Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Mumbai Indians: ಮುಂಬೈ ತಂಡ ಸೇರಿದ ಯುವ ಆಲ್‌ರೌಂಡರ್‌

ಇನ್ನೇನು ಕೆಲವೇ ದಿನಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭವಾಗುತ್ತದೆ. ಈ ಲೀಗ್‌ನಲ್ಲಿ ಭಾಗವಹಿಸುವ 10 ತಂಡಗಳು ತಮ್ಮ ತಮ್ಮ ತಯಾರಿ ಆರಂಭಿಸಿವೆ. ಎಲ್ಲ ತಂಡಗಳು ಚಾಂಪಿಯನ್ ಪಟ್ಟದ ಮೇಲೆ ಕಣ್ಣು ನೆಟ್ಟಿವೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಸಹ ಚಾಂಪಿಯನ್ ಪಟ್ಟದ ಮೇಲೆ ಚಿತ್ತ ನೆಟ್ಟಿದೆ. ಹಲವು ತಂಡಗಳಿಗೆ ಗಾಯದ ಸಮಸ್ಯೆ ಬಹುವಾಗಿ ಕಾಡುತ್ತಿದೆ. ಈ ವೇಳೆ ಗಾಯಾಳು ಆಟಗಾರರಿಗೆ ಬದಲಿ ಆಟಗಾರರನ್ನು ಹುಡುಕುವುದು ದೊಡ್ಡ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಮುಂಬೈ ಇಂಡಿಯನ್ಸ್‌ ಸಹ ದೊಡ್ಡ ಹೆಜ್ಜೆಯನ್ನು ಇಟ್ಟಿದೆ.

ಐಪಿಎಲ್ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಹಿನ್ನಡೆ ಆಗಿದೆ. ಹಾರ್ದಿಕ್ ಪಾಂಡ್ಯ ಮುಂದಾಳತ್ವದ ತಂಡಕ್ಕೆ ಗಾಯದ ಸಮಸ್ಯೆ ಬಹುವಾಗಿ ಕಾಡುತ್ತಿದೆ. ತಂಡದಲ್ಲಿ ಸ್ಥಾನ ಪಡೆದಿದ್ದ ಲಿಜಾದ್ ವಿಲಿಯಮ್ಸ್ ಗಾಯದ ಕಾರಣದಿಂದಾಗಿ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಲಿಜಾದ್ ಅವರನ್ನು ಮುಂಬೈ ತಂಡವು ಹರಾಜಿನಲ್ಲಿ 75 ಲಕ್ಷ ರೂ.ಗೆ ಖರೀದಿಸಿತ್ತು. ಈಗ ಮುಂಬೈ ಇಂಡಿಯನ್ಸ್‌ ತಂಡ ತನ್ನ ಬದಲಿ ಆಟಗಾರರನ್ನು ಘೋಷಣೆ ಮಾಡಿದೆ. ಇದರಿಂದ ತಂಡಕ್ಕೆ ಆನೆ ಬಲ ಬಂದಂತೆ ಆಗಿದೆ.

MI Replace Injured Lizad Williams with South African All-Rounder Corbin Bosch for IPL

ಮುಂಬೈ ಸೇರಿದ ಯುವ ಆಲ್‌ರೌಂಡರ್‌

ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಕಾರ್ಬಿನ್ ಬಾಷ್ ಅವರನ್ನು ತಂಡದಲ್ಲಿ ಸೇರಿಸಿಕೊಂಡಿದೆ. ಇವರು ಈಗಾಗಲೇ ಅಂಡರ್‌ 19 ವಿಶ್ವಕಪ್‌ ಗೆದ್ದ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರು ಐಸಿಸಿ ಅಂಡರ್ 19 ವಿಶ್ವಕಪ್‌ ಗೆದ್ದ ದಕ್ಷಿಣ ಆಫ್ರಿಕಾ ತಂಡದ ಸದಸ್ಯರಾಗಿದ್ದಾರೆ. ಇವರು ಫೈನಲ್‌ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ ಜಯದಲ್ಲಿ ಮಿಂಚಿದ್ದರು. ಇವರು ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ 15 ರನ್‌ ನೀಡಿ 4 ವಿಕೆಟ್‌ ಕಬಳಿಸಿದ್ದರು. ಇವರ ಉತ್ತಮ ಪ್ರದರ್ಶನದ ಫಲವಾಗಿ ಇವರಿಗೆ ಪದ್ಯ ಶ್ರೇಷ್ಠ ಪ್ರಶಸ್ತಿ ಸಹ ಲಭಿಸಿತ್ತು. ಇವರು ಈಗಾಗಲೇ ದಕ್ಷಿಣ ಆಫ್ರಿಕಾ ತಂಡದ ಪರ ಪದಾರ್ಪಣೆ ಮಾಡಿದ್ದಾರೆ. ಈ ಯುವ ಪ್ಲೇಯರ್‌ ಈಗ ಮುಂಬೈ ಇಂಡಿಯನ್ಸ್ ತಂಡದ ಪರ ಮಿಂಚಲು ರೆಡಿ ಯಾಗಿದ್ದಾರೆ.

ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಸಾಲು ಸಾಲು ಆಲ್‌ರೌಂಡರ್‌ಗಳು ಇದ್ದಾರೆ. ಲಿಜಾದ್ ವಿಲಿಯಮ್ಸ್ ಬದಲಿಗೆ ಈ ತಂಡವನ್ನು ಸೇರಿದ 7ನೇ ಆಲ್‌ರೌಂಡರ್‌ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಈ ತಂಡದಲ್ಲಿ ಈಗಾಗಲೇ ಹಾರ್ದಿಕ್ ಪಾಂಡ್ಯ ಸೇರಿದಂತೆ 6 ಆಲ್‌ರೌಂಡರ್‌ಗಳು ಇದ್ದಾರೆ. ಬಲಗೈ ಬ್ಯಾಟ್ಸ್‌ಮನ್ ಆಗಿ ಕಾಣಿಸಿಕೊಳ್ಳುವ ಕಾರ್ಬಿನ್ ಸ್ಥಿರ ಪ್ರದರ್ಶನ ನೀಡಿದ್ದಾರೆ.

MI Replace Injured Lizad Williams with South African All-Rounder Corbin Bosch for IPL

ಮುಂಬೈ ತಂಡ: ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ರಾಬಿನ್ ಮಿಂಜ್, ರಯಾನ್ ರಿಕಲ್ಟನ್, ಶ್ರೀಜಿತ್ ಕೃಷ್ಣನ್, ಬೆವೊನ್ ಜಾಕೋಬ್ಸ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ವಿಲ್ ಜಾಕ್ಸ್, ಮಿಚೆಲ್ ಸ್ಯಾಂಟ್ನರ್, ರಾಜ್ ಅಂಗದ್ ಬಾವಾ, ವಿಘ್ನೇಶ್ ಪುತ್ತೂರ್, ಟ್ರೆಂಟ್ ಬೌಲ್ಟ್, ಕರ್ಣ್ ಶರ್ಮಾ, ದೀಪಕ್ ಚಾಹರ್, ಅಶ್ವಿನಿ ಕುಮಾರ್, ರೀಸ್ ಟೋಪ್ಲಿ, ವೆಂಕಟ ಸತ್ಯನಾರಾಯಣ, ಅರ್ಜುನ್ ತೆಂಡೂಲ್ಕರ್, ಮುಜೀಬ್ ಉರ್ ರೆಹಮಾನ್, ಜಸ್ಪ್ರೀತ್ ಬುಮ್ರಾ, ಕಾರ್ಬಿನ್ ಬಾಷ್.

Story first published: Sunday, March 9, 2025, 10:50 [IST]
Other articles published on Mar 9, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+