Mohammed Azharuddin: "ಬ್ಯಾಟರ್‌ಗಳು ಮಾಡಿದ ತಪ್ಪುಗಳನ್ನೇ ಪದೇ ಪದೇ ಮಾಡುತ್ತಿದ್ದಾರೆ"
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್ ಗವಾಸ್ಕರ್ ಸರಣಿ ನಡೆಯುತ್ತಿದೆ. ಇತ್ತೀಚಿಗೆ ನಡೆದ ಮೆಲ್ಬೋರ್ನ್ ಟೆಸ್ಟ್‌ನಲ್ಲಿ ಭಾರತ 184 ರನ್‌ಗಳ ಸೋಲು ಕಂಡಿದೆ. ಈ ವೇಳೆ ಟೀಮ್ ಇಂಡಿಯಾ ಸರಣಿಯಲ್ಲಿ 2-1ರಿಂದ ಹಿನ್ನಡೆ ಅನುಭವಿಸುತ್ತಿದೆ. ಈ ಮೂಲಕ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪುವ ಕನಸು ದೂರ ಸರಿದಂತೆ ಆಗುತ್ತಿದೆ. ಈ ಸರಣಿಯಲ್ಲಿ ಇನ್ನೊಂದು ಸೋಲು ಭಾರತ ತಂಡದ ಫೈನಲ್ ಪ್ರವೇಶಿಸುವ ಆಸೆಗೆ ಪೆಟ್ಟು ನೀಡುತ್ತದೆ.
ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಈ ಪ್ರದರ್ಶನದಲ್ಲಿ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದಾರೆ. ಸರಣಿಯಲ್ಲಿ ಭಾರತ ಹಿನ್ನಡೆ ಅನುಭವಿಸಿದ್ದರಿಂದ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಪ್ರಶ್ನೆಗಳು ಏಳುವಂತೆ ಮಾಡಿದೆ. ಈ ಬಗ್ಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಅಜರುದ್ಧಿನ್ ಸಹ ಪ್ರಶ್ನೆಗಳನ್ನು ಎತ್ತಿದ್ದಾರೆ. ಮೈಖೇಲ್ ಜೊತೆ ಮಾತನಾಡಿದ ಅವರು ಟೀಮ್ ಇಂಡಿಯಾದ ಬ್ಯಾಟಿಂಗ್ ಬಗ್ಗೆ ಮನ ಬಿಚ್ಚಿ ಮಾತನಾಡಿದ್ದಾರೆ.

ಬ್ಯಾಟರ್‌ಗಳ ಮೇಲೆ ಪ್ರಶ್ನೆ
ಭಾರತ ತಂಡದ ಬ್ಯಾಟಿಂಗ್ ವಿಭಾಗದ ಬಗ್ಗೆ ಮೊಹಮ್ಮದ್ ಅಜುರುದ್ಧಿನ್ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಪದೆ ಪದೇ ಮಾಡಿದ ತಪ್ಪುಗಳನ್ನೇ ಮಾಡಿ ಔಟ್ ಆಗುತ್ತಿದ್ದಾರೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ. ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು ಮಾಡಿದ ತಪ್ಪುಗಳನ್ನೆ ಮಾಡುತ್ತಾ ಸಾಗಿದ್ದು ಬೇಸರ ಸಂಗತಿ ಎಂದು ತಿಳಿಸಿದ್ದಾರೆ.
ಟೀಮ್ ಇಂಡಿಯಾ ಅಲ್ಲಿನ ಪಿಚ್ ಹಾಗೂ ವಾತಾವರಣವನ್ನು ಪರಿಶೀಲಿಸಿ ಬ್ಯಾಟ್ ಮಾಡುವಲ್ಲಿ ವಿಫಲವಾಗಿದೆ. ಅಲ್ಲದೆ ಜೊತೆಯಾಟಗಳ ಕಾಣಿಕೆ ನೀಡುವಲ್ಲಿ ಹಿಂದೆ ಬಿದ್ದಿದೆ. ಇದರಿಂದ ಭಾರತ ತಂಡಕ್ಕೆ ಹಿನ್ನಡೆ ಆಗಿದೆ. ಟೀಮ್ ಇಂಡಿಯಾ ಮುಂದಿನ ಪಂದ್ಯದಲ್ಲಿ ತಾನು ಮಾಡಿದ ತಪ್ಪುಗಳಿಂದ ಪಾಠ ಕಲಿಯದೇ ಇದ್ದರೆ, ಸರಣಿಯನ್ನು ಕೈ ಚೆಲ್ಲಬೇಕಾಗುತ್ತದೆ. ಈಗಾಗಲೇ ಟೀಮ್ ಇಂಡಿಯಾ ಸರಣಿಯಲ್ಲಿ ಹಿನ್ನಡೆ ಅನುಭವಿಸುತ್ತಿದೆ. ಸಿಡ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ. ನನಗೆ ಅನಿಸಿದ ಮಟ್ಟಿಗೆ ಟೀಮ್ ಇಂಡಿಯಾ ತನ್ನ ತಪ್ಪುಗಳನ್ನು ತಿದ್ದಿ ಕೊಳ್ಳುತ್ತದೆ ಎಂಬ ನಂಬಿಕೆ ನನಗಿದೆ ಎಂದು ತಿಳಿಸಿದ್ದಾರೆ.
ಪುಟಿದೇಳುವ ವಿಶ್ವಾಸ
ಸಿಡ್ನಿಯಲ್ಲಿ ನಡೆಯಲಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐದನೇ ಟೆಸ್ಟ್ ಪಂದ್ಯ ರೋಹಿತ್ ಶರ್ಮಾ ಅವರ ಪಾಲಿಗೆ ಮಹತ್ವದಾಗಿದೆ. ಈ ಟೆಸ್ಟ್ ಪಂದ್ಯದಲ್ಲಿ ನಾಯಕ ತಂಡವನ್ನು ಮುಂದೆ ನಿಂತು ಗೆಲ್ಲಿಸಬೇಕು. ಇನ್ನು ವಿರಾಟ್ ಕೊಹ್ಲಿ ಸಹ ಸರಣಿಯಲ್ಲಿ ಒಂದೇ ತರನಾಗಿ ಔಟ್ ಆಗುತ್ತಿದ್ದಾರೆ. ವಿರಾಟ್ ಕೊಹ್ಲಿ ಸ್ವಿಂಗ್ ಬೌಲಿಂಗ್ ಎದುರಿಸಲು ಕ್ರೀಸ್‌ನಲ್ಲಿ ನಿಂತು ಆಡುವುದು ಅವಶ್ಯಕ ಎಂದಿದ್ದಾರೆ.
ನಾಲ್ಕನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಪರ ನಿತೀಶ್ ಕುಮಾರ್ ರೆಡ್ಡಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಟೀಮ್ ಇಂಡಿಯಾ ಮುಂದಿನ ಟೆಸ್ಟ್ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡುವ ವಿಶ್ವಾಸವನ್ನು ಮೊಹಮ್ಮದ್ ಅಜರುದ್ಧಿನ್ ವ್ಯಕ್ತ ಪಡಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications