್ಮ ಟೆಸ್ಟ್ ವೃತ್ತಿಜೀವನದ 34 ನೇ ಶತಕ ಸಿಡಿಸಿ ಸಂಭ್ರಮಿಸಿದರು. ಅವರು 197 ಎಸೆತಗಳಲ್ಲಿ 13 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ 140 ರನ್‌ಗಳನ್ನು ಬಾರಿಸಿದರು. ಈ ಮೂಲಕ ಸ್ಟೀವ್ ಸ್ಮಿತ್ ಭಾರತ ವಿರುದ್ಧ ತಮ್ಮ 11ನೇ ಶತಕವನ್ನು ಸಿಡಿಸುವಲ್ಲಿ ಯಶಸ್ವಿಯಾದರು. ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ ಇದುವರೆಗೆ 34 ಶತಕ ಮತ್ತು 41 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ 4 ಬಾರಿ ದ್ವಿಶತಕ ಸಿಡಿಸಿದ್ದಾರೆ. ಟೆಸ್ಟೀವ್ ಸ್ಮಿತ್ ಅವರ ಅತ್ಯುತ್ತಮ ಸ್ಕೋರ್ 239 ರನ್.
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಅವರಿಗೆ ಭಾರತ ತಂಡದ ಉಳಿದ ಬೌಲರ್‌ಗಳಿಂದ ಸಾಥ್ ಸಿಗುತ್ತಿಲ್ಲ. ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿಯೂ ಬುಮ್ರಾ ಅವರಿಗೆ ಸಾಥ್ ಸಿಗಲಿಲ್ಲ. ಮೊದಲ ದಿನದಾಟದಲ್ಲಿ ಮೂರು ವಿಕೆಟ್ ಪಡೆದಿದ ಬುಮ್ರಾ ಆಸ್ಟ್ರೇಲಿಯಾ ರನ್ ವೇಗಕ್ಕೆ ಕಡಿವಾಟ ಹಾಕಿದ್ದರು. ಆದರೆ ಉಳಿದ ಬೌಲರ್‌ಗಳಿಂದ ನಿರೀಕ್ಷಿತ ಪ್ರದರ್ಶನ ಬರಲಿಲ್ಲ. ಹೀಗಾಗಿ ಆಸ್ಟ್ರೇಲಿಯಾ ಬೃಹತ್ ರನ್ ಕಲೆ ಹಾಕಲು ಸಾಧ್ಯವಾಯಿತು.