Arjun Tendulkar debut: ಕಡೆಗೂ ಐಪಿಎಲ್‌ನಲ್ಲಿ ಪದಾರ್ಪಣೆ ಮಾಡಿದ ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್
ಕಳೆದ ಎರಡು ಐಪಿಎಲ್ ಆವೃತ್ತಿಗಳಲ್ಲಿ ಮುಂಬೈ ಇಂಡಿಯನ್ಸ್ ಪರ ಬೆಂಚ್ ಕಾದಿದ್ದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಕಡೆಗೂ ಐಪಿಎಲ್‌ನಲ್ಲಿ ಪದಾರ್ಪಣೆ ಮಾಡಿದ್ದಾರೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ ಮಾಡಿದ್ದು ತಮ್ಮ ಕನಸು ನನಸಾಗಿಸಿಕೊಂಡಿದ್ದಾರೆ.
ಅರ್ಶದ್ ಖಾನ್ ಬದಲಿಗೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಆಡುವ ಬಳಗದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ ಅರ್ಜುನ್ ತೆಂಡೂಲ್ಕರ್. ಅವರಿಗೆ ತಂಡದ ನಾಯಕ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ಕ್ಯಾಪ್ ನೀಡಿ ಸ್ವಾಗತಿಸಿದರು. 2022ರ ಐಪಿಎಲ್ ಟೂರ್ನಿಗೂ ಮುನ್ನ ನಡೆದ ಮೆಗಾ ಹರಾಜಿನಲ್ಲಿ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ 30 ಲಕ್ಷಕ್ಕೆ ತಂಡಕ್ಕೆ ಸೇರ್ಪಡೆಗೊಳಿಸಿತ್ತು. ಅದಕ್ಕೂ ಹಿಂದಿನ ಆವೃತ್ತಿ 2021ರಲ್ಲಿ ಅರ್ಜುನ್ ತೆಂಡೂಲ್ಕರ್ 20 ಲಕ್ಷ ಮೂಲ ಬೆಲೆಗೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದರು.

ಎರಡು ಆವೃತ್ತಿಯಲ್ಲಿ ನಿರಾಸೆ ಅನುಭವಿಸಿದ್ದ ಅರ್ಜುನ್
2021ರ ಐಪಿಎಲ್‌ನಲ್ಲಿ ದುಬೈನಲ್ಲಿ ನಡೆದ ದ್ವಿತಿಯಾರ್ಧದಲ್ಲಿ ಅರ್ಜುನ್ ತೆಂಡೂಲ್ಕರ್ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದರು. ಆ ಆವೃತ್ತಿಯಲ್ಲಿ ಒಂದು ಪಂದ್ಯದಲ್ಲಿಯೂ ಆಡುವ ಅವಕಾಶ ಪಡೆದುಕೊಂಡಿರಲಿಲ್ಲ. ಇನ್ನು ಕಳೆದ ವರ್ಷದ ಆವೃತ್ತಿಯಲ್ಲಿ ಮತ್ತೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೇರ್ಪಡೆಗೊಂಡಿದ್ದರೂ ಮತ್ತೆ ಅರ್ಜುನ್ ನಿರಾಸೆ ಅನುಭವಿಸಿದ್ದರು. ಆದರೆ ಈ ಬಾರಿಯ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಲ್ಕನೇ ಪಂದ್ಯದಲ್ಲಿ ಅರ್ಜುನ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ದೇಶೀಯ ಕ್ರಿಕೆಟ್‌ನಲ್ಲಿ ಮಿಂಚಿನ ಪ್ರದರ್ಶನ
ಇನ್ನು ಅರ್ಜುನ್ ತೆಂಡೂಲ್ಕರ್ ದೇಶೀಯ ಕ್ರಿಕೆಟ್‌ನಲ್ಲಿ ಈಗಾಗಲೇ ಪದಾರ್ಪಣೆ ಮಾಡಿದ್ದು ಕೆಲ ಗಮನಾರ್ಹ ಪ್ರದರ್ಶನಗಳ ಮೂಲಕ ಮಿಂಚಿದ್ದಾರೆ. ಆರಂಭದಲ್ಲಿ ಮುಂಬೈ ಪರವಾಗಿ ದೇಶೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಅರ್ಜುನ್ ಬಳಿಕ ಗೋವಾ ತಂಡಕ್ಕೆ ಸೇರಿಕೊಂಡಿದ್ದು ಕಳೆದ ಋತುವಿಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಬೌಲಿಂಗ್‌ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್‌ನಲ್ಲಿಯೂ ಅರ್ಜುನ್ ಮಿಂಚಿದ್ದು ಗಮನಾರ್ಹ.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್
ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅನಾರೋಗ್ಯದ ಕಾರಣ ಆಡುವ ಬಳಗದಿಂದ ಹೊರಗುಳಿದಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್‌ಗೆ ತಂಡವನ್ನು ಮುನ್ನಡೆಸುವ ಜವಾಬ್ಧಾರಿ ದೊರೆತಿದೆ.
Pak Vs NZ: ಬಾಬರ್ ಅಜಂ ಶತಕ : ಎರಡನೇ ಪಂದ್ಯದಲ್ಲೂ ಭರ್ಜರಿ ಗೆಲುವು ಸಾಧಿಸಿದ ಪಾಕಿಸ್ತಾನ
ಇತ್ತಂಡಗಳ ಆಡುವ ಬಳಗ
ಮುಂಬೈ ಇಂಡಿಯನ್ಸ್ ಆಡುವ ಬಳಗ: ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಟಿಮ್ ಡೇವಿಡ್, ನೆಹಾಲ್ ವಧೇರಾ, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಡುವಾನ್ ಜಾನ್ಸೆನ್, ರಿಲೆ ಮೆರೆಡಿತ್
ಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಎನ್ ಜಗದೀಸನ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications