For Quick Alerts
ALLOW NOTIFICATIONS  
For Daily Alerts
 

Melbourne Test: ಟೀಮ್ ಇಂಡಿಯಾ ಸೋಲಿಗೆ ಮೂವರು ಕಾರಣಕರ್ತರು

ಮೆಲ್ಬೋರ್ನ್‌ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 184 ರನ್‌ಗಳಿಂದ ಸೋಲು ಕಂಡಿದೆ. ಇದಾದ ನಂತರ ಈ ಸೋಲಿಗೆ ಯಾರು ಹೊಣೆ ಎಂಬ ಚರ್ಚೆ ಶುರುವಾಗಿದೆ. ಭಾರತದ ಸೋಲಿಗೆ ಒಬ್ಬ ಆಟಗಾರನಷ್ಟೇ ಅಲ್ಲ ಹಲವು ಆಟಗಾರರು ಹೊಣೆಯಾಗುತ್ತಿದ್ದಾರೆ. ಮೆಲ್ಬೋರ್ನ್ ಟೆಸ್ಟ್ ಪಂದ್ಯವನ್ನು ಭಾರತ ಗೆಲ್ಲಲೇಬೇಕಾದ ಒತ್ತಡದಲ್ಲಿತ್ತು. ಆದರೆ, ಭಾರತದ ಪರ ಕೆಲುವು ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಕಂಡು ಬರಲಿಲ್ಲ.

ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯ ಸೋಲುವ ಮೂಲಕ ಭಾರತ ಸುಲಭವಾಗಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ (ಡಬ್ಲ್ಯೂಟಿಸಿ) ಫೈನಲ್‌ಗೆ ತಲುಪುವ ಅವಕಾಶವನ್ನು ಕಳೆದುಕೊಂಡಿತ್ತು. ಹಾಗಾಗಿ ಮೆಲ್ಬೋರ್ನ್‌ನಲ್ಲಿ ಟೀಮ್ ಇಂಡಿಯಾ ಸೋಲಿಗೆ ಕಾರಣರಾದಂತಹ ಮೂವರು ಆಟಗಾರರ ಬಗ್ಗೆ ಇಲ್ಲಿದೆ ಮಾಹಿತಿ.

Melbourne Test Three players responsible for Team India s defeat

ರೋಹಿತ್ ಶರ್ಮಾ

ಟೀಮ್ ಇಂಡಿಯಾ ಸೋಲಿಗೆ ಮೊದಲ ಪ್ರಮುಖ ಕಾರಣ ನಾಯಕ ರೋಹಿತ್ ಶರ್ಮಾ. ಪ್ರಸ್ತುತ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲ ರೋಹಿತ್ ಶರ್ಮಾ ಫಾರ್ಮ್‌ನಲ್ಲಿ ಕಾಣಿಸಿಕೊಂಡಿರಲಿಲ್ಲ. ಮೆಲ್ಬೋರ್ನ್‌ ಟೆಸ್ಟ್ ಪಂದ್ಯದಲ್ಲಿ ಅವರು ಎರಡೂ ಇನಿಂಗ್ಸ್‌ಗಳಲ್ಲಿ ಕ್ರಮವಾಗಿ 3 ಮತ್ತು 9 ರನ್ ಗಳಿಸಿದರು. ಹೀಗಾಗಿ ಭಾರತ ಉತ್ತಮ ಆರಂಭ ಪಡೆಯುವಲ್ಲಿ ಹಿಂದೆ ಉಳಿಯತು. ಇದು ಮೆಲ್ಬೋರ್ನ್‌ನಲ್ಲಿ ಟೀಮ್ ಇಂಡಿಯಾ ಸೋಲಿಗೆ ಕಾರಣವಾಯಿತು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರು ಆಡಿರುವ 3 ಪಂದ್ಯಗಳಲ್ಲಿ ಕೇವಲ 31 ರನ್ ಗಳಿಸಿದ್ದಾರೆ.

ವಿರಾಟ್ ಕೊಹ್ಲಿ

ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಪರ್ತ್‌ನಲ್ಲಿ ಆಡಿದ ಶತಕದ ಇನ್ನಿಂಗ್ಸ್ ಹೊರತುಪಡಿಸಿ, ಈ ಸರಣಿಯಲ್ಲಿ ಮತ್ತೆ ಅಬ್ಬರಿಸಿಲ್ಲ. ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ವಿರಾಟ್ ಎರಡೂ ಇನಿಂಗ್ಸ್‌ಗಳಲ್ಲಿ ಕ್ರಮವಾಗಿ 36 ಮತ್ತು 5 ರನ್ ಗಳಿಸಿದರು. ಇಂತಹ ಪರಿಸ್ಥಿತಿಯಲ್ಲಿ ತಂಡಕ್ಕೆ ಟಾಪ್ ಆರ್ಡರ್‌ನಲ್ಲಿ ಉತ್ತಮ ರನ್ ಕಲೆ ಹಾಕಲು ವಿಫಲವಾದ ಅವರನ್ನು ಭಾರತದ ಸೋಲಿಗೆ ಪ್ರಮುಖ ಕಾರಣವಾಗಿದ್ದಾರೆ. ಈ ಸಂಪೂರ್ಣ ಸರಣಿಯಲ್ಲಿ ಅವರು ನಿರಂತರವಾಗಿ ಆಫ್ ಸ್ಟಂಪ್‌ನ ಹೊರಗಿನ ಚೆಂಡನ್ನು ಎದುರಿಸಲು ಹೋಗಿ ತಮ್ಮ ವಿಕೆಟ್‌ಗಳನ್ನು ಕಳೆದುಕೊಂಡಿದ್ದಾರೆ.

ಕೆಎಲ್ ರಾಹುಲ್

ಮೆಲ್ಬೋರ್ನ್‌ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಮತ್ತೊಬ್ಬ ಸ್ಟಾರ್ ಕೆಎಲ್ ರಾಹುಲ್ ಆರಂಭಿಕ ಸ್ಥಾನವನ್ನು ತೊರೆದು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರು. ಆಸ್ಟ್ರೇಲಿಯಾ ವಿರುದ್ಧ ರಾಹುಲ್ ಆರಂಭಿಕರಾಗಿ ಉತ್ತಮ ಪ್ರದರ್ಶನ ನೀಡಿದ್ದರು. ಆದರೆ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಸೋಲಿಗೆ ಕಾರಣಕರ್ತರ ಪಟ್ಟಿಗೆ ಅವರು ಕೂಡ ಸೇರಿದ್ದಾರೆ. ಮೆಲ್ಬೋರ್ನ್ ಟೆಸ್ಟ್‌ ಪಂದ್ಯದಲ್ಲಿ ರಾಹುಲ್ ಎರಡೂ ಇನಿಂಗ್ಸ್‌ಗಳಲ್ಲಿ ಕ್ರಮವಾಗಿ 24 ಮತ್ತು 0 ರನ್ ಗಳಿಸಿದ್ದು ಸೋಲಿಗೆ ಪ್ರಮುಖ ಕಾರಣವಾಯಿತು.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 474 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ ಮೊದಲ ಇನಿಂಗ್ಸ್‌ನಲ್ಲಿ 369 ರನ್‌ಗಳಿಗೆ ಆಲೌಟ್ ಆಯಿತು. ಇದಾದ ಬಳಿಕ ಆಸ್ಟ್ರೇಲಿಯಾ 105 ರನ್‌ಗಳ ಮುನ್ನಡೆ ಸಾಧಿಸಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 234 ರನ್ ಗಳಿಸಿ ಭಾರತಕ್ಕೆ 340 ರನ್‌ಗಳ ಗೆಲುವಿನ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 155 ರನ್‌ಗಳಿಗೆ ಕುಸಿದು 184 ರನ್‌ಗಳಿಂದ ಸೋಲನುಭವಿಸಿತು.

Story first published: Monday, December 30, 2024, 14:12 [IST]
Other articles published on Dec 30, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+