For Quick Alerts
ALLOW NOTIFICATIONS  
For Daily Alerts
 

ವಾಂಖೆಡೆಯಲ್ಲಿ ಮುಂಬೈ ಇಂಡಿಯನ್ಸ್‌ ಮಣಿಸಲು ಸಿಎಸ್‌ಕೆ ಭರ್ಜರಿ ಪ್ಲ್ಯಾನ್; ಸಂಭಾವ್ಯ ಪ್ಲೇಯಿಂಗ್ 11, ಪಿಚ್ ರಿಪೋರ್ಟ್‌

MI Vs CSK IPL 2026: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ (ಏಪ್ರಿಲ್‌ 23) ಸಂಜೆ ನಡೆಯುವ ಐಪಿಎಲ್‌ ಪಂದ್ಯದಲ್ಲಿ ಬದ್ಧ ವೈರಿಗಳಾದ ಮುಂಬೈ ಇಂಡಿಯನ್ಸ್‌ ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ ಮುಖಾಮುಖಿಯಾಗಲಿದೆ. ಹಾಗಾದ್ರೆ, ಪಿಚ್ ರಿಪೋರ್ಟ್‌, ಪ್ಲೇಯಿಂಗ್ 11 ಹೇಗಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಗುರುವಾರ ಸಂಜೆ ನಡೆಯುವ ಐಪಿಎಲ್‌ 2026ರ 33ನೇ ಪಂದ್ಯದಲ್ಲಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಬದ್ಧ ವೈರಿಗಳಾದ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ಈ ಪಂದ್ಯ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಮುಂಬೈನ ತವರು ಮೈದಾನದಲ್ಲಿ ನಡೆಯಲಿರುವ ಈ ಹೈ-ವೋಲ್ಟೇಜ್ ಕದನದಲ್ಲಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎನ್ನುವ ಕುತೂಹಲವೂ ಕೂಡ ಅಭಿಮಾನಿಗಳಲ್ಲಿ ಮನೆ ಮಾಡಿದೆ.

MI vs CSK IPL 2026 Wankhede Pitch Report Probable Playing 11 and Match Preview Know details

ಐದು ಬಾರಿ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿರುವ ಈ ಎರಡು ದಿಗ್ಗಜ ತಂಡಗಳ ನಡುವಿನ ಕದನ ಈಗ ಮತ್ತಷ್ಟು ಕುತೂಹಲ ಕೆರಳಿಸಿದೆ. ಇದಕ್ಕೆ ಮುಖ್ಯ ಕಾರಣವೆಂದರೆ, ಕಳೆದ ಸೋಮವಾರ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಮುಂಬೈ ಇಂಡಿಯನ್ಸ್ ಸತತ ಸೋಲಿನಿಂದ ಪಾರಾಗಿದೆ.

ಗೆಲುವಿನ ಲಯಕ್ಕೆ ಮರಳಿದ ಮುಂಬೈ

ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಈವರೆಗೆ ಆಡಿರುವ ಆರು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಮತ್ತಷ್ಟು ಮೇಲೆರುವ ಪ್ರಯತ್ನದಲ್ಲಿದೆ. ಅಲ್ಲದೆ, ಮುಂಬೈ ಮತ್ತೆ ಗೆಲುವಿನ ಲಯಕ್ಕೆ ಮರಳಿರುವುದು ಈ ಪಂದ್ಯದ ಜಿದ್ದಾಜಿದ್ದಿಯನ್ನು ಮತ್ತಷ್ಟು ಹೆಚ್ಚಿಸುವ ಲಕ್ಷಣಗಳು ಎದ್ದು ಕಾಣುತ್ತಿವೆ.

ಅಂಕಪಟ್ಟಿಯಲ್ಲಿ ಮೇಲೆರಲು ತೀವ್ರ ಪೈಪೋಟಿ

ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಸಹ ಆರು ಪಂದ್ಯಗಳನ್ನಾಡಿದ್ದು, ಇದರಲ್ಲಿ ಎರಡು ಗೆಲುವು, ನಾಲ್ಕು ಸೋಲುಗಳನ್ನು ಕಂಡಿದೆ. ಈ ಋತುವಿನ ಆರಂಭದ ಮೊದಲ ಮೂರು ಪಂದ್ಯಗಳಲ್ಲಿ ಸೋತಿದ್ದ ಸಿಎಸ್‌ಕೆ, ನಂತರ ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಭರ್ಜರಿ ಪುನರಾಗಮನ ಮಾಡಿತ್ತು. ಆದರೆ, ಎಸ್‌ಆರ್‌ಎಚ್‌ ವಿರುದ್ಧ ನಡೆದ ಇತ್ತೀಚಿನ ಪಂದ್ಯದಲ್ಲಿ 10 ರನ್‌ಗಳ ಅಂತರದಿಂದ ಸೋಲನುಭವಿಸಿತ್ತು. ಆದ್ದರಿಂದ ಇಂದಿನ ಪಂದ್ಯದಲ್ಲಿ ಎರಡೂ ತಂಡಗಳ ನಡುವೆ ಅಂಕಪಟ್ಟಿಯಲ್ಲಿ ಮೇಲೇರಲು ತೀವ್ರ ಪೈಪೋಟಿ ಏರ್ಪಟ್ಟಿದೆ.

ಮುಂಬೈ ವಾಂಖೆಡೆ ಪಿಚ್ ರಿಪೋರ್ಟ್‌

ಮುಂಬೈನ ವಾಂಖೆಡೆ ಕ್ರೀಡಾಂಗಣವು ಐಪಿಎಲ್ 2026ರಲ್ಲಿ ಈವರೆಗೆ ಮೂರು ಪಂದ್ಯಗಳಿಗೆ ಆತಿಥ್ಯ ವಹಿಸಿದೆ. ಇಲ್ಲಿನ ಮೊದಲ ಇನಿಂಗ್ಸ್‌ನ ಸರಾಸರಿ ಮೊತ್ತ ಸುಮಾರು 218 ರನ್ ಆಗಿದ್ದು, ಇದು ಬ್ಯಾಟಿಂಗ್‌ಗೆ ಎಷ್ಟು ಪೂರಕವಾಗಿದೆ ಎಂಬುದನ್ನು ತೋರಿಸುತ್ತದೆ. ಇಲ್ಲಿ ನಡೆದ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಚೇಸಿಂಗ್ ಮಾಡಿದ ತಂಡಗಳೇ ಗೆದ್ದಿವೆ. ರನ್‌ ಮಳೆಯೇ ಹರಿಯುವ ಈ ಮೈದಾನದಲ್ಲಿ ಬೃಹತ್ ಮೊತ್ತವನ್ನು ಕಾಯ್ದುಕೊಂಡು ಗೆಲವು ಸಾಧಿಸುವುದು ಅಷ್ಟು ಸುಲಭವಲ್ಲ. ಈ ಎರಡೂ ತಂಡಗಳಲ್ಲಿ ಸ್ಫೋಟಕ ಬ್ಯಾಟರ್‌ಗಳ ದಂಡೇ ಇರುವುದರಿಂದ, ರನ್ ವೇಗಕ್ಕೆ ಬ್ರೇಕ್ ಹಾಕಬೇಕೆಂದರೆ ಬೌಲರ್‌ಗಳು ಹೆಚ್ಚಿನ ಶ್ರಮ ಹಾಕಲೇಬೇಕಾಗುತ್ತದೆ.

ಮುಂಬೈ ಇಂಡಿಯನ್ಸ್ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ/ದನೀಶ್ ಮಾಲೆವಾರ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ನಮನ್ ಧೀರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ತಿಲಕ್ ವರ್ಮಾ, ಶೆರ್ಫೇನ್ ರುದರ್‌ಫೋರ್ಡ್, ಮಿಚೆಲ್ ಸ್ಯಾಂಟ್ನರ್, ಕ್ರಿಶ್ ಭಗತ್, ಜಸ್ಪ್ರೀತ್ ಬುಮ್ರಾ, ಎಂ ಘಜನ್‌ಫರ್. ಇಂಪ್ಯಾಕ್ಟ್ ಪ್ಲೇಯರ್- ಅಶ್ವಿನಿ ಕುಮಾರ್.

ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್, ಋತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಸರ್ಫರಾಜ್ ಖಾನ್, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಎಂ.ಎಸ್. ಧೋನಿ (ವಿಕೆಟ್ ಕೀಪರ್)/ಪ್ರಶಾಂತ್ ವೀರ್, ನೂರ್ ಅಹ್ಮದ್, ಜೇಮಿ ಓವರ್ಟನ್, ಸ್ಪೆನ್ಸರ್ ಜಾನ್ಸನ್/ಅಕೇಲ್ ಹೊಸೈನ್, ಅನ್ಶುಲ್ ಕಾಂಬೋಜ್. ಇಂಪ್ಯಾಕ್ಟ್ ಪ್ಲೇಯರ್- ಗುರ್ಜಪ್ನೀತ್ ಸಿಂಗ್.

ಒಟ್ಟನಲ್ಲಿ ಎರಡು ತಂಡಗಳು ಕೂಡ ಬ್ಯಾಟಿಂಗ್‌ನಲ್ಲಿ ಉತ್ತಮವಾಗಿದ್ದು, ಇಂದಿನ ಪಂದ್ಯದಲ್ಲಿ ಯಾವ ತಂಡ ಅಧಿಪತ್ಯ ಸಾಧಿಸಲಿದೆ ಎಂದು ಕಾದುನೋಡಬೇಕಿದೆ. ಈ ಹೋಲ್ಟೇಜ್ ಕದನ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7:30ಕ್ಕೆ ಆರಂಭವಾಗಲಿದ್ದು, ಅಭಿಮಾನಿಗಳು ಕಾತರದಿಂದ ಕಾದಿದ್ದಾರೆ.

Story first published: Thursday, April 23, 2026, 17:19 [IST]
Other articles published on Apr 23, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+