MI vs CSK IPL 2024: ಮುಂಬೈ vs ಚೆನ್ನೈ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
ಭಾನುವಾರ, ಏಪ್ರಿಲ್ 14ರಂದು ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 29ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಮುಂಬೈ ಇಂಡಿಯನ್ಸ್ (ಎಂಐ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಗಳು ಕಾಳಗ ನಡೆಸುತ್ತಿವೆ.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ. ಹೀಗಾಗಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಗಮನಾರ್ಹವಾಗಿ, ಮುಂಬೈ ಇಂಡಿಯನ್ಸ್ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಎಂಎಸ್ ಧೋನಿ ಮಾಜಿ ನಾಯಕರಾಗಿ ಆಡುತ್ತಿದ್ದಾರೆ.
ಐಪಿಎಲ್ 2024ರಲ್ಲಿ ಸಿಎಸ್‌ಕೆ ತಂಡ ಆಡಿದ ಐದು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಗೆದ್ದಿದ್ದರೆ, ಎರಡು ಪಂದ್ಯಗಳನ್ನು ಸೋತಿದೆ. ಇನ್ನು ಮುಂಬೈ ಇಂಡಿಯನ್ಸ್ ತಂಡ ಆಡಿದ ಐದು ಪಂದ್ಯಗಳಲ್ಲಿ ಮೂರು ಪಂದ್ಯಗಳಲ್ಲಿ ಸೋತು, ಎರಡು ಪಂದ್ಯಗಳನ್ನು ಗೆದ್ದಿದೆ.

ಮುಂಬೈ ಇಂಡಿಯನ್ಸ್ ಮತ್ತು ಸಿಎಸ್‌ಕೆ ತಂಡಗಳ ಹೆಡ್-ಟು-ಹೆಡ್ ದಾಖಲೆ
ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಒಟ್ಟಾರೆ 36 ಬಾರಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ 20 ಬಾರಿ ಗೆಲುವು ಸಾಧಿಸಿದ್ದರೆ, ಸಿಎಸ್‌ಕೆ 16 ಗೆಲುವುಗಳನ್ನು ಹೊಂದಿದೆ.
ಮುಂಬೈ ಇಂಡಿಯನ್ಸ್ ಮತ್ತು ಸಿಎಸ್‌ಕೆ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ
ಐಪಿಎಲ್ 2024ರ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.
ಮುಂಬೈ ಇಂಡಿಯನ್ಸ್ ಮತ್ತು ಸಿಎಸ್‌ಕೆ ಆಡುವ 11ರ ಬಳಗ
ಚೆನ್ನೈ ಸೂಪರ್ ಕಿಂಗ್ಸ್: ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ನಾಯಕ), ಅಜಿಂಕ್ಯ ರಹಾನೆ, ಡ್ಯಾರಿಲ್ ಮಿಚೆಲ್, ಶಿವಂ ದುಬೆ, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಮುಸ್ತಾಫಿಜುರ್ ರೆಹಮಾನ್.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಮೊಹಮ್ಮದ್ ನಬಿ, ರೊಮಾರಿಯೊ ಶೆಫರ್ಡ್, ಶ್ರೇಯಸ್ ಗೋಪಾಲ್, ಜೆರಾಲ್ಡ್ ಕೊಯೆಟ್ಜಿ, ಜಸ್ಪ್ರೀತ್ ಬುಮ್ರಾ, ಆಕಾಶ್ ಮಧ್ವಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications