MI vs CSK: ಮೂರನೇ ಗೆಲುವಿನ ಹುಡುಕಾಟದಲ್ಲಿ 5 ಬಾರಿಯ ಐಪಿಎಲ್ ಚಾಂಪಿಯನ್ಸ್
ದಾಖಲೆಯ ಐಪಿಎಲ್ ಚಾಂಪಿಯನ್‌ಗಳಾದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಹಾಗೂ ಮುಂಬೈ ಇಂಡಿಯನ್ಸ್ (ಎಂಐ) ಗುರುವಾರ 19ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್)ನ 33ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಉಭಯ ತಂಡಗಳು ಈ ಆವೃತ್ತಿಯಲ್ಲಿ ಚೇತೋಹಾರಿ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದು, ಒತ್ತಡದಲ್ಲಿವೆ. ಈ ಪಂದ್ಯ ಗೆದ್ದು ಅಂಕ ಪಟ್ಟಿಯಲ್ಲಿ ಏರಿಕೆ ಕಾಣುವ ಆಸೆ ಎರಡೂ ತಂಡಗಳದ್ದಾಗಿದೆ.
ಮುಂಬೈ ಹಾಗೂ ಸಿಎಸ್‌ಕೆ ಈ ಬಾರಿಯ ಐಪಿಎಲ್‌ನಲ್ಲಿ ಆಡಿದ 6 ಪಂದ್ಯಗಳಲ್ಲಿ 2 ಜಯ , 4 ಸೋಲು ಕಂಡಿವೆ. ಮುಂಬೈ ರನ್ ರೇಟ್ ಸಿಎಸ್‌ಕೆ ಉತ್ತಮವಾಗಿದ್ದು, ಏಳನೇ ಸ್ಥಾನದಲ್ಲಿದೆ. ಚೆನ್ನೈ 8ನೇ ಸ್ಥಾನದಲ್ಲಿದೆ. ಉಭಯ ತಂಡಗಳಿ ಈಗಾಗಲೇ ಐಪಿಎಲ್‌ನಲ್ಲಿ ಒಟ್ಟು 39 ಪಂದ್ಯಗಳಲ್ಲಿ ಕಾದಾಟ ನಡೆಸಿದ್ದು, ಸಿಎಸ್‌ಕೆ 18ರಲ್ಲಿ ಮುಂಬೈ 21 ರಲ್ಲಿ ಜಯ ಸಾಧಿಸಿದೆ. ಚೆನ್ನೈ ಕಳೆದ ಪಂದ್ಯದಲ್ಲಿ ಸೋಲು ಕಂಡಿದ್ದು, ಮುಂಬೈ ಹಿಂದಿನ ಪಂದ್ಯದಲ್ಲಿ ಜಯ ಸಾಧಿಸಿದೆ.

ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ಮುಂಬೈ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಗುರುವಾರ ಅಂಗಳಕ್ಕೆ ಇಳಿಯುತ್ತಾರಾ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಆರಂಭಿಕ ಕ್ವಿಂಟನ್ ಡಿಕಾಕ್ ಉತ್ತಮ ಲಯದಲ್ಲಿದ್ದು, ಇದೇ ಆಟವನ್ನು ಚೆನ್ನೈ ವಿರುದ್ಧ ಮುಂದುವರೆಸುವ ಅವಶ್ಯಕತೆ ಇದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ನಮನ್ ಧೀರ್ 32 ಎಸೆತಗಳಲ್ಲಿ 45 ರನ್ ಬಾರಿಸಿದ್ದು ಭರವಸೆ ಮೂಡಿಸಿದ್ದಾರೆ. ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದಿರುವುದು ತಂಡದ ಚಿಂತೆಯನ್ನು ದುಪ್ಪಟ್ಟು ಮಾಡಿದೆ.
ತಿಲಕ್ ಆಕರ್ಷಣೆ
ಮುಂಬೈ ಇಂಡಿಯನ್ಸ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ತಿಲಕ್ ವರ್ಮಾ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದರು. ಹೀಗಾಗಿ ಇವರ ಮೇಲೆ ಅಭಿಮಾನಿಗಳ ಕಣ್ಣು ನೆಟ್ಟಿದೆ. ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗುವ ಅನಿವಾರ್ಯತೆ ಇದೆ.
ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ ಈ ಆವೃತ್ತಿಯ ಮೊದಲ ವಿಕೆಟ್ ಗುಜರಾತ್ ವಿರುದ್ಧ ಪಡೆದಿದ್ದು, ಮೊದಲ ಓವರ್ ಚೆನ್ನೈ ವಿರುದ್ಧವೂ ಇವರೇ ಮಾಡುವ ಸಾಧ್ಯತೆ ಇದೆ. ಅಶ್ವನಿ ಕುಮಾರ್ ತಮ್ಮ ಬಿಗುವಿನ ದಾಳಿಯಿಂದ ಸಿಎಸ್‌ಕೆ ಬ್ಯಾಟರ್‌ಗಳನ್ನು ಕಾಡಬಲ್ಲರು. ವಿಲ್ ಜಾಕ್ಸ್ ತಂಡ ಸೇರಿದ್ದು, ಯಾರ ಬದಲಿಗೆ ಇವರಿಗೆ ಅವಕಾಶ ಸಿಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಧೋನಿ ಕಣಕ್ಕೆ?
ಈ ಬಾರಿಯ ಐಪಿಎಲ್‌ನಲ್ಲಿ ಇನ್ನು ಒಂದೇ ಒಂದು ಪಂದ್ಯವನ್ನು ಆಡದ ಮಹೇಂದ್ರ ಸಿಂಗ್ ಧೋನಿ, ಗುರುವಾರ ಕಣಕ್ಕೆ ಇಳಿಯುವ ಸಾಧ್ಯತೆ ಹೆಚ್ಚಿದೆ. ಆರಂಭಿಕರಾದ ಸಂಜು ಸ್ಯಾಮ್ಸನ್ ಹಾಗೂ ನಾಯಕ ರುತುರಾಜ್ ಗಾಯಕ್ವಾಡ್ ತಮ್ಮ ಕ್ಷಮತೆಗೆ ತಕ್ಕ ಆಟವನ್ನು ಆಡಬೇಕಿದೆ. ಆಯುಷ್ ಮಾತ್ರೆ ಗಾಯದ ಕಾರಣದಿಂದ ಲೀಗ್‌ನಿಂದ ಹೊರ ನಡೆದಿದ್ದು, ತಂಡಕ್ಕೆ ತುಂಬಲಾಗದ ನಷ್ಟವಾಗಿದೆ. ಮಧ್ಯಮ ಕ್ರಮಾಂಕದಲ್ಲಿ ಮ್ಯಾಥ್ಯೂ ಶಾರ್ಟ್, ಸರ್ಫರಾಜ್ ಖಾನ್, ಡೆವಾಲ್ಡ್ ಬ್ರೆವಿಸ್ ಸ್ಫೋಟಕ ಆಟವನ್ನು ಆಡಬೇಕಿದೆ.
ವೇಗದ ಬೌಲಿಂಗ್ ವಿಭಾಗದಲ್ಲಿ ಮುಕೇಶ್ ಚೌಧರಿ, ಅನ್ಶುಲ್ ಕಾಂಬೋಜ್, ಜೇಮಿ ಓವರ್‌ಟನ್ ತಮ್ಮ ಬಿಗುವಿನ ದಾಳಿಯ ಮೂಲಕ ಎದುರಾಳಿಗಳನ್ನು ಕಾಡಬಲ್ಲರು. ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ನೂರ್ ಅಹ್ಮದ್ ಕಮಾಲ್ ನಡೆಸಬೇಕಿದೆ. ಅಂದಾಗ ಮತ್ತೊಂದು ಗೆಲುವಿನ ಆಸೆ ನನಸಾಗುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications