MI vs CSK IPL 2025: ಮುಂಬೈ ಸವಾಲು ಎದುರಿಸಲಿದೆ ಚೆನ್ನೈ ಸೂಪರ್ ಕಿಂಗ್ಸ್
ಭಾನುವಾರ ಸೂಪರ್ ಸಂಡೆಯ ಮಜೆಯನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಹೆಚ್ಚಿಸಿದೆ. ಮೊದಲ ಪಂದ್ಯದಲ್ಲಿ ಬೆಂಗಳೂರು, ಪಂಜಾಬ್ ತಂಡಗಳ ಕಾದಾಟವನ್ನು ಅಭಿಮಾನಿಗಳು ಕಣ್ಣು ತುಂಬಿಕೊಂಡರೆ, ಎರಡನೇ ಪಂದ್ಯದಲ್ಲಿ ಐದು ಬಾರಿ ಚಾಂಪಿಯನ್ ತಂಡಗಳು ಫೈಟ್ ನಡೆಸಲಿವೆ. ಮುಂಬೈನ ವಾಂಖೇಡೆ ಅಂಗಳದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಗೆಲುವಿಗಾಗಿ ಹೋರಾಟ ನಡೆಯಲಿದೆ.
ಎರಡೂ ತಂಡಗಳು ಪ್ರಸಕ್ತ ಆವೃತ್ತಿಯ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿವೆ. ಮುಂಬೈ ಆಡಿದ 7 ಪಂದ್ಯಗಳಲ್ಲಿ 3 ಜಯ ಸಾಧಿಸಿದ್ದು, ಆರು ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಇನ್ನು ಚೆನ್ನೈ ಆಡಿದ 7 ಪಂದ್ಯಗಳಲ್ಲಿ 2 ಜಯ ಸಾಧಿಸಿದ್ದು, 4 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಪ್ಲೇ ಆಫ್ ರೇಸ್‌ನಲ್ಲಿ ಜೀವಂತವಾಗಿರಲು ಉಭಯ ತಂಡಗಳು ಕಾದಾಟ ನಡೆಸಲಿವೆ.

ಉಭಯ ತಂಡಗಳು ತಾವಾಡಿದ ಹಿಂದಿನ ಪಂದ್ಯಗಳಲ್ಲಿ ಗೆದ್ದಿವೆ. ಹೀಗಾಗಿ ಈ ಪಂದ್ಯ ಕುತೂಹಲ ಹೆಚ್ಚಿಸಿದೆ. ಸ್ಟಾರ್ ಆಟಗಾರರು ಲಯಕ್ಕೆ ಮರಳಿದ್ದು ತಂಡದ ಚಿಂತೆಯನ್ನು ದೂರ ಮಾಡಿದೆ. ಪಿಚ್ ಬ್ಯಾಟಿಂಗ್‌ಗೆ ಅನುಕೂಲಕಾರಿ ಎಂದು ನಂಬಲಾಗಿದೆ.
ಲಯಕ್ಕೆ ಮರಳಿರುವ ಸ್ಟಾರ್ಸ್
ಮುಂಬೈ ತಂಡದ ಸ್ಟಾರ್ ಬ್ಯಾಟರ್‌ಗಳು ಲಯಕ್ಕೆ ಮರಳಿದ್ದು ವಿಶ್ವಾಸ ಮೂಡಿಸಿದೆ. ಸೂರ್ಯಕುಮಾರ್ ಯಾದವ್ (265 ರನ್), ತಿಲಕ್ ವರ್ಮಾ (231 ರನ್), ರಿಯಾನ್ ರಿಕಲ್ಟನ್ (180 ರನ್) ರನ್ ಕಲೆ ಹಾಕಿದ್ದು ತಂಡದ ಚಿಂತೆಯನ್ನು ದೂರ ಮಾಡಿದೆ. ಆದರೆ ರೋಹಿತ್ ಶರ್ಮಾ ಇನ್ನು ಲಯಕ್ಕೆ ಮರಳದೇ ಇರುವುದು ಮ್ಯಾನೇಜ್ಮೆಂಟ್ ಚಿಂತೆಯನ್ನು ಹೆಚ್ಚಿಸಿದೆ. ಉಳಿದಂತೆ ಸ್ಟಾರ್ ಬ್ಯಾಟರ್‌ಗಳು ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಬೇಕಿದೆ.

ನಾಯಕ ಹಾರ್ದಿಕ್ ಪಾಂಡ್ಯ (11 ವಿಕೆಟ್) ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಇವರಿಗೆ ಟ್ರೆಂಟ್ ಬೌಲ್ಟ್ (6 ವಿಕೆಟ್) ಬಿಗುವಿನ ದಾಳಿ ನಡೆಸುತ್ತಿದ್ದಾರೆ. ದೀಪಕ್ ಚಹಾರ್ ಕಳೆದ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದರಿಂದ ಇವರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯಬಹುದು. ಇನ್ನು ಸ್ಪಿನ್ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದರೆ ಗೆಲುವು ಫಿಕ್ಸ್.
ಗೆಲುವೊಂದೆ ಟಾರ್ಗೆಟ್
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟರ್‌ಗಳು ತಮ್ಮ ನ್ಯೂನತೆಗಳನ್ನು ಮೆಟ್ಟಿನಿಂತು ಬ್ಯಾಟ್ ಮಾಡಬೇಕಿದೆ. ರಚಿನ್ ರವೀಂದ್ರ (186 ರನ್), ಶಿವಂ ದುಬೆ (180 ರನ್), ಮಹೇಂದ್ರ ಸಿಂಗ್ ಧೋನಿ (130 ರನ್) ರನ್ ಬಾರಿಸಿ ಭರವಸೆ ಮೂಡಿಸಿದ್ದಾರೆ. ಟಾಪ್ ಆರ್ಡರ್ ಬ್ಯಾಟರ್‌ಗಳು ತಮ್ಮ ಸ್ಥಿರ ಪ್ರದರ್ಶನ ಮುಂದುವರೆಸಬೇಕಿದೆ. ಚೆನ್ನೈ ತಂಡದ ಪರ ನೂರ್ ಅಹ್ಮದ್, ಖಲೀಲ್ ಅಹ್ಮದ್ ತಂಡಗಳು ವಿಕೆಟ್ ಪಡೆದು ಬೀಗುತ್ತಿದ್ದಾರೆ. ಉಳಿಂದತೆ ಸ್ಟಾರ್ ಬೌಲರ್‌ಗಳು ಬಿಗುವಿನ ದಾಳಿ ನಡೆಸಬೇಕಿದೆ ಅಂದಾಗ ಮಾತ್ರ ದೊಡ್ಡ ಗೆಲುವು ದಾಖಲಿಸಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications