
ಶುಕ್ರವಾರ, ಫೆಬ್ರವರಿ 17ರಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬಹು ನಿರೀಕ್ಷಿತ ಐಪಿಎಲ್ 2023ರ ಎಲ್ಲಾ 10 ತಂಡಗಳ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಐಪಿಎಲ್ 16ನೇ ಋತುವಿನ ಮೊದಲ ಪಂದ್ಯವು ಮಾರ್ಚ್ 31ರಂದು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.
ಐಪಿಎಲ್ 2023ರ ಐಪಿಎಲ್‌ನಲ್ಲಿ ದೇಶದ 12 ವಿವಿಧ ಮೈದಾನಗಳಲ್ಲಿ ಪಂದ್ಯಗಳು ನಡೆಯಲಿದ್ದು, ಮೇ 28ರಂದು ಫೈನಲ್ ಪಂದ್ಯ ನಡೆಯಲಿದೆ. ಈ ವರ್ಷದ ಲೀಗ್‌ನಲ್ಲಿ ಪ್ರತಿ 10 ತಂಡಗಳು 7 ಪಂದ್ಯಗಳನ್ನು ಎದುರಾಳಿ ನೆಲದಲ್ಲಿ ಮತ್ತು 7 ಪಂದ್ಯಗಳನ್ನು ತವರಿನ ಅಂಗಳದಲ್ಲಿ ಆಡಲಿವೆ.

ಇನ್ನು ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ (ಎಂಐ) ತಂಡ ತನ್ನ ಮೊದಲ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿರುದ್ಧ ಏಪ್ರಿಲ್ 2ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದ್ದು, ಪಂದ್ಯ ಸಂಜೆ ಸಂಜೆ 7.30ಕ್ಕೆ ಆರಂಭವಾಗಲಿದೆ.
ಮುಂಬೈ ಇಂಡಿಯನ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ
1) ಮುಂಬೈ ಇಂಡಿಯನ್ಸ್ vs ಆರ್‌ಸಿಬಿ - ಎಪ್ರಿಲ್ 2, ಬೆಂಗಳೂರು
2) ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ - ಎಪ್ರಿಲ್ 8, ಮುಂಬೈ
3) ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ - ಎಪ್ರಿಲ್ 11, ದೆಹಲಿ
4) ಮುಂಬೈ ಇಂಡಿಯನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ - ಎಪ್ರಿಲ್ 16, ಮುಂಬೈ
5) ಮುಂಬೈ ಇಂಡಿಯನ್ಸ್ vs ಸನ್‌ರೈಸರ್ಸ್ ಹೈದರಾಬಾದ್ - ಎಪ್ರಿಲ್ 18, ಹೈದರಾಬಾದ್
6) ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್ - ಎಪ್ರಿಲ್ 22, ಮುಂಬೈ
7) ಮುಂಬೈ ಇಂಡಿಯನ್ಸ್ vs ಗುಜರಾತ್ ಟೈಟನ್ಸ್- ಎಪ್ರಿಲ್ 25, ಅಹಮದಾಬಾದ್
8) ಮುಂಬೈ ಇಂಡಿಯನ್ಸ್ vs ರಾಜಸ್ಥಾನ ರಾಯಲ್ಸ್ - ಎಪ್ರಿಲ್ 30, ಮುಂಬೈ
9) ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್ - ಮೇ 3, ಮೊಹಾಲಿ
10) ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ - ಮೇ 6, ಚೆನ್ನೈ
11) ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು - ಮೇ 9, ಮುಂಬೈ
12) ಮುಂಬೈ ಇಂಡಿಯನ್ಸ್ vs ಗುಜರಾತ್ ಟೈಟನ್ಸ್ - ಮೇ 12, ಮುಂಬೈ
13) ಮುಂಬೈ ಇಂಡಿಯನ್ಸ್ vs ಲಕ್ನೋ ಸೂಪರ್ ಜೈಂಟ್ಸ್- ಮೇ 16, ಲಕ್ನೋ
14) ಮುಂಬೈ ಇಂಡಿಯನ್ಸ್ vs ಸನ್‌ರೈಸರ್ಸ್ ಹೈದರಾಬಾದ್ - ಮೇ 21, ಮುಂಬೈ