For Quick Alerts
ALLOW NOTIFICATIONS  
For Daily Alerts
 

MI vs DC IPL 2024: ಮುಂಬೈ ಇಂಡಿಯನ್ಸ್‌ಗೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲು; ಟಾಸ್ ವರದಿ, ಆಡುವ 11ರ ಬಳಗ

ಭಾನುವಾರ, ಏಪ್ರಿಲ್ 7ರಂದು ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಾಡುತ್ತಿವೆ.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

MI vs DC IPL 2024 Mumbai Indians vs Delhi Capitals Match Toss Report And Playing 11

ಐಪಿಎಲ್ 2024ರಲ್ಲಿ ಇಲ್ಲಿಯವರೆಗೆ ಆಡಿದ ಮೂರು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಸೋಲುವ ಮೂಲಕ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದೀಗ ತಮ್ಮ ತವರು ಮೈದಾನದಲ್ಲಿ ಈ ಆವೃತ್ತಿಯ ಮೊದಲ ಗೆಲುವಿಗಾಗಿ ಎದುರು ನೋಡುತ್ತಿದೆ.

ಮತ್ತೊಂದೆಡೆ, ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಸ್ಥಿರ ಪ್ರದರ್ಶನ ನೀಡುತ್ತಿದ್ದು, ಐಪಿಎಲ್ 2024ರಲ್ಲಿ ಈವರೆಗೆ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಸೋಲು ಮತ್ತು ಒಂದು ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

MI vs DC IPL 2024 Mumbai Indians vs Delhi Capitals Match Toss Report And Playing 11

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಝೈ ರಿಚರ್ಡ್ಸನ್ ಮತ್ತು ಕುಮಾರ್ ಕುಶಾಗ್ರ ತಮ್ಮ ಮೊದಲ ಪಂದ್ಯ ಆಡುತ್ತಿದ್ದಾರೆ. ಹೀಗಾಗಿ ಮಿಚೆಲ್ ಮಾರ್ಷ್ ಹಾಗೂ ರಸಿಕ್ ದಾರ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಬೆಂಚ್ ಕಾಯಿಸಬೇಕಾಗಿದೆ.

ಮತ್ತೊಂದೆಡೆ, ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡದಲ್ಲಿ ನಮನ್ ಧೀರ್ ಬದಲಾಗಿ ತನ್ನ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್‌ಗೆ ವಾಪಸ್ಸಾಗಿದ್ದಾರೆ. ಕ್ವೇನ್ ಮಫಕಾ ಬದಲಿಯಾಗಿ ರೊಮಾರಿಯೋ ಶಫರ್ಡ್ ಮತ್ತು ಡೆವಾಲ್ಡ್ ಬ್ರೇವಿಸ್ ಬದಲಿಯಾಗಿ ಮೊಹಮ್ಮದ್ ನಬಿ ಆಡುವ 11ರ ಬಳಗಕ್ಕೆ ಸೇರಿಕೊಂಡಿದ್ದಾರೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ

ಐಪಿಎಲ್ 2024ರ ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.

ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಆಡುವ 11ರ ಬಳಗ

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಇಶಾನ್ ಕಿಶನ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ಟಿಮ್ ಡೇವಿಡ್, ಮೊಹಮ್ಮದ್ ನಬಿ, ರೊಮಾರಿಯೋ ಶೆಫರ್ಡ್, ಪಿಯೂಶ್ ಚಾವ್ಲಾ, ಜೆರಾಲ್ಡ್ ಕೋಯಟ್ಜಿ, ಜಸ್ಪ್ರೀತ್ ಬುಮ್ರಾ.

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್, ಪೃಥ್ವಿ ಶಾ, ಅಭಿಷೇಕ್ ಪೊರೆಲ್, ರಿಷಭ್ ಪಂತ್(ನಾಯಕ/ ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಜಾಯ್ ರಿಚರ್ಡ್ಸನ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್.

Story first published: Sunday, April 7, 2024, 15:13 [IST]
Other articles published on Apr 7, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+