ಭಾನುವಾರ, ಏಪ್ರಿಲ್ 7ರಂದು ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 20ನೇ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
2024ರ ಐಪಿಎಲ್‌ನ ಸೂಪರ್ ಸಂಡೇ ದಿನದಂದು ಡಬಲ್-ಹೆಡರ್ ಪಂದ್ಯಗಳು ನಡೆಯಲಿದ್ದು, ಮಧ್ಯಾಹ್ನದ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡುತ್ತಿವೆ.

ಐಪಿಎಲ್ 2024ರಲ್ಲಿ ಇಲ್ಲಿಯವರೆಗೆ ಆಡಿದ ಮೂರು ಪಂದ್ಯಗಳಲ್ಲಿ ಒಂದೇ ಒಂದು ಗೆಲುವು ಸಾಧಿಸದ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಮ್ಮ ತವರು ಮೈದಾನದಲ್ಲಿ ಈ ಆವೃತ್ತಿಯ ಮೊದಲ ಗೆಲುವಿನ ಕನಸು ಕಾಣುತ್ತಿದೆ.
ಮುಂಬೈ ಇಂಡಿಯನ್ಸ್ ಹೊಸ ನಾಯಕ ಹಾರ್ದಿಕ್ ಪಾಂಡ್ಯ ಹ್ಯಾಟ್ರಿಕ್ ಸೋಲಿನಲ್ಲಿ ತಿರುಗೇಟು ನೀಡಲು ಹತಾಶರಾಗಿರುವುದರಿಂದ ಈ ವರ್ಷ ತಮ್ಮ ಗೆಲುವಿನ ಖಾತೆಯನ್ನು ತೆರೆಯುವ ಗುರಿಯನ್ನು ಮುಂಬೈ ಇಂಡಿಯನ್ಸ್ ಹೊಂದಿದೆ. ರೋಹಿತ್ ಶರ್ಮಾ ಬದಲಿಗೆ ನಾಯಕನಾಗಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಿದ ಬಳಿಕ ಅಭಿಮಾನಿಗಳಿಂದ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದಾರೆ.
ಹಾರ್ದಿಕ್ ಪಾಂಡ್ಯ 5 ಬಾರಿಯ ಚಾಂಪಿಯನ್ ತಂಡವನ್ನು ಮುನ್ನಡೆಸುವ ಒತ್ತಡವನ್ನು ಅನುಭವಿಸುತ್ತಿದ್ದು, ಅಭಿಮಾನಿಗಳ ಹೃದಯ ಗೆಲ್ಲಲು ಹಾರ್ದಿಕ್ ಪಾಂಡ್ಯ ಕೆಲ ಪಂದ್ಯಗಳನ್ನು ಗೆಲ್ಲಲೇಬೇಕು. ಇದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವಿನೊಂದಿಗೆ ಪ್ರಾರಂಭವಾಗುವ ನಿರೀಕ್ಷೆ ಇದೆ.

ಮತ್ತೊಂದೆಡೆ, ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಸ್ಥಿರ ಪ್ರದರ್ಶನ ನೀಡುತ್ತಿದೆ. ಐಪಿಎಲ್ 2024ರಲ್ಲಿ ಈವರೆಗೆ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಸೋಲು ಮತ್ತು ಒಂದು ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
ಬ್ಯಾಟಿಂಗ್‌ನಲ್ಲಿ ನಾಯಕ ರಿಷಭ್ ಪಂತ್ ಮತ್ತು ಡೇವಿಡ್ ವಾರ್ನರ್ ಹೊರತುಪಡಿಸಿ ಉಳಿದ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್‌ಗಳು ಸದ್ದು ಮಾಡಲು ವಿಫಲರಾಗಿದ್ದಾರೆ. ಮತ್ತೆ ಗೆಲುವಿನ ಹಳಿಗೆ ಮರಳಲು ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವು ಅನಿವಾರ್ಯವಾಗಿದೆ.
ಸ್ಥಳ ಮತ್ತು ದಿನಾಂಕ: ಐಪಿಎಲ್ 2024ರ ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವು ಭಾನುವಾರ, ಏಪ್ರಿಲ್ 7ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ಪಂದ್ಯದ ಸಮಯ: ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.
ಐಪಿಎಲ್ 2024ರ ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ಟಿಮ್ ಡೇವಿಡ್, ಜಸ್ಪ್ರೀತ್ ಬುಮ್ರಾ, ಪಿಯೂಷ್ ಚಾವ್ಲಾ, ಜೆರಾಲ್ಡ್ ಕೊಯೆಟ್ಜಿ, ಆಕಾಶ್ ಮಧ್ವಲ್, ಕ್ವೆನಾ ಮಫಕಾ.
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಭ್ ಪಂತ್ (ನಾಯಕ/ ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್ ಕುಮಾರ್, ರಸಿಖ್ ದಾರ್ ಸಲಾಂ, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್, ಜೇಕ್ ಫ್ರೇಸರ್ ಮೆಕ್‌ಗುರ್ಕ್.