ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೆಕೆಆರ್ ವಿರುದ್ಧ ಸೋಲು: ಬ್ಯಾಟರ್‌ಗಳ ಪ್ರದರ್ಶನವೇ ಹೊಣೆ ಸೋಲಿಗೆ ಕಾರಣ ಎಂದ ರೋಹಿತ್ ಶರ್ಮಾ

MI vs KKR: After big defeat against KKR Rohit Sharma upset with MI batting performance

ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಮತ್ತೊಂದು ಸೋಲು ಅನುಭವಿಸಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ವಿಭಾಗ ಮಿಂಚಿನ ಪ್ರದರ್ಶನ ನೀಡಿ ಎದುರಾಳಿಯನ್ನು ಕಟ್ಟಿ ಹಾಕಿದರೂ ಬ್ಯಾಟಿಂಗ್ ವಿಭಾಗ ನೀರಸ ಪ್ರದರ್ಶನ ನೀಡಿತು. ಇದರ ಪರಿಣಾಮವಾಗಿ ಮುಂಬೈ ಇಂಡಿಯನ್ಸ್ ತಂಡ ಆಡಿರುವ 11 ಪಂದ್ಯಗಳಲ್ಲಿ 9ನೇ ಸೋಲು ಅನುಭವಿಸಿದೆ.

ಈ ಸೋಲಿನ ಬಳಿಕ ನಾಯಕ ರೋಹಿತ್ ಶರ್ಮಾ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ತಂಡದ ಬ್ಯಾಟಿಂಗ್ ವಿಭಾಗದ ವೈಫಲ್ಯವನ್ನು ಸೋಲಿಗೆ ನೇರವಾಗಿ ಹೊಣೆ ಮಾಡಿದ್ದಾರೆ ರೋಹಿತ್ ಶರ್ಮಾ. " ಇಂತಾ ಪಿಚ್‌ನಲ್ಲಿ ಈ ಮೊತ್ತವನ್ನು ನಾವು ಯಾವ ದಿನವಾದರೂ ಬೆನ್ನಟ್ಟಬೇಕಾಗಿತ್ತು. ಬೌಲಿಂಗ್ ವಿಭಾಗದಲ್ಲಿದ ಪ್ರಯತ್ನ ಅಮೋಘವಾಗಿತ್ತು. ಬೂಮ್ರಾ ಅತ್ಯಂತ ವಿಶೇಷವಾಗಿದ್ದರು" ಎಂದು ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್‌ ದಾಳಿಯ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ ರೋಹಿತ್ ಶರ್ಮಾ.

"ಆದರೆ ನನಗೆ ಬೇಸರವಾಗಿದ್ದು ನಾವು ಬ್ಯಾಟಿಂಗ್ ಮಾಡಿದ ರೀತಿಯ ಬಗ್ಗೆ. ಈ ಪಿಚ್‌ನಲ್ಲಿ ಸುಲಭವಾಗಿ ಬೆನ್ನಟ್ಟಬಹುದಾಗ ಮೊತ್ತ ಇದು ಎಂದು ನಾನು ಭಾವಿಸಿದ್ದೆ. ಆದರೆ ನಮ್ಮ ಬ್ಯಾಟಿಂಗ್ ವಿಭಾಗ ಕೆಟ್ಟ ಪ್ರದರ್ಶನ ನೀಡಿತು. ನಾವು ಇಲ್ಲಿ ನಮ್ಮ ನಾಲ್ಕನೇ ಪಂದ್ಯವನ್ನು ಆಡುತ್ತಿದ್ದೇವೆ. ಹಾಗಿದ್ದಾಗ ಪಿಚ್ ಹೇಗೆ ವರ್ತಿಸುತ್ತದೆ ಎಂಬುದನ್ನು ನಾವು ಅರ್ಥೈಸಿಕೊಳ್ಳಬೇಕಾಗಿತ್ತು. ಕೆಲ ಎಸೆತಗಳನ್ನು ನಮ್ಮನನ್ಉ ಪಂದ್ಯದಿಂದ ಆಚೆಗೆ ತೆಗೆದುಕೊಂಡು ಹೋಗಿತ್ತು. ಆಟದಲ್ಲಿ ಇದೆಲ್ಲಾ ಸಂಭವಿಸುತ್ತದೆ" ಎಂದಿದ್ದಾರೆ ರೋಹಿತ್ ಶರ್ಮಾ.

"ಇಲ್ಲಿ ನಮ್ಮ ವೇಗದ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ನಾವು ಭಾವಿಸಿದ್ದೆವು. ಆದರೆ ನಾವು ಬ್ಯಾಟಿಂಗ್‌ನಲ್ಲಿ ಉತ್ತಮವಾಗಿ ಆಡಿಲ್ಲ. ನಮ್ಮಿಂದ ಉತ್ತಮ ಜೊತೆಯಾಟ ಬಂದಿಲ್ಲ. ಇಂದು ನಮ್ಮ ತಂಡ ಸೋಲು ಅದೇ ಕಾರಣವಾಯಿತು" ಎಂದಿದ್ದಾರೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ.

ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ 165 ರನ್‌ಗಳ ಸವಾಲಿನ ಮೊತ್ತವನ್ನು ಪೇರಿಸಿತ್ತು. ವೆಂಕಟೇಶ್ ಐಯ್ಯರ್, ನಿತೀಶ್ ರಾಣಾ ಅವರಿಂದ ಉತ್ತಮ ಬ್ಯಾಟಿಂಗ್ ಪ್ರದರ್ಶನ ಬಂದಿತ್ತು. ಉಳಿದಂತೆ ಬಹುತೇಕ ದಾಂಡಿಗರು ವೂಫಲ್ಯ ಅನುಭವಿಸಿದ್ದರು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೆಕೆಆರ್ ಈ ಸವಾಲಿನ ಗುರಿಯನ್ನು ನಿಗದಿಪಡಿಸಿತು. ಜಸ್ಪ್ರೀತ್ ಬೂಮ್ರಾ ಐದು ವಿಕೆಟ್‌ಗಳ ಗೊಂಚಲು ಪಡೆದರೆ ಕುಮಾರ್ ಕಾರ್ತಿಕೇಯ ಎರಡು ವಿಕೆಟ್ ಕಬಳಿಸಿದರು.

ಈ ಮೊತ್ತವನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಆರಂಬಿಕ ಆಘಾತವನ್ನು ಅನುಭವಿಸಿತು. ನಾಯಕ ರೋಹಿತ್ ಶರ್ಮಾ 2 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ತಿಲಕ್ ವರ್ಮಾ 6 ರನ್‌ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಆದರೆ ಇಶಾನ್ ಕಿಶನ್ ಮಾತ್ರ ಜವಾಬ್ಧಾರಿತಯುತ ಬ್ಯಾಟಿಂಗ್ ಮಾಡಿ ಅರ್ಧ ಶತಕಗಳಿಸಿದರು. ಆದರೆ ಮತ್ತೊಂದು ತುದಿಯಲ್ಲಿ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತ್ತು ಮುಂಬೈ ಇಂಡಿಯನ್ಸ್ ತಂಡ. ಅಂತಿಮವಾಗಿ 17.3 ಓವರ್‌ಗಳಲ್ಲಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿತ್ತು. ಈ ಮೂಲಕ 52 ರನ್‌ಗಳ ಅಂತರದ ಭಾರೀ ಸೋಲು ಅನುಭವಿಸಿತು.

ಪ್ಲೇಯಿಂಗ್ XI: ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ತಿಲಕ್ ವರ್ಮಾ, ಟಿಮ್ ಡೇವಿಡ್, ಕೀರಾನ್ ಪೊಲಾರ್ಡ್, ರಮಣದೀಪ್ ಸಿಂಗ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಕುಮಾರ್ ಕಾರ್ತಿಕೇಯ, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್
ಬೆಂಚ್: ಜಯದೇವ್ ಉನದ್ಕತ್, ಫ್ಯಾಬಿಯನ್ ಅಲೆನ್, ಬೇಸಿಲ್ ಥಂಪಿ, ಅನ್ಮೋಲ್ಪ್ರೀತ್ ಸಿಂಗ್, ಸಂಜಯ್ ಯಾದವ್, ಮಯಾಂಕ್ ಮಾರ್ಕಂಡೆ, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ರಾಹುಲ್ ಬುದ್ಧಿ, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್

ಅಷ್ಟು ವಿಕೆಟ್ ತೆಗೆದ್ರೂ ಗೆಲುವು ಸಿಗಲಿಲ್ವಲ್ಲಾ? ಮ್ಯಾನ್ ಆಫ್ ದಿ ಮ್ಯಾಚ್ ಪಡೆದ ಬುಮ್ರಾ ಮಾತು | Oneindia Kannada

ಕೊಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಟಿಮ್ ಸೌಥಿ, ವರುಣ್ ಚಕ್ರವರ್ತಿ
ಬೆಂಚ್: ಉಮೇಶ್ ಯಾದವ್, ಮೊಹಮ್ಮದ್ ನಬಿ, ಸ್ಯಾಮ್ ಬಿಲ್ಲಿಂಗ್ಸ್, ಚಾಮಿಕಾ ಕರುಣಾರತ್ನೆ, ಪ್ರಥಮ್ ಸಿಂಗ್, ಅಭಿಜೀತ್ ತೋಮರ್, ಅಮನ್ ಹಕೀಮ್ ಖಾನ್, ಅಶೋಕ್ ಶರ್ಮಾ, ರಮೇಶ್ ಕುಮಾರ್, ಬಾಬಾ ಇಂದ್ರಜಿತ್, ಆರೋನ್ ಫಿಂಚ್, ಅನುಕುಲ್ ರಾಯ್, ಹರ್ಷಿತ್ ರಾಣಾ, ಶಿವಂ ಮಾವಿ

Story first published: Tuesday, May 10, 2022, 9:20 [IST]
Other articles published on May 10, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X