WPL 2026: ಹರ್ಮನ್ ಪ್ರೀತ್ ಕೌರ್ ಬ್ಯಾಟಿಂಗ್ ಸೊಬಗು: ಮುಂಬೈಗೆ 50 ರನ್ ಜಯ
ನವಿ ಮುಂಬೈ: ನಾಯಕಿ ಹರ್ಮನ್ ಪ್ರೀತ್ ಕೌರ್ ಹಾಗೂ ನ್ಯಾಟ್ ಸಿವರ್-ಬ್ರಂಟ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ಮುಂಬೈ ಇಂಡಿಯನ್ಸ್ ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಮೊದಲ ಗೆಲುವಿನ ನಗೆ ಬೀರಿದೆ. ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಮುಂಬೈ 50 ರನ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಅಬ್ಬರಿಸಿತು.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ಆಟಗಾರ್ತಿ ಅಮೆಲಿಯಾ ಕೆರ್ ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಎರಡನೇ ವಿಕೆಟ್‌ಗೆ ಜಿ ಕಮಲಿನಿ ಹಾಗೂ ನ್ಯಾಟ್ ಸಿವರ್-ಬ್ರಂಟ್ ತಂಡಕ್ಕೆ ಆಧಾರವಾದರು. ಈ ಜೋಡಿ 2ನೇ ವಿಕೆಟ್‌ಗೆ 33 ಎಸೆತಗಳಲ್ಲಿ 49 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಈ ವೇಳೆ ಕಮಿಲಿನಿ 3 ಬೌಂಡರಿ ನೆರವಿನಿಂದ 16 ರನ್ ಬಾರಿಸಿ ಔಟ್ ಆದರು.

ಮೂರನೇ ವಿಕೆಟ್‌ಗೆ ಅನುಭವಿ ಆಟಗಾರರಾದ ನ್ಯಾಟ್ ಸಿವರ್-ಬ್ರಂಟ್ ಹಾಗೂ ಹರ್ಮನ್ ಪ್ರಿತ್ ಕೌರ್ ತಂಡಕ್ಕೆ ಆಧಾರವಾದರು. ಈ ಜೋಡಿ ತಮ್ಮ ಅನುಭವದ ಲಾಭ ಪಡೆದು ಇನಿಂಗ್ಸ್ ಕಟ್ಟಿದರು. ಈ ಜೋಡಿ ಮುಂಬೈ ಇಂಡಿಯನ್ಸ್ ಸವಾಲಿನ ಮೊತ್ತ ಕಲೆ ಹಾಕುವಲ್ಲಿ ಸಫಲರಾದರು. ಈ ಜೋಡಿ 47 ಎಸೆತಗಳಲ್ಲಿ 66 ರನ್ ಜೊತೆಯಾಟದ ಕಾಣಿಕೆ ನೀಡಿತು. ನ್ಯಾಟ್ ಸಿವರ್-ಬ್ರಂಟ್ 46 ಎಸೆತಗಳಲ್ಲಿ 13 ಬೌಂಡರಿ ಸಹಾಯದಿಂದ 70 ರನ್ ಬಾರಿಸಿ ಔಟ್ ಆದರು.
ಹರ್ಮನ್ ಪ್ರೀತ್ ಜವಾಬ್ದಾರಿಯುತ ಆಟ
ನಾಯಕಿ ಹರ್ಮನ್ ಪ್ರೀತ್ ಕೌರ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಇವರು ತಮ್ಮ ನೈಜ ಆಟ ಆಡಿ ತಂಡದ ಮೊತ್ತ ಹಿಗ್ಗಿಸುವಲ್ಲಿ ಸಫಲರಾದರು. ಹರ್ಮನ್ 42 ಎಸೆತಗಳಲ್ಲಿ 8 ಬೌಂಡರಿ, 3 ಸಿಕ್ಸರ್ ಸಹಾಯದಿಂದ ಅಜೇಯ 74 ರನ್ ಸಿಡಿಸಿದರು. ನಿಕೋಲಾ ಕ್ಯಾರಿ 12 ಎಸೆತಗಳಲ್ಲಿ ಅಜೇಯ 21 ರನ್ ಸಿಡಿಸಿದರು. ಅಂತಿಮವಾಗಿ ಮುಂಬೈ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 195 ರನ್ ಸೇರಿಸಿತು.

ಕಳಪೆ ಆರಂಭ
ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭ ಕಳಪೆಯಾಗಿತ್ತು. ಅನುಭವಿ ಲಿಜೆಲ್ ಲೀ (10), ಶಫಾಲಿ ವರ್ಮಾ (8), ಲಾರಾ ವೋಲ್ವಾರ್ಡ್ (9), ಜೆಮಿಮಾ ರೊಡ್ರಿಗಸ್ (1), ಮರಿಜಾನ್ನೆ ಕಪ್ಪ್ (10), ನಿಕ್ಕಿ ಪ್ರಸಾದ್ (12) ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. 30 ವರ್ಷದ ಚಿನೆಲ್ಲೆ ಹೆನ್ರಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಇವರು 33 ಎಸೆತಗಳಲ್ಲಿ 5 ಬೌಂಡರಿ, 3 ಸಿಕ್ಸರ್ ಸಹಾಯದಿಂದ 56 ರನ್ ಬಾರಿಸಿ ಸೋಲಿನ ಅಂತರವನ್ನು ಕಡಿಮೆ ಮಾಡಿದರು. ಕೆಳ ಕ್ರಮಾಂಕದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ 19 ಓವರ್‌ಗಳಲ್ಲಿ 145 ರನ್ ಸೇರಿಸಿ ಆಲೌಟ್ ಆಯಿತು. ಮುಂಬೈ ಪರ ನಿಕೋಲಾ ಕ್ಯಾರಿ ಹಾಗೂ ಅಮೆಲಿಯಾ ಕೆರ್ ತಲಾ ಮೂರು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications